Homeಮುಖಪುಟಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಸನ್ನಡತೆಯ ಆಧಾರದಲ್ಲಿ 11 ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ, ಕೇಂದ್ರದ ಒಪ್ಪಿಗೆಯೂ ಸಿಕ್ಕಿದೆ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಗುಜರಾತ್‌ ಸರ್ಕಾರ ತಿಳಿಸಿದೆ.

- Advertisement -
- Advertisement -

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ಆದರೆ ಮೇ 13, 2022ರಂದು ಸುಪ್ರೀಂಕೋರ್ಟ್ ಅಪರಾಧಿಗಳಲ್ಲಿ ಒಬ್ಬರು ಸಲ್ಲಿಸಿದ ಮನವಿಯನ್ನು ‌ಪರಿಶೀಲಿಸುತ್ತಾ, “ಸೂಕ್ತ ಸರ್ಕಾರ” ತೆಗೆದುಕೊಳ್ಳಲು ಸರ್ಕಾರಕ್ಕೆ ತಿಳಿಸಿತ್ತು.

ಗುಜರಾತ್ ಸರ್ಕಾರದ ಅಫಿಡವಿಟ್‌ನಲ್ಲಿ 1992ರ ನೀತಿಯನ್ನು ಉಲ್ಲೇಖಿಸಲಾಗಿದೆ. “ಈ ನೀತಿಯ ಪ್ರಕಾರ ಜೈಲಿನ ಇನ್ಸ್‌ಪೆಕ್ಟರ್ ಜನರಲ್ ರವರು ಅಪರಾಧಿಯನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಜಿಲ್ಲಾ ಪೊಲೀಸ್ ಅಧಿಕಾರಿ, ಜಿಲ್ಲಾ ಮ್ಯಾಜಿಸ್ಟ್ರೇಟ್, ಜೈಲು ಅಧೀಕ್ಷಕರು ಮತ್ತು ಸಲಹಾ ಮಂಡಳಿ ಸಮಿತಿಯ ಅಭಿಪ್ರಾಯವನ್ನು ಪಡೆಯುವುದು ಕಡ್ಡಾಯವಾಗಿದೆ. ಅದರ ನಂತರ, ಜೈಲಿನ ಇನ್ಸ್‌ಪೆಕ್ಟರ್ ಜನರಲ್ ಅವರು ನಾಮಮಾತ್ರ ಪಟ್ಟಿಯ ಪ್ರತಿ ಮತ್ತು ತೀರ್ಪಿನ ಪ್ರತಿಯೊಂದಿಗೆ ತಮ್ಮ ಅಭಿಪ್ರಾಯವನ್ನು ನೀಡುವುದಕ್ಕಾಗಿ ಸರ್ಕಾರಕ್ಕೆ ಶಿಫಾರಸನ್ನು ಕಳುಹಿಸಲು ಕಡ್ಡಾಯ. ಇದಲ್ಲದೆ ಅಕಾಲಿಕ ಬಿಡುಗಡೆಯ ಅರ್ಜಿಯ ಪರಿಗಣನೆಯ ಸಮಯದಲ್ಲಿ ಜೈಲ್ ಸಲಹಾ ಮಂಡಳಿಯು 1992ರ ನೀತಿಯನ್ನು ಅನುಸರಿಸುತ್ತದೆ” ಎಂದು ಸರ್ಕಾರ ತಿಳಿಸಿದೆ.

ಸರ್ಕಾರವು ಹಲವಾರು ಅಧಿಕಾರಿಗಳ ಅಭಿಪ್ರಾಯವನ್ನು ಕೇಳಿದ ಬಳಿಕ ನಿರ್ಧಾರ ಪ್ರಕಟಿಸಿರುವುದಾಗಿ ತಿಳಿಸಿದೆ. ಪೊಲೀಸ್ ಸೂಪರಿಂಟೆಂಡೆಂಟ್, ಸಿಬಿಐ, ವಿಶೇಷ ಅಪರಾಧ ವಿಭಾಗ (ಮುಂಬೈ); ಗ್ರೇಟರ್ ಬಾಂಬೆಯ ವಿಶೇಷ ಸಿವಿಲ್ ನ್ಯಾಯಾಧೀಶರು (CBI), ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್; ದಾಹೋದ್ ಪೊಲೀಸ್ ಸೂಪರಿಂಟೆಂಡೆಂಟ್; ದಾಹೋದ್‌ನ ಕಲೆಕ್ಟರ್ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ; ಗೋಧ್ರಾ ಉಪ-ಜೈಲಿನ ಜೈಲ್ ಸೂಪರಿಂಟೆಂಡೆಂಟ್, ಜೈಲು ಸಲಹಾ ಸಮಿತಿ; ಅಹಮದಾಬಾದ್‌ ಜೈಲುಗಳ ಹೆಚ್ಚುವರಿ ಡೈರೆಕ್ಟರ್ ಜನರಲ್ ಅವರ ಅಭಿಪ್ರಾಯಗಳನ್ನು ಬಿಡುಗಡೆಯ ಮೊದಲು ಕೇಳಲಾಗಿದೆ. ಮೊದಲ ಇಬ್ಬರನ್ನು ಹೊರತುಪಡಿಸಿ, ಉಳಿದವರೆಲ್ಲರೂ ಅವರ ಬಿಡುಗಡೆಗೆ ಶಿಫಾರಸು ಮಾಡಿದ್ದಾರೆ ಎಂದು ಸರ್ಕಾರ ಹೇಳಿದೆ.

ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲಾಗಿರುವುದರಿಂದ, ರಾಜ್ಯವು ತನ್ನ ಶಿಫಾರಸನ್ನು ಕೇಂದ್ರಕ್ಕೆ ಸಲ್ಲಿಸಿದೆ. “ಕೇಂದ್ರವು 11 ಕೈದಿಗಳನ್ನು ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದೆ” ಎಂದು 11.07.2022ರ ಪತ್ರವನ್ನು ಅಫಡವಿಟ್‌ನಲ್ಲಿ ಸಲ್ಲಿಸಲಾಗಿದೆ.

“…ರಾಜ್ಯ ಸರ್ಕಾರವು ಎಲ್ಲಾ ಅಭಿಪ್ರಾಯಗಳನ್ನು ಪರಿಗಣಿಸಿದೆ. 11 ಕೈದಿಗಳು ಜೈಲಿನಲ್ಲಿ 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದ ಕಾರಣ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ” ಎಂದು ಸಮರ್ಥಿಸಿಕೊಂಡಿದೆ.

ಸರ್ಕಾರವು ತನ್ನ 1992ರ ನೀತಿಯ ಪ್ರಕಾರ ಕೈದಿಗಳನ್ನು ಬಿಡುಗಡೆ ಮಾಡಿದೆ ಹೊರತು, ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಕೈದಿಗಳಿಗೆ ನೀಡಿದ ಉಪಶಮನದ ನಿರ್ಣಯದಿಂದ ಅಲ್ಲ ಎಂದು ಸ್ಪಷ್ಟಪಡಿಸಿದೆ.

ಗೋಧ್ರಾ ನಂತರದ ಗಲಭೆಗಳ ಸಂದರ್ಭದಲ್ಲಿ ದಹೋದ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಮಾರ್ಚ್ 3, 2002 ರಂದು ಜನಸಮೂಹದಿಂದ ಹತ್ಯೆಗೀಡಾದ 14 ಮಂದಿಯಲ್ಲಿ ಬಿಲ್ಕಿಸ್ ಅವರ ಮೂರು ವರ್ಷದ ಮಗಳು ಸಲೇಹಳೂ ಸೇರಿದ್ದರು. ಆ ಸಮಯದಲ್ಲಿ ಬಿಲ್ಕಿಸ್ ಗರ್ಭಿಣಿಯಾಗಿದ್ದರು.

ಈ ವರ್ಷದ ಆಗಸ್ಟ್ 15ರಂದು ಗುಜರಾತ್ ಸರ್ಕಾರವು 2008ರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾದ ಪ್ರಕರಣದ ಎಲ್ಲಾ 11 ಅಪರಾಧಿಗಳನ್ನು ಬಿಡುಗಡೆ ಮಾಡಿತು.

ಸಿಪಿಐ(ಎಂ) ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್ ಮತ್ತು ಶಿಕ್ಷಣತಜ್ಞೆ ರೂಪ್ ರೇಖಾ ವರ್ಮಾ, ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಬಿಲ್ಕಿಸ್ ಬಾನೋ ಪ್ರಕರಣದ ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿದ ಎರಡು ಅರ್ಜಿಗಳ ಆಧಾರದಲ್ಲಿ ಸುಪ್ರೀಂಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು. ಕೇಂದ್ರ ಸರ್ಕಾರದ ಅನುಮತಿ ಇಲ್ಲದೆಯೇ ಕ್ರಮ ಜರುಗಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದಕ್ಕಿಂತಲೂ ದುಃಕಕರವಾದ ಮತ್ತು ಹೀನಾಯವಾದ ಸಂಗತಿ ಮತ್ತೊಂದು ಇರಲಾರದು. ಪ್ರಬುತ್ವ ಜಾತಿ, ಜನಾಂಗ, ದರ್ಮಗಳ ನಡುವೆ ತಾರತಮ್ಯವನ್ನು ಮಾಡಬಾರದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...