Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ

- Advertisement -
- Advertisement -

2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ನಡೆದ ಅತ್ಯಾಚಾರ ಮತ್ತು ಅವರ ಕುಟುಂಬವನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಒಕ್ಕೂಟ ಸರ್ಕಾರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದಾರೆ. ಅಪರಾಧಿಗಳ ಬಿಡುಗಡೆಗೆ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಒಪ್ಪಿಗೆ ನೀಡಿತ್ತು ಎಂದು ಗುಜರಾತ್ ಸರ್ಕಾರವು ಸುಪ್ರಿಂಕೋರ್ಟ್‌ನಲ್ಲಿ ಹೇಳಿದ್ದು, ಇದರ ನಂತರ ವಿರೋಧ ಪಕ್ಷಗಳು ಮೋದಿ ನೇತೃತ್ವದ ಸರ್ಕಾರ ಮೇಲೆ ವಾಗ್ದಾಳಿ ನಡೆಸುತ್ತಿವೆ.

ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಅತ್ಯಾಚಾರಿಗಳ ಬಿಡುಗಡೆಯನ್ನು ಸಮರ್ಥಿಸಿಕೊಂಡ ಧಾರವಾಡ ಸಂಸದರೂ ಆಗಿರುವ ಪ್ರಹ್ಲಾದ್ ಜೋಶಿ,“ಇದು ಸರ್ಕಾರ ಮತ್ತು ಸಂಬಂಧಪಟ್ಟವರು ತೆಗೆದುಕೊಂಡ ನಿರ್ಧಾರ. ಇದು ಕಾನೂನಿನ ಪ್ರಕ್ರಿಯೆಯಾಗಿರುವುದರಿಂದ ನನಗೆ ಅದರಲ್ಲಿ ಯಾವುದೇ ತಪ್ಪು ಕಂಡುಬಂದಿಲ್ಲ” ಎಂದು ಎನ್‌ಡಿಟಿವಿ ಜೊತೆಗೆ ಮಾತನಾಡುತ್ತಾ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜೈಲಿನಲ್ಲಿ ‘ಸಾಕಷ್ಟು ಸಮಯ’ ಕಳೆದ ಅಪರಾಧಿಗಳನ್ನು, ಬಿಡುಗಡೆ ಮಾಡುವ ‘ಕಾನೂನು’ ಇದೆ. ಈ ಕಾನೂನಿನ ಪ್ರಕಾರ ಅವರನ್ನು ಬಿಡುಗಡೆ ಮಾಡಲಾಗುತ್ತದೆ” ಎಂದು ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಒಪ್ಪಿದ ಮೋದಿ ಸರ್ಕಾರ; ಏನೇನಾಯ್ತು ಈ ವರೆಗೆ? | ಸಂಕ್ಷಿಪ್ತ ವರದಿ

ಘೋರ, ಹೇಯ ಮತ್ತು ಗಂಭೀರ ಅಪರಾಧ ಎಂದು ಸಿಬಿಐ ಕರೆದಿರುವ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ವ್ಯಕ್ತವಾದ ಆಕ್ರೋಶಕ್ಕೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ಗುಜರಾತ್‌ ಸರ್ಕಾರ ಹೇಳಿದ್ದ ‘ಉತ್ತಮ ನಡವಳಿಕೆ’ ವಾದವನ್ನು ಪುನರುಚ್ಚರಿಸಿದರು.

“ಕೆಲವು ಕಾಲ ಜೈಲಿನಲ್ಲಿದ್ದ ನಂತರ, ಅವರ ನಡವಳಿಕೆಯ ಬಗ್ಗೆ … ಹಲವಾರು ಘಟನೆಗಳು ಇವೆ, ನಾನು ಅದರ ಬಗ್ಗೆ ಮಾತನಾಡಲು ಬಯಸುವುದಿಲ್ಲ” ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಜೂನ್‌ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಕೂಡಾ ಅಪರಾಧಿಗಳ ಬಿಡುಗಡೆಯನ್ನು ಬೆಂಬಲಿಸಿದ್ದಾರೆ. “ರಾಜ್ಯ ಸರ್ಕಾರವು ಕೈದಿಗಳನ್ನು ಉತ್ತಮ ನಡವಳಿಕೆಗಾಗಿ ಬಿಡುಗಡೆ ಮಾಡುವ ಅಧಿಕಾರವನ್ನು ಹೊಂದಿದೆ. ಇದನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ತೋರಿಸಲಾಗುತ್ತಿದೆ ಎಂದು ನಾನು ನಂಬುತ್ತೇನೆ. ಯಾವುದೇ ಅಪರಾಧಿಯು ಅವರ ಕೃತ್ಯಗಳಿಗೆ ಶಿಕ್ಷೆಗೆ ಅರ್ಹರು” ಎಂದು ಹಾರ್ದಿಕ್ ಪಟೇಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆಗೆ ಕೇಂದ್ರದಿಂದ ಅನುಮೋದನೆ: ಗುಜರಾತ್‌ ಸರ್ಕಾರದ ಅಫಿಡವಿಟ್‌ನಲ್ಲಿ ಉಲ್ಲೇಖ

ಪ್ರಹ್ಲಾದ್ ಜೋಶಿ ಮತ್ತು ಹಾರ್ದಿಕ್ ಪಟೇಲ್ ಅವರೊಂದಿಗೆ ಪ್ರಚಾರ ಮಾಡುತ್ತಿದ್ದ ಮತ್ತೊಬ್ಬ ಬಿಜೆಪಿ ನಾಯಕ ಅಲ್ಪೇಶ್ ಠಾಕೋರ್ ಮಾತ್ರ ಅಪರಾಧಿಗಳ ಬಿಡುಗಡೆಯನ್ನು ಬೆಂಬಲಿಸದೆ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಅಪರಾಧಿಗಳನ್ನು ಮುಕ್ತಗೊಳಿಸುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

“ಇದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಅಂತಹ ವ್ಯಕ್ತಿಗಳನ್ನು ಬಿಡುಗಡೆ ಮಾಡಲು ಕೇವಲ ಉತ್ತಮ ನಡವಳಿಕೆಯು ಸಾಕಾಗುವುದಿಲ್ಲ. ಅವರು ಜೈಲಿನಿಂದ ಹೊರ ಬಂದಾಗ ಅವರಿಗೆ ಸಿಹಿತಿಂಡಿ ನೀಡಿರುವುದು ನಾಚಿಕೆಗೇಡಿನ ಸಂಗತಿ” ಎಂದು ಠಾಕೋರ್‌ ತಿಳಿಸಿದ್ದಾರೆ.-

14 ವರ್ಷಗಳ ಕಾಲ ಜೈಲಿನಲ್ಲಿದ್ದ ಕಾರಣ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ; ಅವರ ನಡವಳಿಕೆಯು ಒಳ್ಳೆಯದು ಎಂದು ಕಂಡುಬಂದಿದ್ದು ಮತ್ತು ಕೇಂದ್ರವು ಅದನ್ನು ಅನುಮೋದಿಸಿತು ಎಂದು ಹೇಳಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೋ ಪ್ರಕರಣ: ಕೊಲೆ, ಅತ್ಯಾಚಾರದಂತಹ ಹೀನಕೃತ್ಯ ಎಸಗಿದವರಿಗೆ ಕ್ಷಮಾದಾನ ಸರಿಯೇ?

ರಾಷ್ಟ್ರವ್ಯಾಪಿ ಆಕ್ರೋಶದ ನಡುವೆ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಅಪರಾಧಿಗಳು ಬಿಡುಗಡೆಯಾಗಿದ್ದು, ಗುಜರಾತಿನ ಜೈಲಿನ ಹೊರಗೆ ಹೂಮಾಲೆ ಹಾಕಿ ಸಿಹಿ ಹಂಚಿ ಅವರನ್ನು ಸ್ವಾಗತಿಸಲಾತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...