ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನವೆಂಬರ್ 9 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಸೋಮವಾರ ತಿಳಿಸಿದ್ದಾರೆ. ನವೆಂಬರ್ 8 ರಂದು ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರು ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಶಿಫಾರಸು ಮಾಡಿದ್ದಾರೆ.
ನ್ಯಾಯಮೂರ್ತಿ ಲಲಿತ್ 74 ದಿನಗಳ ಸಂಕ್ಷಿಪ್ತ ಅಧಿಕಾರಾವಧಿಯನ್ನು ಹೊಂದಿದ್ದರೆ, ನ್ಯಾಯಮೂರ್ತಿ ಚಂದ್ರಚೂಡ್ ಅವರು ಎರಡು ವರ್ಷಗಳ ಕಾಲ ಸಿಜೆಐ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಾ. ಜಸ್ಟಿಸ್ ಡಿ.ವೈ. ಚಂದ್ರಚೂಡ್ ಅವರನ್ನು 2022ರ ನವೆಂಬರ್ 9 ರಿಂದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡುತ್ತಾರೆ” ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.
Extending my best wishes to Justice DY Chandrachud for the formal oath taking ceremony on 9th Nov. https://t.co/awrT3UMrFy pic.twitter.com/Nbd1OpEnnq
— Kiren Rijiju (@KirenRijiju) October 17, 2022
ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು 2016ರ ಮೇ 13 ರಂದು ಸುಪ್ರೀಂಕೋರ್ಟ್‌ಗೆ ಭಡ್ತಿ ನೀಡಲಾಗಿತ್ತು. ಅವರು ಪ್ರಸ್ತುತ ನ್ಯಾಯಮೂರ್ತಿ ಲಲಿತ್ ನಂತರ ಅತ್ಯಂತ ಹಿರಿಯ ಸುಪ್ರೀಂಕೋರ್ಟ್ ನ್ಯಾಯ ಮೂರ್ತಿಯಾಗಿದ್ದಾರೆ.
ಇದನ್ನೂ ಓದಿ: ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ
ಸುಪ್ರೀಂಕೋರ್ಟ್‌ಗೆ ನೇಮಕಗೊಳ್ಳುವ ಮೊದಲು 2013 ಅಕ್ಟೋಬರ್ 31 ರಿಂದ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಅಷ್ಟೆ ಅಲ್ಲದೆ ಅವರು ಮಾರ್ಚ್ 2000 ರಿಂದ ಅಕ್ಟೋಬರ್ 2013 ರವರೆಗೆ ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು. 1998-2000 ಅವಧಿಯಲ್ಲಿ ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿದ್ದರು.


