Homeಮುಖಪುಟರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಭಾರಿ ಬಹುಮತದಿಂದ ಆಯ್ಕೆ

- Advertisement -
- Advertisement -

ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ನಿರೀಕ್ಷೆಯಂತೆ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಬುಧವಾರ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ.

ಪಕ್ಷದ ಹೊಸ ಅಧ್ಯಕ್ಷರನ್ನು ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌ ಅಭಿನಂದಿಸಿದ್ದು, “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿರುವುದು ದೊಡ್ಡ ಗೌರವ ಮತ್ತು ದೊಡ್ಡ ಜವಾಬ್ದಾರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಆ ಕಾರ್ಯದಲ್ಲಿ ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್‌ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ – ಅಪರೂಪದ ಶ್ರೀಸಾಮಾನ್ಯ

“ಸಾವಿರಕ್ಕೂ ಹೆಚ್ಚು ಸಹೋದ್ಯೋಗಿಗಳ ಬೆಂಬಲವನ್ನು ಪಡೆದಿರುವುದು ಮತ್ತು ಭಾರತದಾದ್ಯಂತ ಕಾಂಗ್ರೆಸ್‌ನ ಅನೇಕ ಹಿತೈಷಿಗಳ ಭರವಸೆ ಮತ್ತು ಆಕಾಂಕ್ಷೆಗಳನ್ನು ಹೊತ್ತುಕೊಂಡಿದ್ದು ಒಂದು ಸುಯೋಗವಾಗಿತ್ತು” ಎಂದು ಶಶಿ ತರೂರ್‌ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ

20 ವರ್ಷಗಳ ನಂತರ ನಡೆದ ಪಕ್ಷದ ಮೊದಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ. ದೀಪಾವಳಿ ನಂತರ ಪಕ್ಷದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಫಲಿತಾಂಶ ಪ್ರಕಟವಾಗುವ ಮುನ್ನವೇ ರಾಹುಲ್ ಗಾಂಧಿ ರಾಜ್ಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರೆ ಅಧ್ಯಕ್ಷರಾಗಲಿದ್ದಾರೆ ಎಂದು ಸೂಚಿಸಿದ್ದರು. ಪತ್ರಿಕಾಗೋಷ್ಠಿಯಲ್ಲಿ ಹೊಸ ಅಧ್ಯಕ್ಷರಿಗೆ ವರದಿ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,“ನನ್ನ ಪಾತ್ರ ಏನು ಎಂಬುದನ್ನು ಹೊಸ ಅಧ್ಯಕ್ಷರು ನಿರ್ಧರಿಸುತ್ತಾರೆ, ಈ ಬಗ್ಗೆ ಖರ್ಗೆ ಮತ್ತು ಸೋನಿಯಾ ಅವರನ್ನು ಕೇಳಿ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಫಲಿತಾಂಶ ಘೋಷಣೆಗೂ ಮುನ್ನ ಖರ್ಗೆ ಅವರ ಪ್ರತಿಸ್ಪರ್ಧಿ ಶಶಿ ತರೂರ್‌‌ ಅವರು ಚುನಾವಣಾ ಪ್ರಕ್ರಿಯೆಯಲ್ಲಿ “ಅತ್ಯಂತ ಗಂಭೀರ ಅಕ್ರಮಗಳು” ನಡೆದಿದೆ ಎಂದು ಆರೋಪಿಸಿದ್ದರು. ತರೂರ್ ಅವರ ತಂಡವನ್ನು ಪ್ರತಿನಿಧಿಸುವ ಸಲ್ಮಾನ್ ಸೋಜ್ ಅವರು ನಂತರ “ನ್ಯಾಯಯುತವಾದ ತನಿಖೆಯ ಬಗ್ಗೆ ಭರವಸೆ ನೀಡಿದ್ದಾರೆ” ಎಂದು ಹೇಳಿ, ಎಣಿಕೆ ಮುಂದುವರಿಸಲು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಖರ್ಗೆ ಮತ್ತು ಥರೂರು: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ದೇಸೀ ಹಾಗೂ ಮಾರ್ಗ

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಕ್ತಾಯವಾಯಿತು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೋನಿಯಾ ಗಾಂಧಿ ಅವರು ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡ ಮೂರು ವರ್ಷಗಳ ನಂತರ ಈ ಚುನಾವಣೆ ನಡೆದಿದೆ.

1942 ಜುಲೈ  21 ರಂದು ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ವರವಟ್ಟಿ ಎಂಬ ಕುಗ್ರಾಮದಲ್ಲಿ ಅಸ್ಪೃಶ್ಯ ಮಹಾರ್ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಹುಟ್ಟುತ್ತಲೇ ಗಲಭೆಯೊಂದರಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಕೂಲಿ ಮಾಡಿ ಕಾಲೇಜು ಮುಗಿಸಿದ ಖರ್ಗೆ ಅವರು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘಟನೆ ಕಟ್ಟಿದ ಸಮಾಜಿಕ ರಂಗಕ್ಕೆ ಪ್ರವೇಶ ಮಾಡಿದ್ದರು.

ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್‌: ‘ಮೋದಿಶಾಹಿ’ ಅಧೋಗತಿಗೆ ತಲುಪುತ್ತಿದೆ ಎಂದ ಕಾಂಗ್ರೆಸ್‌

RPI ಪಕ್ಷದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳ ರಾಜಕೀಯದಲ್ಲಿ ಸಕ್ರಿಯವಾಗಿ, ನಂತರ ಕಾಂಗ್ರೆಸ್ ಸೇರಿದ ಅವರು ಒಂಬತ್ತು ಬಾರಿ ಶಾಸಕರು, ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿ, ಇದೀಗ ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌‌ನ ಅತ್ಯುನ್ನತ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...