Homeಕರ್ನಾಟಕ2020 ರಿಂದ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!

2020 ರಿಂದ ಬೆಂಗಳೂರಿನಲ್ಲಿ ಪ್ರತಿ ತಿಂಗಳು ಕನಿಷ್ಠ ಒಂದು ಬಾಲ್ಯ ವಿವಾಹ!

ರಾಜ್ಯದಲ್ಲಿ 2021-22ರಲ್ಲಿ ಒಟ್ಟು 418 ಬಾಲ್ಯವಿವಾಹಗಳು ನಡೆದಿದ್ದು, 2017-18ಕ್ಕೆ ಹೋಲಿಸಿದರೆ ಇದು 300% ಹೆಚ್ಚಳವಾಗಿದೆ

- Advertisement -
- Advertisement -

ವೇಗವಾಗಿ ಬೆಳೆಯುತ್ತಿರುವ ಜಾಗತಿಕ ನಗರವೆಂದು ಪರಿಗಣಿಸಲ್ಪಟ್ಟಿರುವ ಬೆಂಗಳೂರಿನಲ್ಲಿ 2020 ರಿಂದ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ ಎಂದು ವರದಿ ಬಹಿರಂಗ ಪಡಿಸಿದೆ. ಈ ವರ್ಷ 2022ರ ಜನವರಿಯಿಂದ ಆಗಸ್ಟ್‌ವರೆಗೆ ಬೆಂಗಳೂರಿನಲ್ಲಿ 51 ಬಾಲ್ಯವಿವಾಹ ದೂರುಗಳು ಬಂದಿದ್ದು, ಅವುಗಳಲ್ಲಿ 42 ಮಾತ್ರ ತಡೆಯಲು ಸಾಧ್ಯವಾಯಿತು ಎಂದು ವರದಿ ಹೇಳಿದೆ.

ಈ ಅವಧಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ನಡೆಸುವ ಮದುವೆಯ ಯತ್ನಗಳಲ್ಲಿ ಕನಿಷ್ಠ 84% ರಷ್ಟು ಮದುವೆಗಳನ್ನು ಅಧಿಕಾರಿಗಳು ವಿಫಲಗೊಳಿಸಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿ ಪ್ರತಿ ತಿಂಗಳು ಒಂದಕ್ಕಿಂತ ಹೆಚ್ಚು ಬಾಲ್ಯ ವಿವಾಹಗಳು ಅಕ್ರಮವಾಗಿ ನಡೆಯುತ್ತಿವೆ ಎಂದು ಅಂಕಿಅಂಶಗಳು ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2020 ರಿಂದ ಆಗಸ್ಟ್ 2022 ರ ನಡುವೆ ಬೆಂಗಳೂರಿನಲ್ಲಿ ಒಟ್ಟು 47 ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಕಿಅಂಶಗಳು ಹೇಳಿವೆ. 2.5 ವರ್ಷಗಳ ಈ ಅವಧಿಯಲ್ಲಿ ಒಟ್ಟು 279 ದೂರುಗಳು ಬಂದಿದ್ದು, 232 ಮದುವೆಗಳನ್ನು ಅಧಿಕಾರಿಗಳು ನಿಲ್ಲಿಸಿದ್ದಾರೆ ಎಂದು ಅಂಕಿ ಅಂಶ ಹೇಳಿದೆ.

ಇದನ್ನೂ ಓದಿ: ‘ಬಾಲ್ಯ ವಿವಾಹ ನೋಂದಣಿ ಮಸೂದೆ’ ಅಂಗೀಕರಿಸಿದ ರಾಜಸ್ಥಾನ ವಿಧಾನಸಭೆ!

ರಾಜ್ಯದಲ್ಲಿ 2021-22ರಲ್ಲಿ ಒಟ್ಟು 418 ಬಾಲ್ಯವಿವಾಹಗಳು ನಡೆದಿದ್ದು, 2017-18ಕ್ಕೆ ಹೋಲಿಸಿದರೆ ಇದು 300% ಹೆಚ್ಚಳವಾಗಿದೆ ಎಂದು ವರದಿಯೊಂದು ತಿಳಿಸಿದೆ. ಕೊರೊನಾ ಸಾಂಕ್ರಾಮಿಕದ ವೇಳೆ ಉಂಟಾದ ಉದ್ಯೋಗ ನಷ್ಟ ಮತ್ತು ಆರ್ಥಿಕ ಅಸಮಾನತೆಗಳ ವಿಸ್ತರಣೆಯಿಂದಾಗಿ ರಾಜ್ಯದಲ್ಲಿ ಬಾಲ್ಯವಿವಾಹಗಳ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ.

“ಉದ್ಯೋಗ ನಷ್ಟ, ಆನ್‌ಲೈನ್ ತರಗತಿಗಳು ಮತ್ತು ಕೊರೊನಾದಿಂದ ಮಕ್ಕಳು ಒಬ್ಬರು ಅಥವಾ ಇಬ್ಬರ ಪೋಷಕರನ್ನು ಕಳೆದುಕೊಳ್ಳುವುದು ಬಾಲ್ಯ ವಿವಾಹದ ಉಲ್ಬಣಕ್ಕೆ ನೀಡಬಹುದಾದ ಕೆಲವು ಕಾರಣಗಳಾಗಿವೆ” ಎಂದು ಗ್ಲೋಬಲ್ ಕನ್ಸರ್ನ್ಸ್ ಇಂಡಿಯಾದ ಮಕ್ಕಳ ಹಕ್ಕುಗಳ ಕಾರ್ಯಕರ್ತೆ ಬೃಂದಾ ಅಡಿಗ ಹೇಳುತ್ತಾರೆ.

“ಶಾಲೆಗಳು ಆನ್‌ಲೈನ್ ತರಗತಿಗಳ ಮೋಡ್‌ಗೆ ಬದಲಾಯಿಸಿದವು, ಆದರೆ ಪೋಷಕರು ತಮ್ಮ ಕೆಲಸವನ್ನು ಕಳೆದುಕೊಂಡರು. ಅನೇಕರು ತಮ್ಮ ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಮಗುವಿಗೆ ಶಾಲಾ ಶುಲ್ಕವನ್ನು ಪಾವತಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಬಹಳಷ್ಟು ಮಕ್ಕಳು ಶಾಲೆಯಿಂದ ಹೊರಗುಳಿದು, ಕುಟುಂಬವನ್ನು ಸಾಕಲು ಕೆಲಸವನ್ನು ಹುಡುಕುತ್ತಿದ್ದಾರೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿ 15 ಕೋಟಿಗೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಲ್ಯವಿವಾಹದಿಂದ ಜಾಗತಿಕವಾಗಿ ದಿನಕ್ಕೆ 60 ಕ್ಕೂ ಹೆಚ್ಚು ಬಾಲಕಿಯರ ಸಾವು: ವರದಿ

“ಶಾಲೆಗಳು ಪ್ರಾರಂಭವಾದ ನಂತರ, ಆನ್‌ಲೈನ್ ತರಗತಿಗಳು ಮತ್ತು ಪರೀಕ್ಷೆಗಳನ್ನು ತಪ್ಪಿಸಿದವರು ಅಂತರವನ್ನು ಸರಿದೂಗಿಸಲು ಸಾಧ್ಯವಾಗಲಿಲ್ಲ. ಜೊತೆಗೆ ಅವರು ಗಳಿಗೆ ಪ್ರಾರಂಭಿಸಿರುವುದರಿಂದ, ಶಾಲೆಗೆ ಹೋಗುವುದನ್ನು ನಿಲ್ಲಿಸಿ, ಕೆಲಸವನ್ನು ಮುಂದುವರಿಸಲು ನಿರ್ಧರಿಸಿದರು. ಈ ಸಮಯದಲ್ಲಿ ಹುಡುಗಿಯರ ಕೆಲಸದ ವಿಚಾರದಲ್ಲಿ ಪೋಷಕರು ಸುರಕ್ಷತೆಯ ಬಗ್ಗೆ ಚಿಂತಿಸುವಂತೆ ಮಾಡುತ್ತದೆ. ಹುಡುಗಿಯರು ಮನೆಯಲ್ಲಿಯೇ ಇರಲು ನಿರ್ಧರಿಸಿದರೆ, ಅದು ಅವರಿಗೆ ಮತ್ತೊಂದು ಹೊರೆಯಾಗಿತ್ತು. ಜೊತೆಗೆ ಹುಡುಗಿಯರನ್ನು ಪೋಷಕರು ಹೊಣೆಗಾರಿಕೆ ಎಂದು ಪರಿಗಣಿಸಿ, ಅವರಿಗೆ ಮದುವೆ ಮಾಡಲು ನಿರ್ಧರಿಸುತ್ತಾರೆ. ಮದುವೆ ಎಂಬುವುದು ಹೆಣ್ಣುಮಕ್ಕಳ ಸ್ಥಿರವಾದ ಭವಿಷ್ಯಕ್ಕೆ ಸಮನಾಗಿರುತ್ತದೆ ಎಂದು ಅವರು ಭಾವಿಸುತ್ತಾರೆ” ಎಂದು ಬೃಂದಾ ಅಭಿಪ್ರಾಯಪಡುತ್ತಾರೆ.

ಕೊರೊನಾ ಪರಿಣಾಮ

ಕೊರೊನಾ ನಿರ್ಬಂಧಗಳು ಜಾರಿಯಲ್ಲಿರುವುದರಿಂದ, ಮದುವೆಗಳಿಗೆ ಕಡಿಮೆ ಜನರು ಭಾಗವಹಿಸುವುದರಿಂದ ಮತ್ತು ಕಡಿಮೆ ವೆಚ್ಚದಲ್ಲಿ ಸರಳವಾಗಿ ಪೋಷಕರು ತಮ್ಮ ಹೆಣ್ಣುಮಕ್ಕಳನ್ನು ಬೇಗನೆ ಮದುವೆ ಮಾಡುತ್ತಿದ್ದರು.

ಬಾಲ್ಯ ವಿವಾಹದ ಬಗ್ಗೆ ಮದುವೆಯಾಗುವ ಮಗುವಿನ ಸ್ನೇಹಿತರು, ನೆರೆಹೊರೆಯವರು, ಶಾಲಾ ಸಿಬ್ಬಂದಿ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಅಧಿಕಾರಿಗಳಿಗೆ ಸುಳಿವು ನೀಡುತ್ತಾರೆ. ಆದರೆ, ಸಾಂಕ್ರಾಮಿಕ ಸಮಯದಲ್ಲಿ, ಶಾಲೆಗಳು ಮತ್ತು ಅಂಗನವಾಡಿಗಳು ಮುಚ್ಚಲ್ಪಟ್ಟಿದ್ದರಿಂದ ಮತ್ತು ಜನರು ಮನೆಯೊಳಗೆ ಇರಬೇಕಾಗಿದ್ದರಿಂದ ಮಾಹಿತಿ ಪಡೆಯುವಲ್ಲಿ ಕೊರತೆಯುಂಟಾಗಿತ್ತು.

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ದೇವಸ್ಥಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಮದುವೆ ನಡೆಯುವುದರಿಂದ ಬಹುತೇಕ ಮದುವೆಗಳು ನೋಂದಣಿಯಾಗದೇ ಇರುವುದರಿಂದ ಇತರೆ ಧರ್ಮಗಳಿಗೆ ಹೋಲಿಸಿದರೆ ಹಿಂದೂ ಕುಟುಂಬಗಳಲ್ಲಿ ಬಾಲ್ಯವಿವಾಹ ಪ್ರಕರಣಗಳು ಹೆಚ್ಚಿವೆ ಬೃಂದಾ ಅಭಿಪ್ರಾಯಪಡುತ್ತಾರೆ. ಸಮಾರಂಭವನ್ನು ನಡೆಸುವ ಪುರೋಹಿತರು ಸಹ ಬಾಲ್ಯವಿವಾಹ ನಡೆಯುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳಿಗೆ ತಿಳಿಸುವುದಿಲ್ಲ ಅಥವಾ ಅವರು ಮದುವೆ ಮಾಡಿಸಲು ನಿರಾಕರಿಸುವುದಿಲ್ಲ ಎಂದು ಅವರು ಹೇಳುತ್ತಾರೆ.

ಬಾಲ್ಯವಿವಾಹ ನಡೆದಿರುವ ಅಥವಾ ನಡೆಯಲಿರುವ ಬಗ್ಗೆ ಮಾಹಿತಿ ದೊರೆತಾಗ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಬೇಕು. ಆದರೆ, ಸುದೀರ್ಘ ನ್ಯಾಯಾಲಯದ ಕಾರ್ಯವಿಧಾನವನ್ನು ಎದುರಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಪೊಲೀಸರು ಮತ್ತು ಮಕ್ಕಳ ರಕ್ಷಣಾಧಿಕಾರಿಗಳು ಈ ಕ್ರಮವನ್ನು ತಪ್ಪಿಸುತ್ತಿದ್ದಾರೆ ಎಂಬುವುದು ಬೃಂದಾ ಅವರ ಅಭಿಪ್ರಾಯವಾಗಿದೆ.

ಅಂಕಿಅಂಶಗಳ ಪ್ರಕಾರ, 2020 ರಿಂದ 2022ರ ಆಗಸ್ಟ್‌ ವರೆಗೆ ಕೇವಲ 44 ಎಫ್‌ಐಆರ್‌ಗಳನ್ನು ಮಾತ್ರ ದಾಖಲಿಸಲಾಗಿದೆ. “ಪ್ರಕರಣವನ್ನು ನ್ಯಾಯಾಲಯದ ಮುಂದೆ ತರಲು ಸುಮಾರು ಎರಡು ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪೊಲೀಸ್ ಮತ್ತು ಮಕ್ಕಳ ರಕ್ಷಣಾ ಘಟಕವು ಅದನ್ನು ಎದುರಿಸಲು ಬಯಸುವುದಿಲ್ಲವಾದ್ದರಿಂದ ಅದನ್ನು ತಪ್ಪಿಸಲು ಪ್ರಯತ್ನಿಸುತ್ತದೆ. ಅಲ್ಲದೆ ಪೊಲೀಸ್ ಅಧಿಕಾರಿಗಳು ಸಾಮಾಜಿಕ ತನಿಖೆಗಳನ್ನು ಮಾಡುವ ತರಬೇತಿ ಪಡೆದಿಲ್ಲ ಅಥವಾ ಸಜ್ಜುಗೊಂಡಿರುವುದಿಲ್ಲ ಜೊತೆಗೆ, ಅದನ್ನು ಆದ್ಯತೆಯಾಗಿ ಪರಿಗಣಿಸಲಾಗುವುದಿಲ್ಲ” ಎಂದು ಬೃಂದಾ ಆರೋಪಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಮದುವೆಯ ವಯಸ್ಸನ್ನು ಹೆಚ್ಚಿಸುವುದು ಬಾಲ್ಯ ವಿವಾಹ ತಡೆಗೆ ಸಹಾಯ ಮಾಡುವುದಿಲ್ಲ

ಮಹಿಳೆಯರ ಕನಿಷ್ಠ ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕವು ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಕಾಯಿದೆ, 2016 ಅನ್ನು ಏಪ್ರಿಲ್ 2017 ರಲ್ಲಿ ತಂದಿತು ಮತ್ತು ಎಲ್ಲಾ ಅಪ್ರಾಪ್ತ ವಯಸ್ಸಿನ ವಿವಾಹಗಳನ್ನು ಅನೂರ್ಜಿತಗೊಳಿಸಿತು, ಅಂದರೆ ಅಂತಹ ವಿವಾಹಗಳು ಯಾವುದೇ ಪಕ್ಷಗಳಿಂದ ಯಾವುದೇ ಸಮಯದಲ್ಲಿ ರದ್ದುಗೊಳಿಸಲಾಗಿದೆ.

“ಸರ್ಕಾರವು ವಯೋಮಿತಿಯನ್ನು 21 ಕ್ಕೆ ಏರಿಸಿದರೂ ಹೆಣ್ಣು ಮಗುವಿನ ವಿವಾಹಕ್ಕೆ ಕಾರಣವಾಗುವ ಸಮಸ್ಯೆಗಳನ್ನು ಪರಿಹರಿಸಲು ಅವರು ಸಿದ್ಧರಿಲ್ಲದಿದ್ದರೆ, ಮದುವೆಗಳು ನಡೆಯುತ್ತಲೇ ಇರುತ್ತವೆ” ಎಂದು ಮಕ್ಕಳ ಹಕ್ಕುಗಳ ಕಾರ್ಯಕರ್ತೆ, ಬೆಂಗಳೂರು ಮೂಲದ ಎನ್‌ಜಿಒ ದಿ ಕನ್ಸರ್ನ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್ (CWC) ಕವಿತಾ ರತ್ನ ಹೇಳುತ್ತಾರೆ.

ವರದಿಯೊಂದರ ಪ್ರಕಾರ, “ಬಾಲ್ಯ ವಿವಾಹ ಮತ್ತು ಬಾಲ್ಯವಿವಾಹಕ್ಕೆ ಎರಡು ಪ್ರಮುಖ ಕಾರಣಗಳಿದ್ದು, ಹೆಣ್ಣುಮಕ್ಕಳಿಗೆ ಅಧ್ಯಯನ ಮಾಡಲು ಸೀಮಿತ ಅವಕಾಶಗಳು ಮತ್ತು ತನ್ನ ಆಯ್ಕೆಯ ಸಂಬಂಧಗಳನ್ನು ಬೆಳೆಸಿಕೊಳ್ಳುತ್ತಾರೆ ಎಂಬ ಹುಡುಗಿಯರ ಕುಟುಂಬಗಳಲ್ಲಿ ಭಯವಾಗಿದೆ. ಎರಡೂ ಕಾರಣಗಳು ಕೂಡಾ ಕುಟುಂಬ ಮತ್ತು ಸಮಾಜದಲ್ಲಿ ಹೆಣ್ಣುಮಕ್ಕಳ ಆಕಾಂಕ್ಷೆಗಳಿಗೆ ನೀಡಿದ ಕಡಿಮೆ ಮೌಲ್ಯವನ್ನು ಒತ್ತಿಹೇಳುತ್ತದೆ..

ಇದನ್ನೂ ಓದಿ: ಯುವತಿಯರ ವಿವಾಹ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾಪಕ್ಕೆ ಸಂಪುಟ ಒಪ್ಪಿಗೆ: ವರದಿ

ರಚಿಸಲ್ಪಡುವ ಕಾನೂನು ಸಮುದಾಯದ ನಿಯಮಗಳಿಗೆ ವಿರುದ್ಧವಾಗಿ ಇದ್ದರೆ, ಬಾಲ್ಯವಿವಾಹವನ್ನು ಅದು ಕಡಿಮೆ ಮಾಡುವಲ್ಲಿ ಯಾವುದೆ ಪರಿಣಾಮ ಬೀರುವುದಿಲ್ಲ. ಜೊತೆಗೆ ವಾಸ್ತವವಾಗಿ ಸಾಮಾಜಿಕ ರೂಢಿಗಳನ್ನು ಉಳಿಸಿಕೊಳ್ಳಲು ಸಮುದಾಯಗಳು ಕಾನೂನನ್ನು ಬಳಸುವ ಮಾರ್ಗಗಳನ್ನು ಕಂಡುಕೊಂಡಾಗ ಮಾತ್ರ ಅದನ್ನು ಅನ್ವಯಿಸಲಾಗುತ್ತದೆ ಎಂದು ಅಧ್ಯಯನವು ಹೇಳಿದೆ.

ಬಡತನ, ಮದುವೆಯ ಕೇಂದ್ರೀಯತೆಯ ಸುತ್ತಲಿನ ರೂಢಿಗಳು, ಪಿತೃಪ್ರಭುತ್ವ ಮತ್ತು ಹುಡುಗಿಯರ ಲೈಂಗಿಕತೆಯ ಮೇಲಿನ ನಿಯಂತ್ರಣ ಬಾಲ್ಯ ವಿವಾಹದ ಮೂಲ ಕಾರಣಗಳಾಗವೆ. ಹೀಗಾಗಿ ಮದುವೆಯ ವಯಸ್ಸನ್ನು ಬದಲಾಯಿಸುವ ಕಾನೂನು ಈ ಎಲ್ಲಾ ಕಾರಣಗಳನ್ನು ಪರಿಹರಿಸುವುದಿಲ್ಲ ಎಂದು ಅಧ್ಯಯನ ಹೇಳುತ್ತದೆ.

ಕೃಪೆ: ಸಚಿ, ದಿ ನ್ಯೂಸ್ ಮಿನಿಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...