Homeಮುಖಪುಟಮುಸ್ಲಿಮರು ಲಕ್ಷ್ಮೀ ಪೂಜೆ ಮಾಡುವುದಿಲ್ಲ, ಅವರಲ್ಲಿ ಶ್ರೀಮಂತರಿಲ್ಲವೇ?- ಬಿಜೆಪಿ ಶಾಸಕನ ಹೇಳಿಕೆ ವೈರಲ್

ಮುಸ್ಲಿಮರು ಲಕ್ಷ್ಮೀ ಪೂಜೆ ಮಾಡುವುದಿಲ್ಲ, ಅವರಲ್ಲಿ ಶ್ರೀಮಂತರಿಲ್ಲವೇ?- ಬಿಜೆಪಿ ಶಾಸಕನ ಹೇಳಿಕೆ ವೈರಲ್

ನೀವು ನಂಬಿದ್ದರೆ ಅದು ದೇವರಾಗುತ್ತದೆ, ಇಲ್ಲವಾದರೆ ಕೇವಲ ಕಲ್ಲಿನ ವಿಗ್ರಹವಾಗುತ್ತದೆ. ತಾರ್ಕಿಕ ತೀರ್ಮಾನಕ್ಕೆ ಬರಲು ನಾವು ವೈಜ್ಞಾನಿಕ ತಳಹದಿಯ ಮೇಲೆ ಯೋಚಿಸಬೇಕು ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಆತ್ಮ ಮತ್ತು ಪರಮಾತ್ಮ ಎಂಬುದು ಅಸ್ತಿತ್ವದಲ್ಲಿಲ್ಲ, ಅದು ಕೇವಲ ಜನರ ನಂಬಿಕೆಯಷ್ಟೇ ಎಂದು ಬಿಹಾರದ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಹೇಳಿದ್ದಾರೆ. ಮುಸ್ಲಿಮರು ಲಕ್ಷ್ಮೀ ಪೂಜೆ ಮಾಡುವುದಿಲ್ಲ, ಅವರಲ್ಲಿ ಶ್ರೀಮಂತರಿಲ್ಲವೇ? ಎಂಬ ತಾರ್ಕಿಕ ಪ್ರಶ್ನೆಗಳನ್ನು ಎತ್ತಿದ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಲಕ್ಷ್ಮೀ ಪೂಜೆ ಮಾಡಿದರೆ ಮಾತ್ರ ಸಂಪತ್ತು ದೊರಕುತ್ತದೆ ಎನ್ನುವುದಾದರೆ ಮುಸ್ಲಿಮರಲ್ಲಿ ಬಿಲಿಯನೇರ್‌ಗಳು ಇರಬಾರದಿತ್ತು. ಏಕೆಂದರೆ ಅವರು ಲಕ್ಷ್ಮೀ ಪೂಜೆ ಮಾಡುವುದಿಲ್ಲ. ಹಾಗೆಂದ ಮಾತ್ರಕ್ಕೆ ಅವರಲ್ಲಿ ಶ್ರೀಮಂತರಿಲ್ಲವೇ? ಮುಸ್ಲಿಮರು ಸರಸ್ವತಿ ದೇವಿಯನ್ನು ಸಹ ಪೂಜಿಸುವುದಿಲ್ಲ. ಅವರಲ್ಲಿ ವಿದ್ವಾಂಸರಿಲ್ಲವೇ? ಐಎಎಸ್, ಐಪಿಎಸ್‌ ಅಧಿಕಾರಿಗಳಿಲ್ಲವೇ ಎಂದು ಲಾಲನ್ ಪಾಸ್ವಾನ್ ಪ್ರಶ್ನಿಸಿದ್ದಾರೆ.

ನೀವು ನಂಬಿದ್ದರೆ ಅದು ದೇವರಾಗುತ್ತದೆ, ಇಲ್ಲವಾದರೆ ಕೇವಲ ಕಲ್ಲಿನ ವಿಗ್ರಹವಾಗುತ್ತದೆ. ನಾವು ದೇವರು ಮತ್ತು ದೇವತೆಗಳನ್ನು ನಂಬುತ್ತೇವೆಯೋ ಇಲ್ಲವೋ ಎಂಬುದು ನಮಗೆ ಬಿಟ್ಟದ್ದು. ತಾರ್ಕಿಕ ತೀರ್ಮಾನಕ್ಕೆ ಬರಲು ನಾವು ವೈಜ್ಞಾನಿಕ ತಳಹದಿಯ ಮೇಲೆ ಯೋಚಿಸಬೇಕು. ನೀವು ನಂಬುವುದನ್ನು ನಿಲ್ಲಿಸಿದರೆ, ನಿಮ್ಮ ಬೌದ್ಧಿಕ ಸಾಮರ್ಥ್ಯವು ಹೆಚ್ಚಾಗುತ್ತದೆ ಎಂದು ಅವರು ಹೇಳಿದ್ದಾರೆ.

“ಬಜರಂಗಬಲಿ ಶಕ್ತಿಯುಳ್ಳ ದೇವತೆ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ನಂಬಲಾಗಿದೆ. ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಬಜರಂಗಬಲಿ ಪೂಜೆ ಮಾಡುವುದಿಲ್ಲ. ಅವರು ಶಕ್ತಿವಂತರಲ್ಲವೇ? ನೀವು ನಂಬುವುದನ್ನು ನಿಲ್ಲಿಸಿದ ದಿನ, ಇವೆಲ್ಲವೂ ಕೊನೆಗೊಳ್ಳುತ್ತದೆ” ಎಂದು ಬಿಹಾರದ ಪರ್ಪೈಂಟಿ ವಿಧಾನ ಸಭಾ ಕ್ಷೇತ್ರದ ಶಾಸಕರು ಹೇಳಿದ್ದಾರೆ.

ಅವರ ಹೇಳಿಕೆಗಳು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿವೆ ಎಂದು ಆರೋಪಿಸಿ ಕೆಲವರು ಪ್ರತಿಭಟನೆ ನಡೆಸಿದ್ದಾರೆ. ಭಾಗಲ್‌ಪುರದ ಶೇರ್ಮಾರಿ ಬಜಾರ್‌ನಲ್ಲಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪೆರೋಲ್‌ನಲ್ಲಿ ಹೊರಗಿರುವ ರೇಪ್ ಪ್ರಕರಣದ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಆನ್‌ಲೈನ್‌ನಲ್ಲಿ ಪ್ರವಚನ!: ಬಿಜೆಪಿ ಮುಖಂಡರ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...