Homeಮುಖಪುಟಮಕ್ಕಳನ್ನು ಶಾಲೆಯಿಂದ ಹೊರದಬ್ಬುವ ಹುನ್ನಾರ: ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ ವಸೂಲಿಗೆ ತೀವ್ರ ವಿರೋಧ

ಮಕ್ಕಳನ್ನು ಶಾಲೆಯಿಂದ ಹೊರದಬ್ಬುವ ಹುನ್ನಾರ: ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ ವಸೂಲಿಗೆ ತೀವ್ರ ವಿರೋಧ

ಈ ಸರಕಾರ ಪತನದ ಹಾದಿಯಲ್ಲಿದೆ. ಮಠಗಳಿಗೆ, ಅನುಮಾನಾಸ್ಪದ ಜಗ್ಗಿ ವಾಸುದೇವ ಮುಂತಾದವರಿಗೆ ಕೋಟಿಗಟ್ಟಲೆ ದುಡ್ಡು ಕೊಡುವ ಸರಕಾರಕ್ಕೆ ಶಾಲೆ ನಡೆಸಲು ರೊಕ್ಕವಿಲ್ಲ ಎಂದರೆ ನಾಚಿಕೆಗೇಡಿನ ಸಂಗತಿ - ಬಿ.ಶ್ರೀಪಾದ್ ಭಟ್

- Advertisement -
- Advertisement -

ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸುವುದಕ್ಕಾಗಿ ಮಕ್ಕಳ ಪೋಷಕರಿಂದ ಮಾಸಿಕ 100 ರೂ ದೇಣಿಗೆ ಸಂಗ್ರಹಿಸಬೇಕೆಂದು ಕರ್ನಾಟಕ ಸರ್ಕಾರ ಸೂಚಿಸಿದೆ.

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯ್ತುಕ್ತರು ಅಕ್ಟೋಬರ್ 19 ರಂದು ಸುತ್ತೋಲೆಯೊಂದನ್ನು ಹೊರಡಿಸಿದ್ದು, ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಹೆಸರಿನಲ್ಲಿ ಪೋಷಕರು ನೀಡುವ ದೇಣಿಗೆಯನ್ನು ವಿದ್ಯುತ್ ಬಿಲ್, ಶೌಚಾಲಯ ನಿರ್ವಹಣೆಯಂತಹ ಮೂಲಭೂತ ಸೌಲಭ್ಯಗಳಿಗೆ ಬಳಸಬೇಕು. ರಸೀದಿ ನೀಡುವ, ಪ್ರತ್ಯೇಕ ಲೆಕ್ಕಪತ್ರ ಇಡುವ ಹೊಣೆಗಾರಿಕೆ ಎಸ್‌ಡಿಎಂಸಿಯದ್ದಾಗಿರುತ್ತದೆ ಎನ್ನಲಾಗಿದೆ.

ಈ ಯೋಜನೆ ಘೋಷಣೆಯಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿರುವವರು ಬಡವರು, ದಲಿತರು ಮತ್ತು ಹಿಂದುಳಿದ ಸಮುದಾಯಗಳೆ ಹೆಚ್ಚಿದ್ದಾರೆ. ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗದಿಂದ ಬಸವಳಿದಿರುವ ಅಂತವರ ಹೊಟ್ಟೆ ಮೇಲೆ ಹೊಡೆಯಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಹೊಸ ಶಿಕ್ಷಣ ನೀತಿಯು ಸ್ಥಳೀಯವಾಗಿಯೇ ಸಂಪನ್ಮೂಲಗಳನ್ನು ಹೊಂದಿಸಿಕೊಳ್ಳಬೇಕು ಎಂದು ಹೇಳುತ್ತದೆಯೆ ಹೊರತು ಸರ್ಕಾರ ನೀಡುವ ಅನುದಾನದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಆ ನೀತಿಯ ಅನುಷ್ಟಾನದ ಭಾಗವಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದು ಬಡಮಕ್ಕಳನ್ನು ಶಾಲೆಯಿಂದ ಹೊರದೂಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ನಂತರ ಸಾವಿರಾರು ಮಕ್ಕಳು ಶಾಲೆಗಳಿಂದ ಡ್ರಾಪ್‌ಔಟ್ ಆಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಅಂತಹ ಮಕ್ಕಳ ಪೋಷಕರಿಂದ ವಸೂಲಿಗೆ ಮುಂದಾಗಿರುವುದು ಸರಿಯಲ್ಲ. ಹಿಂದಿನ ಸರ್ಕಾರ ಶಾಲೆಗೆ ಬರುವ ಮಕ್ಕಳಿಗೆ ದಿನಕ್ಕೆ ಎರಡು ರೂನಂತೆ ಪ್ರೋತ್ಸಾಹ ಧನ ನೀಡುತ್ತಿತ್ತು. ಆಂಧ್ರದ ಸರ್ಕಾರ ಸರ್ಕಾರಿ ಶಾಲೆಗೆ ಬರುವ ಹೆಣ್ಣು ಮಕ್ಕಳ ತಾಯಿಯ ಖಾತೆಗೆ ವಾರ್ಷಿಕ 15 ಸಾವಿರ ಪ್ರೋತ್ಸಾಹ ಧನ ನೀಡುತ್ತಿದೆ. ಆದರೆ ಕರ್ನಾಟಕದ ಬಿಜೆಪಿ ಸರ್ಕಾರ ಮಾತ್ರ ಬಡಮಕ್ಕಳಿಂದಲೇ ದೇಣಿಗೆ ವಸೂಲಿ ಮಾಡುವ ಕೀಳು ಮಟ್ಟಕ್ಕೆ ಇಳಿದಿದೆ ಎಂದು ಕಿಡಿಕಾರಿದರು.

ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಮಾತನಾಡಿ, “ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯು ರಾಜ್ಯಸರ್ಕಾರಗಳು ಎಲ್ಲಾ ಮಕ್ಕಳಿಗೆ ಕನಿಷ್ಟ ಪ್ರಾಥಮಿಕ ಶಿಕ್ಷಣವನ್ನು ಉಚಿತವಾಗಿ ಕೊಡಬೇಕೆಂದು ಹೇಳುತ್ತದೆ. ಸಂವಿಧಾನದ 21ಎ ಪ್ರಕಾರ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಎಂದರೆ ಉಚಿತ ಅಷ್ಟೆ. ಯಾವುದೇ ಸ್ವರೂಪದಲ್ಲಿ ಅದಕ್ಕೆ ನಿರ್ಬಂಧಗಳನ್ನು ಹೇರಬಾರದು. ರಾಜ್ಯ ಸರ್ಕಾರ ಅನುದಾನ ಕೊಡಬೇಕು, ಮೂಲಭೂತ ಸೌಲಭ್ಯಗಳನ್ನು ಸ್ಥಳೀಯ ಸರ್ಕಾರಗಳು ಒದಗಿಸಬೇಕು. ಆದರೆ ನಾಗೇಶ್‌ರವರು ಶಿಕ್ಷಣ ಸಚಿವರಾದ ನಂತರ ಕಾನೂನು ಉಲ್ಲಂಘನೆಗಳು ಮಿತಿ ಮೀರಿವೆ. ಅವರನ್ನು ವಜಾಗೊಳಿಸಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಜಗ್ಗಿ ವಾಸುದೇವ್‌ಗೆ 100 ಕೋಟಿ ಹಣ ನೀಡಿದೆ. ಸಂಸ್ಕೃತ ವಿವಿಗೆ 250 ಕೋಟಿ ನೀಡಲು ಮುಂದಾಗಿದೆ. ಚಾಣಕ್ಯ ವಿವಿಗೆ ಭೂಮಿ ಮತ್ತು ಹಣ ಕೊಡುತ್ತಿದೆ. ಉಪಯೋಗಕ್ಕೆ ಬಾರದ ವೇದಗಣಿತ ಕಲಿಕೆಗೆ ಹಣ ನೀಡಲು ಮುಂದಾಗಿತ್ತು. ಈ ಎಲ್ಲದಕ್ಕೂ ಕೊಡಲು ದುಡ್ಡಿರುವಾಗ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ನೀಡಲು ದುಡ್ಡಿಲ್ಲವೇ? ಸರ್ಕಾರ ಭಿಕ್ಷೆ ಬೇಡುತ್ತಿದೆಯೇ? ಬಡವರ ಕೂಲಿಯಲ್ಲಿ ಮಾಸಿಕ 100 ರೂ ಕೊಡಬೇಕು ಎನ್ನುವ ನಿಮಗೆ ಮಾನವೀಯತೆ ಇದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಕೆಲ ಪೋಷಕರು ದೇಣಿಗೆ ಕೊಟ್ಟು, ಕೆಲವರು ಕೊಡದಿದ್ದರೆ ಅದು ಮಕ್ಕಳ ನಡುವಿನ ತಾರತಮ್ಯಕ್ಕೆ ಕಾರಣವಾಗಲಿದೆ. ಇನ್ನು ಪೋಷಕರು, ಎಸ್‌ಡಿಎಂಸಿ ಸದಸ್ಯರು ಮಾಸಿಕ ಸಭೆಗಳಿಗೆ ಹೋಗದಿರಲು ಹಣಕಾಸಿನ ಮುಗ್ಗಟ್ಟು ಸಹ ಪ್ರಧಾನ ಕಾರಣ. ಏಕೆಂದರೆ ಶಾಲಾ ಅಗತ್ಯಗಳಿಗೆ ಶಿಕ್ಷಕರು ಅವರನ್ನು ಒತ್ತಾಯಿಸುವುದು ಸಹಜ. ಇಂತಹ ಸಂದರ್ಭದಲ್ಲಿ ಈ ಸುತ್ತೋಲೆ ಮತ್ತುಷ್ಟು ವಸೂಲಿಗೆ ಅವಕಾಶ ಮಾಡಿಕೊಡುತ್ತಿದ್ದು ಇದರಿಂದ ಪೋಷಕರು ಶಾಲೆಗಳತ್ತ ಸುಳಿಯದಂತೆ ಮಾಡುತ್ತದೆ. ದಲಿತ ಮಕ್ಕಳನ್ನು ಶಾಲೆಯಿಂದ ಹೊರದುಬ್ಬವ ಹುನ್ನಾರವಿದು. ಆನಂತರ ತಿಂಗಳಿಗೆ ನೂರು ರೂ ಕೊಡುವುದಾದರೆ ನಮ್ಮಲ್ಲಿಗೆ ಬನ್ನಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆಮಿಷವೊಡ್ಡಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಚ್ಚಿಸಿಬಿಡುತ್ತವೆ. ಈ ಸರ್ಕಾರಕ್ಕೂ ಅದೇ ಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಷ್ಟು ವರ್ಷ ಸರ್ಕಾರಿ ಶಾಲೆಗಳಿಂದ ಸಂಬಳ ಪಡೆಯುತ್ತಿರುವ ಶಿಕ್ಷಕರು ಬೇಕಾದರೆ ದೇಣಿಗೆ ನೀಡಲಿ. ಗೋವುಗಳನ್ನು ದತ್ತು ಪಡೆಯುವ ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರು 100 ಕೋಟಿ ರೂಗಳವರೆಗೆ ದೇಣಿಗೆ ಕೊಡುವ ಬದಲು ಅದೇ ಹಣವನ್ನು ಸರ್ಕಾರಿ ಶಾಲೆಗಳಿಗೆ ಕೊಡಬಹುದಲ್ಲವೇ ಎಂದು ಪ್ರಶ್ನಿಸಿದರು.

ಹೋರಾಟಗಾರ, ಶಿಕ್ಷಣ ತಜ್ಞ ಬಿ.ಶ್ರೀಪಾದ್ ಭಟ್ ಸರ್ಕಾರದ ಈ ಕ್ರಮ ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. “ಈ ಬಿಜೆಪಿ ಸರಕಾರ ದಿನ ದಿನಕ್ಕೂ ನೈತಿಕವಾಗಿ ಪತನಗೊಳ್ಳುತ್ತಿದೆ. 40% ಕಮಿಷನ್ ಪಡೆಯುವ ಸರಕಾರ ಎಂದು ಆರೋಪವಿರುವ ಈ ಸರಕಾರ ಪತನದ ಹಾದಿಯಲ್ಲಿದೆ. ಮಠಗಳಿಗೆ, ಅನುಮಾನಾಸ್ಪದ ಜಗ್ಗಿ ವಾಸುದೇವ ಮುಂತಾದವರಿಗೆ ಕೋಟಿಗಟ್ಟಲೆ ದುಡ್ಡು ಕೊಡುವ ಸರಕಾರಕ್ಕೆ ಶಾಲೆ ನಡೆಸಲು ರೊಕ್ಕವಿಲ್ಲ ಎಂದರೆ ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಶಿಕ್ಷಣಕ್ಕಾಗಿ ಸರಕಾರಿ ಶಾಲೆಗಳು ಪೋಷಕರಿಂದ ಹಣ ಸಂಗ್ರಹಿಸುವ ದಂಧೆಗೆ ಮುಂದಾಗಿರುವುದು ಕ್ರೌರ್ಯ ಮಾತ್ರವಲ್ಲ, ‘6-14ನೇ ವಯಸ್ಸಿನ ಮಕ್ಕಳಿಗೆ ಉಚಿತ ಕಡ್ಡಾಯ ಗುಣಮಟ್ಟದ ಶಿಕ್ಷಣ ಕೊಡಬೇಕು’ ಎನ್ನುವ ಪರಿಚ್ಛೇದ 21ಎ ಮತ್ತು ‘0-14ನೇ ವಯಸ್ಸಿನ ಮಕ್ಕಳಿಗೆ ಉಚಿತ ಕಡ್ಡಾಯ ಗುಣಮಟ್ಟದ ಶಿಕ್ಷಣ ಕೊಡಬೇಕು’ ಎನ್ನುವ ಪರಿಚ್ಛೇದ 45ರ ನೇರ ಉಲ್ಲಂಘನೆಯಾಗಿದೆ. ಆರ್ ಟಿಇ ಕಾಯಿದೆ 2009ರ ಅಧ್ಯಾಯ 2ರ ಸೆಕ್ಷನ್ 3 ಮತ್ತು ಅಧ್ಯಾಯ 4ರ ಸೆಕ್ಷನ್ 12, 13ರ ಉಲ್ಲಂಘನೆಯಾಗಿದೆ. ವಿದ್ಯಾರ್ಥಿ ಸಂಘಟನೆಗಳು ತಮ್ಮ ನಿಷ್ಕ್ರಿಯತೆಯಿಂದ ಹೊರಬರಬೇಕಾದ ತುರ್ತು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ಕೇರಳ ಸರ್ಕಾರ v/s ರಾಜ್ಯಪಾಲ: ವಿಶ್ವ ವಿದ್ಯಾಲಯದ 15 ಸೆನೆಟ್ ಸದಸ್ಯರನ್ನು ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...