Homeಮುಖಪುಟರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಪತ್ರಕರ್ತ ವಿಶ್ವೇಶ್ವರ್‌ ಭಟ್‌ಗೆ NCW ಸಮನ್ಸ್

ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ: ಪತ್ರಕರ್ತ ವಿಶ್ವೇಶ್ವರ್‌ ಭಟ್‌ಗೆ NCW ಸಮನ್ಸ್

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದ ಆರೋಪದ ಮೇಲೆ ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ್ ಭಟ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಸಮನ್ಸ್ ನೀಡಿದೆ.

ಗೌರವಾನ್ವಿತ ರಾಷ್ಟ್ರಪತಿಯವರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದನ್ನು ರಾಷ್ಟ್ರೀಯ ಮಹಿಳಾ ಆಯೋಗವು ಗುರುತಿಸಿದೆ. ಈ ಕುರಿತು ಅಕ್ಟೋಬರ್ 26ರಂದು ವಿಚಾರಣೆಗೆ ಹಾಜರಾಗುವಂತೆ ಪತ್ರಕರ್ತ ವಿಶ್ವೇಶ್ವರ ಭಟ್‌ರವರಿಗೆ ನೋಟಿಸ್ ನೀಡಲಾಗಿದೆ ಎಂದು NCW ಟ್ವೀಟ್ ಮಾಡಿದೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ವಿಶ್ವೇಶ್ವರ್ ಭಟ್‌ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದರು.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪತ್ರಕರ್ತ ವಿಶ್ವೇಶ್ವರ್ ಭಟ್‌ರನ್ನು ಬಂಧಿಸಬೇಕೆಂದು ಆಗ್ರಹಗಳು ಕೇಳಿಬಂದಿದ್ದವು. ಹಿಂದೆಲ್ಲ ರಾಷ್ಟ್ರಪತಿಗಳನ್ನು ಅವಮಾನಿಸಿದಾಗ ಪ್ರತಿಭಟಿಸಿದ್ದ ಬಿಜೆಪಿ ಹೀಗೇಕೆ ಸುಮ್ಮನಿದೆ ಎಂದು ಪ್ರಶ್ನಿಸಲಾಗಿತ್ತು.

ಹಲವಾರು ಜನರು ರಾಷ್ಟ್ರೀಯ ಮಹಿಳಾ ಆಯೋಗವನ್ನು ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿತ್ತು. ಕೊನೆಗೂ ಮಹಿಳಾ ಆಯೋಗ ವಿಶ್ವೇಶ್ವರ್ ಭಟ್‌ಗೆ ಸಮನ್ಸ್ ನೀಡಿದ್ದು ವಿಚಾರಣೆಗೆ ಮುಂದಾಗಿದೆ.

 

ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...