Homeಕರ್ನಾಟಕಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಪ್ರವೇಶ ಶುಲ್ಕ ನೀತಿ ವಿರೋಧಿಸಿ AIDSO ಪ್ರತಿಭಟನೆ

- Advertisement -
- Advertisement -

ಪ್ರವೇಶ ಶುಲ್ಕ, ಸ್ಕಾಲರ್ಶಿಪ್ ಹಾಗೂ ಮಹಾರಾಣಿ ಕಾಲೇಜು ಕುಸಿದಿರುವ ಘಟನೆಯನ್ನು ಮುಂದಿಟ್ಟುಕೊಂಡು AIDSO ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಣಿ ಕಾಲೇಜು ವಿದ್ಯಾರ್ಥಿಗಳು ಮೈಸೂರು ವಿಶ್ವವಿದ್ಯಾನಿಲಯದ ಎದುರುಗಡೆ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದ್ದು, ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಒಂದನೇ, ಎರಡನೇ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ವಿಶ್ವವಿದ್ಯಾಲಯದ ಈ ತೀರ್ಮಾನವನ್ನು ವಿರೋಧಿಸಿರುವ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಣಿ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.16,000, ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.30000 ಹಾಗೂ ಯುವರಾಜ ಕಾಲೇಜಿನಲ್ಲಿ 30 ರಿಂದ 60 ಸಾವಿರ ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ” ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

ಇದನ್ನೂ ಓದಿ: ಮೈಸೂರು: ಅಲೆಮಾರಿಗಳನ್ನು ಒಕ್ಕಲೆಬ್ಬಿಸಲು ಹೊರಟಿದೆಯೇ ವ್ಯವಸ್ಥೆ?

AIDSO ವಿದ್ಯಾರ್ಥಿ ಸಂಘಟನೆಯ ಮೈಸೂರು ಜಿಲ್ಲಾಧ್ಯಕ್ಷರಾದ ಸುಭಾಷ್ ಮಾತನಾಡಿ, “ಎಷ್ಟೋ ವಿದ್ಯಾರ್ಥಿಗಳಿಗೆ ಸರಿಯಾದ ವಿದ್ಯಾರ್ಥಿ ವೇತನ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರುತ್ತಿರುವುದು ವಿದ್ಯಾರ್ಥಿ ವಿರೋಧಿ ನಿಲುವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡ ರೈತ-ಕೂಲಿ-ಕಾರ್ಮಿಕರ ಮಕ್ಕಳು. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಸುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟುವುದು” ಎಂದು ಪ್ರಶ್ನಿಸಿದ ಅವರು, ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಈ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಆಗ್ರಹ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಮಾಡುವುದಾಗಿ AIDSO ಎಚ್ಚರಿಸಿದೆ.

ಮಹಾರಾಣಿ ವಿಜ್ಞಾನ ಕಾಲೇಜಿನ ಕಟ್ಟಡ ಕುಸಿದಿರುವುದರ ಬಗ್ಗೆ ಮಾತನಾಡಿ ಅವರು,“ಬೇಜವಾಬ್ದಾರಿತನದಿಂದ ಹಳೆಯ ಕಟ್ಟಡಗಳನ್ನು ದುರಸ್ತಿ ಮಾಡದೆ, ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳದೆ ಇರುವುದು
ಸರ್ಕಾರ ಹಾಗೂ ಆಡಳಿತ ಮಂಡಳಿಯ ವೈಫಲ್ಯ” ಎಂದು ಸುಭಾಷ್ ಟೀಕಿಸಿದ್ದಾರೆ. ಈ ಕೂಡಲೇ ಹಳೆಯ ಕಟ್ಟಡಗಳಲ್ಲಿ ಯಾವುದೇ ತರಗತಿಗಳು ನಡೆಯಬಾರದು ಹಾಗೂ ಕಟ್ಟಡಗಳನ್ನು ದುರಸ್ತಿ ಮಾಡಬೇಕು, ಹೊಸ ಕಟ್ಟಡಗಳನ್ನು ಕಟ್ಟಿ ಅಭಿವೃದ್ಧಿ ಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಜಿಲ್ಲಾಡಳಿತದ ಅನುಮತಿ ನಿರಾಕರಣೆಯ ನಡುವೆಯು ಮಹಿಷಾ ದಸರ ಆಚರಣೆ

ಪ್ರತಿಭಟನೆಯಲ್ಲಿ AIDSO ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ನಿತಿನ್, ಸ್ವಾತಿ, ಚಂದ್ರಿಕಾ, ಚಂದನ, ಹೇಮಾ, ವಿದ್ಯಾರ್ಥಿಗಳಾದ ಹರ್ಷಿತಾ, ಅಂಕಿತ, ಸುಚಿತ್ರ, ರಮ್ಯಾ, ಸಂಧ್ಯಾ ದೀಪಿಕಾ, ಸಂಗೀತ, ಕಾವ್ಯ, ಅಂಜಲಿ ಐಶ್ವರ್ಯ, ನಿರ್ಮಲ, ವೀರೇಶ್, ಅಭಿಷೇಕ್ ಮುಂತಾದವರು ಪಾಲ್ಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...