Homeಮುಖಪುಟಯುಪಿ: ಸಹಪಾಠಿಯ ಕಿರುಕುಳಕ್ಕೆ ಬೇಸೆತ್ತು ಕಟ್ಟಡದಿಂದ ಜಿಗಿದಿದ್ದ ವಿದ್ಯಾರ್ಥಿನಿ ಸಾವು

ಯುಪಿ: ಸಹಪಾಠಿಯ ಕಿರುಕುಳಕ್ಕೆ ಬೇಸೆತ್ತು ಕಟ್ಟಡದಿಂದ ಜಿಗಿದಿದ್ದ ವಿದ್ಯಾರ್ಥಿನಿ ಸಾವು

- Advertisement -
- Advertisement -

ತನ್ನ ಸಹಪಾಠಿಯ ಕಿರುಕುಳಕ್ಕೆ ಬೇಸೆತ್ತು ಉತ್ತರ ಪ್ರದೇಶದ ಮೀರತ್‌‌ನ ಖಾಸಗಿ ವೈದ್ಯಕೀಯ ಕಾಲೇಜಿನ ಎರಡನೇ ವರ್ಷದ ದಂತ ವಿಜ್ಞಾನ ವಿದ್ಯಾರ್ಥಿನಿಯೊಬ್ಬರು ಕಾಲೇಜು ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದಿದ್ದರು. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅವರು ಎರಡು ದಿನಗಳ ಬಳಿಕ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು  ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ವನಿಯಾ ಅರ್ಷದ್ ಶೇಖ್ ಎಂದು ಗುರುತಿಸಲಾಗಿದೆ. ಅವರು ಮೀರತ್‌ನ ಸುಭಾರ್ತಿ ವೈದ್ಯಕೀಯ ಕಾಲೇಜಿನ ಬಿಡಿಎಸ್‌ನ ಎರಡನೇ ವರ್ಷದ ವಿದ್ಯಾರ್ಥಿನಿ ಎಂದು ವರದಿಯಾಗಿದೆ. ವಾನಿಯಾಗೆ ಸಹಪಾಠಿ ಸಿದ್ಧಾರ್ಥ್ ಪನ್ವಾರ್ ಕಿರುಕುಳ ನೀಡಿದ್ದು, ಇದರಿಂದ ಬೇಸೆತ್ತ ಅವರು ಆತ್ಮಹತ್ಯೆ ಪ್ರಯತ್ನ ನಡೆಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಘಟನೆಯ ನಂತರ ಮಹಿಳೆಯ ತಂದೆ ನೀಡಿದ ಪೊಲೀಸ್ ದೂರಿನ ಆಧಾರದ ಮೇಲೆ ಸಿದ್ಧಾರ್ಥ್ ಪನ್ವಾರ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು ಎಂದು ಸ್ಥಳೀಯ ಜಾನಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಾಜೇಶ್ ಕುಮಾರ್ ಕಾಂಬೋಜ್ ತಿಳಿಸಿದ್ದರು.

ಇದನ್ನೂ ಓದಿ: ಬೆಂಗಳೂರು ವಿ.ವಿ ಜ್ಞಾನಭಾರತಿ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಹರಿದ ಬಿಎಂಟಿಸಿ‌ ಬಸ್

ವಿದ್ಯಾರ್ಥಿನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕಾಂಬೋಜ್ ತಿಳಿಸಿದ್ದಾರೆ. ಆರೋಪಿಯು ಸಾರ್ವಜನಿಕವಾಗಿ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ್ದನು. ಇದರಿಂದ ಅವರು ಅಸಮಾಧಾನಗೊಂಡಿದ್ದರು ಎಂದು ತನಿಖೆಯ ವೇಳೆ ಪೊಲೀಸರಿಗೆ ತಿಳಿದು ಬಂದಿದೆ ಎಂದು ಎಸ್‌ಎಚ್‌ಒ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌: ಪಾರ್ಕ್‌ನಲ್ಲಿ ಕುಳಿತ್ತಿದ್ದ ವಿದ್ಯಾರ್ಥಿನಿಯರಿಗೆ ಥಳಿಸಿದ ಮಹಿಳಾ ಪೊಲೀಸರು; ನೆಟ್ಟಿಗರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...