Homeರಾಷ್ಟ್ರೀಯಉಪ ಕುಲಪತಿಗಳ ರಾಜೀನಾಮೆ ಕೇಳಿ ಪತ್ರ ಕಳುಹಿಸಿರುವುದು ಸರಿಯಲ್ಲ: ಕೇರಳ ಹೈಕೋರ್ಟ್

ಉಪ ಕುಲಪತಿಗಳ ರಾಜೀನಾಮೆ ಕೇಳಿ ಪತ್ರ ಕಳುಹಿಸಿರುವುದು ಸರಿಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ತಮ್ಮ ಸ್ಥಾನಗಳಿಗೆ ಕೂಡಲೆ ರಾಜಿನಾಮೆ ನೀಡುವಂತೆ ಕೇರಳದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ನೀಡಿದ್ದ ನಿರ್ದೇಶನಕ್ಕೆ ಹಿನ್ನಡೆಯಾಗಿದೆ. ಸೋಮವಾರ ನಡೆದ ವಿಶೇಷ ವಿಚಾರಣೆಯಲ್ಲಿ ಕೇರಳ ಹೈಕೋರ್ಟ್‌‌ ರಾ‌ಜ್ಯಪಾಲರು ಅಂತಿಮ ಆದೇಶ ನೀಡುವವರೆಗೆ ಉಪ ಕುಲಪತಿಗಳು ತಮ್ಮ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಎಂದು ಆದೇಶ ನೀಡಿದೆ.

“ಸೂಕ್ತ ತನಿಖೆಯ ನಂತರವೇ ಉಪ ಕುಲಪತಿಗಳನ್ನು ವಜಾ ಮಾಡಬಹುದು. ರಾಜೀನಾಮೆ ಕೇಳಿ ಪತ್ರ ಬರೆದಿದ್ದು ಸರಿಯಲ್ಲ. ಉಪ ಕುಲಪತಿಗಳ ವಿರುದ್ಧ ಕಾನೂನು ಪ್ರಕಾರ ಮಾತ್ರ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯಪಾಲರು ಕಾರ್ಯವಿಧಾನಗಳನ್ನು ಪೂರ್ಣಗೊಳಿಸಬೇಕು ಎಂದು ನ್ಯಾಯಾಲಯ ಇಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ನಡುವೆ ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿನ ಉಪ ಕುಲಪತಿಗಳ ನೇಮಕಾತಿಗಳು ಪ್ರಾಥಮಿಕವಾಗಿ ಕಾನೂನುಬಾಹಿರವಲ್ಲವೇ ಎಂದು ಹೈಕೋರ್ಟ್ ಕೇಳಿದೆ. ನೇಮಕ ಮಾಡುವ ಅಧಿಕಾರ ರಾಜ್ಯಪಾಲರದ್ದಾಗಿದ್ದು, ಅವರು ಏಕೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಕೇಳಿದೆ.

ಇದನ್ನೂ ಓದಿ: ವಿವಿಗಳ ನೇಮಕಾತಿಗೆ ಅಂಟಿದ ಗುರು-ಶಿಷ್ಯ ಬಾಂಧವ್ಯದ ’ಕಳಂಕ’

“ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿ ನೇಮಕ ಅಸಿಂಧು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ತೀರ್ಪು ಅನ್ವಯವಾಗುವುದಾದರೆ ಉಪ ಕುಲಪತಿಗಳಿಗೆ ಅಕ್ಟೋಬರ್ 24ರವರೆಗೆ ಕಾಲಾವಕಾಶ ನೀಡಿದ ರಾಜ್ಯಪಾಲರು ಗೌರವಾನ್ವಿತರು” ಎಂದೂ ಹೈಕೋರ್ಟ್ ಹೇಳಿದೆ. ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ನೀಡಿರುವ ನೋಟಿಸ್ ವಿರುದ್ಧ ಉಪ ಕುಲಪತಿಗಳು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಮಧ್ಯೆ, ರಾಜ್ಯಪಾಲರು ಕಾನೂನಿನ ಪ್ರಕಾರ ಮಾತ್ರವೆ ಕ್ರಮ ಕೈಗೊಳ್ಳಬಹುದೆ ಹೊರತು ವಜಾಗೊಳಿಸಲು ಸಾಧ್ಯವಿಲ್ಲ ಎಂದು ಉಪ ಕುಲಪತಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪ್ರಸ್ತುತ ಅಸಾಧಾರಣ ಪರಿಸ್ಥಿತಿಯನ್ನು ಪರಿಗಣಿಸಿರುವ ಹೈಕೋರ್ಟ್‌ ರಜೆಯ ದಿನವೂ ವಿಶೇಷ ವಿಚಾರಣೆ ನಡೆಸಿದೆ. ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರ ಪೀಠವು ಉಪ ಕುಲಪತಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸಂಜೆ ನಾಲ್ಕು ಗಂಟೆಗೆ ಪ್ರಾರಂಭಿಸಿತ್ತು.

ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್‌ನ ಆದೇಶವನ್ನು ಉಲ್ಲೇಖಿಸಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಾಜ್ಯದ ಎಲ್ಲಾ ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಕಳೆದ ದಿನ ಸೂಚಿಸಿದ್ದರು.

ಇದನ್ನೂ ಓದಿ: ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಇಂದು ಬೆಳಗ್ಗೆ 11.30ರೊಳಗೆ ರಾಜೀನಾಮೆ ನೀಡಬೇಕು ಎಂದು ರಾಜ್ಯಪಾಲರು ಆಗ್ರಹಿಸಿದ್ದರು. ಆದರೆ ಉಪ ಕುಲಪತಿಗಳು ಯಾರೂ ರಾಜೀನಾಮೆ ನೀಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಈ ನಡುವೆ ಉಪ ಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ನೀಡಿದ್ದ ಗಡುವು ಮುಗಿದಿದ್ದು, ಯಾರೂ ಈ ವರೆಗೆ ರಾಜೀನಾಮೆ ನೀಡಿಲ್ಲ.

ಕೇರಳದ ಇತಿಹಾಸದಲ್ಲಿ ರಾಜಭವನವು ಒಂದು ಅಸಾಮಾನ್ಯ ಹೆಜ್ಜೆಗೆ ಪ್ರವೇಶಿಸಿದೆ. ಯುಜಿಸಿ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ತಾಂತ್ರಿಕ ವಿಶ್ವವಿದ್ಯಾಲಯದ ವಿಸಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್ ಆದೇಶವನ್ನು ಆಧರಿಸಿ ರಾಜ್ಯಪಾಲರು ಈ ಅಸಾಮಾನ್ಯ ಕ್ರಮವನ್ನು ಕೈಗೊಂಡಿದ್ದರು.

ಕೇರಳ ವಿಶ್ವವಿದ್ಯಾಲಯ, ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ತ್‌‌ ಎಳುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಿಗೆ ತಮ್ಮ ಸ್ಥಾನಗಳನ್ನು ತೊರೆಯುವಂತೆ ರಾಜ್ಯಪಾಲರು ಕೇಳಿದ್ದರು.

ಇದನ್ನೂ ಓದಿ: ಹಿಜಾಬ್‌ಗೆ ಅವಕಾಶವಿಲ್ಲದೆ ಮಂಗಳೂರು ವಿವಿಯ ಶೇ.16ರಷ್ಟು ಮುಸ್ಲಿಂ ವಿದ್ಯಾರ್ಥಿನಿಯರು ಡ್ರಾಪ್‌ಔಟ್

ರಾಜ್ಯಪಾಲರ ಆದೇಶವನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾನಿಲಯಗಳನ್ನು ‘ನಾಶಮಾಡುವ’ ಉದ್ದೇಶದಿಂದ ಯುದ್ಧ ನಡೆಸುತ್ತಿದ್ದು, ಸಂಘ ಪರಿವಾರದ ನಾಯಕನಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಈ ಕ್ರಮವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಅಧಿಕಾರ ಮತ್ತು ಶೈಕ್ಷಣಿಕವಾಗಿ ಸ್ವತಂತ್ರವಾಗಿರಬೇಕಾದ ವಿಶ್ವವಿದ್ಯಾಲಯಗಳ ಮೇಲಿನ ಅತಿಕ್ರಮಣವಾಗಿದೆ” ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದರು.

ಕೇರಳ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ತಮ್ಮದೇ ನಿರ್ಧಾರದ ಮೇಲೆ ನೇಮಕ ಮಾಡಿತ್ತು. ರಾಜ್ಯಪಾಲರ ತೀರ್ಮಾನದ ವಿರುದ್ಧ ಆಡಳಿತರೂಢ ಎಡ ಡೆಮಾಕ್ರಟಿಕ್ ಫ್ರಂಟ್ ಮುಂದಿನ ತಿಂಗಳು ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಭಾರಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಆಡಳಿತರೂಢ ಸಿಪಿಐಎಂ ಪಕ್ಷವೂ ಕೇರಳ ಸರ್ಕಾರವನ್ನು ಬೆಂಬಲಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ “ಇಂತಹ ನಿರ್ದೇಶನವನ್ನು ನೀಡಲು ರಾಜ್ಯಪಾಲರಿಗೆ ಯಾವುದೇ ಅಧಿಕಾರವಿಲ್ಲ. ಇದು ಅನಿಯಂತ್ರಿತವಾಗಿದ್ದು, ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದೆ. ಅವರು ಕೇರಳದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಮತ್ತು ನಾಶಮಾಡಲು ಬಯಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಕೇಂದ್ರಿಯ ವಿವಿ ಕನ್ನಡ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ತಮ್ಮ ಶಿಷ್ಯರನ್ನೇ ಆಯ್ಕೆ ಮಾಡಿದ ಸಂದರ್ಶಕರು: ಆರೋಪ

“ಆರೆಸ್ಸೆಸ್ಸ್‌‌ ಕಾರ್ಯಕರ್ತರನ್ನು ನೇಮಿಸಿ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಅವರು ಬಯಸಿದ್ದು, ಈ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುತ್ವ ಸಿದ್ಧಾಂತವನ್ನು ಪ್ರಚಾರ ಮಾಡಲು ಹೊರಟಿದ್ದಾರೆ. ಸಂವಿಧಾನವು ಅಂತಹ ಯಾವುದೇ ಆದೇಶವನ್ನು ನೀಡಲು ರಾಜ್ಯಪಾಲರಿಗೆ ಅನುಮತಿ ನೀಡದ ಕಾರಣ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಾಗುತ್ತದೆ” ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...