Homeಅಂತರಾಷ್ಟ್ರೀಯಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

ಇಂಗ್ಲೇಂಡ್‌ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ

- Advertisement -
- Advertisement -

ಭಾರತೀಯ ಮೂಲದ ರಿಷಿ ಸುನಕ್ ಅವರನ್ನು ಸೋಮವಾರ ಸಂಜೆ ಇಂಗ್ಲೇಂಡ್‌‌ ಪ್ರಧಾನ ಮಂತ್ರಿಯಾಗಿ ಹೆಸರಿಸಲಾಗಿದೆ. ಈ ಮೂಲಕ ಇಂಗ್ಲೇಂಡ್‌‌ನ ಅತ್ಯಂತ ಕಿರಿಯ ಮತ್ತು ಬಿಳಿಯನಲ್ಲದ ಮೊದಲ ಪ್ರಧಾನಮಂತ್ರಿಯಾಗಿ ಅವರು ಹೊರಹೊಮ್ಮಲಿದ್ದಾರೆ. ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಇಂಗ್ಲೇಂಡ್‌‌ನ ಈ ಹಿಂದಿನ ಪ್ರಧಾನಿ ಲಿಜ್ ಟ್ರಸ್‌‌‌ ಅವರು ಅಧಿಕಾರಕ್ಕೆ ಏರಿದ 45 ದಿನಗಳಲ್ಲೆ ರಾಜೀನಾಮೆ ನೀಡಿದ್ದರು.

ಕಳೆದ ಏಳು ತಿಂಗಳಲ್ಲಿ ಇಂಗ್ಲೇಂಡ್‌ ಕಾಣುತ್ತಿರುವ ಮೂರನೇ ಪ್ರಧಾನಿಯಾಗಿದ್ದಾರೆ ರಿಷಿ ಸುನಕ್. ಬೋರಿಸ್ ಜಾನ್ಸನ್‌ ಅವರು ಪ್ರಧಾನಿ ಸ್ಥಾನದಿಂದ ಇಳಿದ ನಂತರ ಲಿಜ್ ಟ್ರಸ್‌‌‌‌ ಅವರ ಉತ್ತರಾಧಿಕಾರಿಯಾಗಿ ಅಧಿಕಾರಕ್ಕೆ ಏರಿದ್ದರು. ಆದರೆ ಕೇವಲ 45 ದಿನಗಳ ಅಧಿಕಾರದ ನಂತರ ಅಕ್ಟೋಬರ್ 20 ರಂದು ಅವರು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರು ಯುಕೆಯಲ್ಲಿ ಅತ್ಯಂತ ಕಿರಿಯ ಮತ್ತು ಮೊದಲ ಬಣ್ಣದ ಪ್ರಧಾನ ಮಂತ್ರಿಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರವಷ್ಟೆ ಕೆರಿಬಿಯನ್ ರಜೆಯನ್ನು ಕಡಿತಗೊಳಿಸಿ ಮತ್ತೆ ಪ್ರಧಾನ ಮಂತ್ರಿ ರೇಸ್‌ಗೆ ಬೋರಿಸ್ ಜಾನ್ಸನ್‌ ಪ್ರವೇಶಿಸಿದ್ದರು. ಆದರೆ ನಿನ್ನೆ ಪ್ರಧಾನಮಂತ್ರಿ ಸ್ಪರ್ಧೆಯ ತಮ್ಮ ಪ್ರಯತ್ನವನ್ನು ಕೊನೆಗೊಳಿಸಿ ಅಚ್ಚರಿ ಮೂಡಿಸಿದ್ದರು. ಸಂಸತ್ತಿನಲ್ಲಿ ಏಕೀಕೃತ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ದುರಂತಗಳಿಗೆ ಅವಕಾಶ ಮಾಡಿಕೊಡುವ ಬೋರಿಸ್ ಜಾನ್ಸನ್ ಪ್ರಮಾದಗಳು

ಪ್ರಧಾನಮಂತ್ರಿ ಸ್ಪರ್ಧೆಯಲ್ಲಿದ್ದ ಇತರ ಸ್ಪರ್ಧಿಗಳಾದ, ಪೆನ್ನಿ ಮೊರ್ಡಾಂಟ್‌ ಪಕ್ಷದ ಆಂತರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅಗತ್ಯವಾದ ನಿರ್ಣಾಯಕ ಸಂಖ್ಯೆಯನ್ನು ಪಡೆಯಲು ವಿಫಲರಾಗಿ, ಸ್ಪರ್ಧೆಯಿಂದ ಹೊರಬಿದ್ದಿದ್ದಾರೆ. ರಿಷಿ ಸುನಕ್ ಅವರು ಸಂಸತ್ತಿನ 142 ಸದಸ್ಯರ ಬೆಂಬಲವನ್ನು ಹೊಂದಿದ್ದಾರೆ.

“ನಮ್ಮ ಆರ್ಥಿಕತೆಯನ್ನು ಸರಿಪಡಿಸಲು, ಪಕ್ಷವನ್ನು ಒಗ್ಗೂಡಿಸಲು ಮತ್ತು ನಮ್ಮ ದೇಶಕ್ಕಾಗಿ ಸೇವೆ ಸಲ್ಲಿಸಲು ನಾನು ಬಯಸುತ್ತೇನೆ” ಎಂದು ರಿಷಿ ಸುನಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬ್ರಿಟನ್ ಆರ್ಥಿಕವಾಗಿ ಭಾರಿ ಆರ್ಥಿಕ ಹಿಂಜರಿತ ಮತ್ತು ಹೆಚ್ಚುತ್ತಿರುವ ಬಡ್ಡಿದರಗಳ ಸಂಯೋಜನೆಯನ್ನು ಎದುರಿಸುತ್ತಿದೆ. ಆರ್ಥಿಕ ತಜ್ಞರು ಇದಕ್ಕೆ ಕನ್ಸರ್ವೇಟಿವ್ ಪಕ್ಷವನ್ನು ದೂರುತ್ತಿದ್ದು, “ಆರ್ಥಿಕ ಹಿನ್ನಡೆಯು ಪಕ್ಷದ ತಪ್ಪು ಲೆಕ್ಕಾಚಾರಗಳ ಸರಣಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್ ನೂತನ ಪ್ರಧಾನಿಯಾಗಿದ್ದ ಲಿಜ್ ಟ್ರಸ್ ರಾಜೀನಾಮೆ

ರಿಷಿ ಸುನಕ್ ಮುಂದಿನ ಪ್ರಧಾನಿಯಾಗುತ್ತಾರೆ ಎಂಬುದು ಸ್ಪಷ್ಟವಾಗುತ್ತಿದ್ದಂತೆ ಪೌಂಡ್ ಇಂದು ಸ್ವಲ್ಪಮಟ್ಟಿಗೆ ಏರಿಕೆ ಕಂಡಿದೆ ಎಂದು ವರದಿಯಾಗಿದೆ. ರಿಷಿ ಸುನಕ್ ಅವರು ಬ್ಯಾಂಕ್ ಆಫ್ ಇಂಗ್ಲೆಂಡ್‌ನ ಸ್ವಾತಂತ್ರ್ಯವನ್ನು ಸಹ ಬೆಂಬಲಿಸಿದ್ದಾರೆ.

ಭಾರತ ಮೂಲದ ರಿಷಿ ಸುನಕ್ ಅವರು ಇನ್ಫೋಸಿಸ್‌ನ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅವರ ಪತಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬಾರತ ಮೂಲದ ರಿಶಿ ಸುನಕ್ ಇಂಗ್ಲೆಂಡ್ ಪ್ರದಾನಿ ಆಗಬಹುದು, ಆದರೆ ಇಟಲಿ ಮೂಲದ ಸೋನಿಯಾ ಗಾಂಧಿಯವರು ಬಾರತದ ಪ್ರದಾನಿ ಆಗಬಾರದು! ಇದು ನಮ್ಮ ನಿಯಮ.

  2. ನಮ್ಮ ಭಾರತ ದೇಶದಲ್ಲಿ ಹೋರದೇಶದವರು ಬಂದ್ದು ಪ್ರಧಾನಿ ಮುಖ್ಯಮಂತ್ರಿ ಆಯ್ಕೆಮಾಡಿದರೆ ದೇಶವು ಸತ್ಯ ನ್ಯಾಯ ಹಾಗೆ ಸಂವಿಧಾನ ಗೌರವಿಸುವುದು ಕಲಿಸುತ್ತಾರೆ ಜೀವನದ ಸತ್ಯ ವಾಗಿ ಮನುಷ್ಯ ಜೀವಿಸುವ ಮಾರ್ಗ ಕಲಿಸಿಕೋಡುವುದರಿಂದ ಮಾಟಮಂತ್ರ ರೌಡಿಜಂ ಜಾತಿಗಳು ದರ್ಮ ಜಗಳ ಹೋಗಿ ನೇಮ್ಮದಿಯಾಗಿ ಜೀವಿಸಲಿಕ್ಕೆ ಆಶೀರ್ವಾದ ಆಗಬಹುದು ಅನಿಸುತ್ತದೆ

  3. Yes you are correct sister when our country is leaving the castiesm andquarrl between the two religions that.time is our country is becoming devloped

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...