Homeಮುಖಪುಟಉತ್ತರ ಪ್ರದೇಶ: ರಕ್ತಸಿಕ್ತ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಪತ್ತೆ- ಅತ್ಯಾಚಾರದ ಶಂಕೆ

ಉತ್ತರ ಪ್ರದೇಶ: ರಕ್ತಸಿಕ್ತ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿ ಪತ್ತೆ- ಅತ್ಯಾಚಾರದ ಶಂಕೆ

- Advertisement -
- Advertisement -

ಉತ್ತರ ಪ್ರದೇಶದ ಕನೌಜ್‌ನಲ್ಲಿ ಸರ್ಕಾರಿ ಅತಿಥಿ ಗೃಹದ ಬಳಿ ತೀವ್ರ ಗಾಯಕ್ಕೊಳಗಾಗಿ ರಕ್ತಸಿಕ್ತ ಸ್ಥಿತಿಯಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ಪತ್ತೆಯಾಗಿದ್ದು ಕಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿ ಕೂಗುವುದನ್ನು ಕೇಳಿಸಿಕೊಂಡ ಸೆಕ್ಯರಿಟಿ ಗಾರ್ಡ್ ಪೊಲೀಸರಿಗೆ ಮಾಹಿತಿ ಮುಟ್ಟಿಸಿದರು. ಅಲ್ಲಿಯವರೆಗೂ ಸುತ್ತ ನೆರದಿದ್ದ ಜನರು ಆ ಬಾಲಕಿ ಕೂಗುತ್ತಿದ್ದರು ಸಹಾಯ ಮಾಡದೆ ಕೇವಲ ವಿಡಿಯೋ ಮಾಡಿಕೊಳ್ಳುತ್ತಿದ್ದರು ಎಂದು ಆರೋಪಿಸಲಾಗಿದೆ. ಪೊಲೀಸರು ಬಂದ ನಂತರವೇ ಆ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಅಂಗಡಿಗೆ ತೆರಳಿದ್ದ ಬಾಲಕಿ ಮನೆಗೆ ವಾಪಸ್ ಬಂದಿರಲಿಲ್ಲ. ಆ ಬಾಲಕಿಯೊಂದಿಗೆ ಒಬ್ಬ ಯುವಕ ನಡೆದು ಹೋಗುತ್ತಿರುವುದು ಅತಿಥಿ ಗೃಹದ ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಆತನ ಪತ್ತೆ ಹಚ್ಚಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿಯ ಹಣೆ, ಕೈ ಕಾಲುಗಳಿಗೆ ಗಾಯವಾಗಿರುವುದರಿಂದ ಅತ್ಯಾಚಾರಕ್ಕೆ ಯತ್ನ ನಡೆದಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. “ಇದುವರೆಗೂ ಅತ್ಯಾಚಾರ ನಡೆದಿರುವುದರ ಬಗ್ಗೆ ಖಚಿತವಾಗಿಲ್ಲ, ವೈದ್ಯಕೀಯ ವರದಿಗಳು ಬಂದ ನಂತರವಷ್ಟೇ ಆ ಕುರಿತು ಮಾಹಿತಿ ನೀಡಲಾಗುವುದು” ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಹೇಳಿದ್ದಾರೆ.

ಸಂತ್ರಸ್ತ ಬಾಲಕಿಯ ಕುಟುಂಬವು ದೂರು ನೀಡಿದೆ. ಈ ಕುರಿತು ತನಿಖೆ ನಡೆಸುತ್ತಿದ್ದೇವೆ. ಇನ್ನು ಯಾರನ್ನೂ ಬಂಧಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:  ಗೌರಿ ಲಂಕೇಶ್ ಹತ್ಯೆ ಆರೋಪಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read