Homeಕ್ರೀಡೆಕ್ರಿಕೆಟ್ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

ಪುರುಷ-ಮಹಿಳಾ ಕ್ರಿಕೆಟರ್‌ಗಳಿಬ್ಬರಿಗೂ ಸಮಾನ ವೇತನ: ಬಿಸಿಸಿಐ ನಿರ್ಧಾರ

- Advertisement -
- Advertisement -

ಇನ್ನು ಮುಂದೆ ಪುರುಷ ಮತ್ತು ಮಹಿಳಾ ಕ್ರಿಕೆಟರ್‌ಗಳಿಗೆ ಪ್ರತಿ ಪಂದ್ಯಕ್ಕೆ ನೀಡುವ ವೇತನದಲ್ಲಿ ಸಮಾನತೆ ತರಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರನ ಮಂಡಳಿ (ಬಿಸಿಸಿಐ) ತಿಳಿಸಿದೆ.

ಇದುವರೆಗೂ ಪುರಷ ಕ್ರಿಕೆಟರ್‌ಗಳು ಪಡೆಯುತ್ತಿದ್ದ ಪಂದ್ಯ ಶುಲ್ಕವನ್ನು ಇನ್ನು ಮುಂದೆ ಮಹಿಳಾ ಕ್ರಿಕೆಟರ್‌ಗಳು ಪಡೆಯಲಿದ್ದಾರೆ. ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಆಟಗಾರರು ತಲಾ ಟೆಸ್ಟ್ ಪಂದ್ಯಕ್ಕೆ 15 ಲಕ್ಷ ರೂ, ಏಕದಿನ ಪಂದ್ಯಕ್ಕೆ 6 ಲಕ್ಷ ರೂ ಮತ್ತು ಟಿ20 ಪಂದ್ಯಕ್ಕೆ 3 ಲಕ್ಷ ರೂ ಪಡೆಯುತ್ತಿದ್ದರು. ಅದೇ ಶುಲ್ಕವನ್ನು ಬಿಸಿಸಿಐನೊಂದಿಗೆ ಒಪ್ಪಂದ ಮಾಡಿಕೊಂಡ ಮಹಿಳಾ ಆಟಗಾರರು ಸಹ ಪಡೆಯಲಿದ್ದಾರೆ.

ಈ ವರ್ಷದ ಆರಂಭದಲ್ಲಿ, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿತು, ಮಹಿಳಾ ರಾಷ್ಟ್ರೀಯ ತಂಡ ಮತ್ತು ದೇಶೀಯ ಮಹಿಳಾ ಆಟಗಾರರು ಪುರುಷರಿಗೆ ಸಮಾನವಾದ ಪಂದ್ಯ ಶುಲ್ಕವನ್ನು ಪಡೆಯುತ್ತಾರೆ ಎಂದು ಘೋಷಿಸಿದೆ.

ಭಾರತದಲ್ಲಿ ಕ್ರಿಕೆಟ್‌ ಸೇರಿದಂತೆ ಇತರ ಕ್ರೀಡೆಗಳಲ್ಲಿ ಪುರುಷರ ತಂಡಕ್ಕೆ ಹೆಚ್ಚಿನ ಪ್ರಾಧಾನ್ಯತೆ ಕೊಡುತ್ತಿರುವುದನ್ನು ನೋಡಿದ್ದೇವೆ. ಅದನ್ನು ಬದಲಿಸುವ ಕ್ರಮಗಳನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗುತ್ತಿದೆ. ಬ್ಯಾಟ್ಸ್‌ಮನ್ ಎಂದು ಕರೆಯುವ ಬದಲು ಲಿಂಗಶೂನ್ಯವನ್ನು ಸೂಚಿಸಲು ಬ್ಯಾಟರ್ ಎಂದು ಕರೆಯಬೇಕು, ಅದೇ ರೀತಿ ಮ್ಯಾನ್ ಆಫ್ ದಿ ಮ್ಯಾಚ್ ಎಂದು ಕರೆಯುವ ಬದಲು ಪ್ಲೇಯರ್ ಆಫ್ ದಿ ಮ್ಯಾಚ್ ಎಂದು ಕರೆಯಬೇಕೆಂಬ ಹಲವು ಬದಲಾವಣೆಗಳನ್ನು ತರಲಾಗಿದೆ.

ಇದುವರೆಗೂ ಕೇವಲ ಪುರುಷರ ಐಪಿಎಲ್ ಟೂರ್ನಿಗಳು ನಡೆದಿವೆ. 2023ರ ರಿಂದ ಮಹಿಳಾ ಐಪಿಎಲ್ ಸಹ ನಡೆಸಲಾಗುವುದು ಎಂದು ಬಿಸಿಸಿಐ ಕೆಲ ದಿನಗಳ ಹಿಂದೆಯಷ್ಟೆ ಘೋಷಿಸಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಕನ್ನಡ ಚಿತ್ರನಟಿ ರಮ್ಯಾ ದಿವ್ಯ ಸ್ಪಂದನ, “ತೀವ್ರ ಅಗತ್ಯವಿದ್ದ, ತುಂಬಾ ಶ್ಲಾಘನೀಯ ನಿರ್ಧಾವಾಗಿದೆ. ಮನೋರಂಜನ ರಂಗ ಸಹ ಇದನ್ನು ಅನುಕರಿಸಬೇಕು” ಎಂದಿದ್ದಾರೆ.

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅಮೋಘ ಪ್ರದರ್ಶನ ನೀಡುತ್ತಿದೆ. ಟಿ20 ವಿಶ್ವಕಪ್‌ನಲ್ಲಿ ಫೈನಲ್ ಪ್ರವೇಸಿಸಿದ್ದ ಅದು ಏಷ್ಯಾ ಕಪ್ ಗೆದ್ದು ಬೀಗಿತ್ತು.

ಇದನ್ನೂ ಓದಿ; ಟಿ20 ವಿಶ್ವಕಪ್ ಸೆಮಿಫೈನಲ್‌ಗೇರಲು ಭಾರತದ ಮುಂದಿನ ಹಾದಿ ಹೀಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...