Homeಕರ್ನಾಟಕಮೈಸೂರು: ಸ್ಕಾಲರ್‌ಶಿಪ್‌ ವಿಳಂಬವಾಗಿ ವಿದ್ಯಾರ್ಥಿಗಳ ಬದುಕು ಅತಂತ್ರ; ಮುಂದುವರಿದ ಪ್ರತಿಭಟನೆ

ಮೈಸೂರು: ಸ್ಕಾಲರ್‌ಶಿಪ್‌ ವಿಳಂಬವಾಗಿ ವಿದ್ಯಾರ್ಥಿಗಳ ಬದುಕು ಅತಂತ್ರ; ಮುಂದುವರಿದ ಪ್ರತಿಭಟನೆ

- Advertisement -
- Advertisement -

ಮೈಸೂರು: ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿತ ಗೊಂದಲಗಳ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರಿದಿದೆ. ದಿಢೀರನೇ ಸಾವಿರಾರು ರೂಪಾಯಿ ಶುಲ್ಕವನ್ನು ಹೆಚ್ಚಿಸಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು ಹೋರಾಟ ನಡೆಸುತ್ತಿದ್ದಾರೆ.

ಪ್ರವೇಶ ಶುಲ್ಕ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿತ ಗೊಂದಲಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣ ಇಲಾಖೆ ಎದುರುಗಡೆ ಜಮಾಯಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದೆ.ಕಾಲೇಜುಗಳಲ್ಲಿ ಏಕಾಏಕಿ, ಎಲ್ಲಾ ವಿದ್ಯಾರ್ಥಿಗಳಿಗೂ ಮೊದಲನೇ ವರ್ಷದ, ಎರಡನೇ ವರ್ಷದ ಹಾಗೂ ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ಒಟ್ಟಿಗೆ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ” ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಜ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ ರೂ.30,000 ಹಾಗೂ ಯುವರಾಜ ಕಾಲೇಜಿನಲ್ಲಿ 30ರಿಂದ 60 ಸಾವಿರ ರೂ. ಶುಲ್ಕವನ್ನು ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ. ಇಷ್ಟು ದೊಡ್ಡ ಮೊತ್ತದ ಪ್ರವೇಶ ಶುಲ್ಕವನ್ನು ಕಟ್ಟಲು ಸಾಧ್ಯವಿಲ್ಲ. ಮೂರನೇ ವರ್ಷದ ಪ್ರವೇಶ ಶುಲ್ಕವನ್ನು ವಿದ್ಯಾರ್ಥಿವೇತನ ಬಂದ ನಂತರ ಕಟ್ಟಲಾಗುವುದು. ಅದಕ್ಕಾಗಿ ಸಮಯಾವಕಾಶ ಕೊಡಿ ಎಂದು ಆಗ್ರಹಿಸಿದ್ದಾರೆ.

ಎಷ್ಟೋ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಸಾವಿರಾರು ರೂಪಾಯಿ ಪ್ರವೇಶ ಶುಲ್ಕವನ್ನು ಕಟ್ಟಿ ಎಂದು ಒತ್ತಡ ಹೇರುತ್ತಿರುವುದು ವಿದ್ಯಾರ್ಥಿ ವಿರೋಧಿ ನಿಲುವಾಗಿದೆ. ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವುದು ಬಹುತೇಕ ವಿದ್ಯಾರ್ಥಿಗಳು ಬಡವರ ರೈತರ ಕೂಲಿ ಕಾರ್ಮಿಕರ ಮಕ್ಕಳು. ಇವರಿಗೆ ಏಕಾಏಕಿ ಸಾವಿರಾರು ರೂಪಾಯಿ ಶುಲ್ಕ ಕಟ್ಟಿ ಎಂದು ಹೇಳಿದರೆ ಹೇಗೆ ಕಟ್ಟಲು ಸಾಧ್ಯ? ಎಂದು ವಿದ್ಯಾರ್ಥಿಗಳು ಪ್ರಶ್ನಿಸಿದ್ದಾರೆ.

ಸರ್ಕಾರ ಹಾಗೂ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಈ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

“ಕಾಲೇಜಿಗೆ ನೇರವಾಗಿ ಸ್ಕಾಲರ್‌ಶಿಪ್‌ ರೂಪದಲ್ಲಿ ವಿದ್ಯಾರ್ಥಿಗಳ ಶುಲ್ಕವನ್ನು ಪಾವತಿಸುತ್ತಿದ್ದ ಸರ್ಕಾರ ಈಗ ವಿದ್ಯಾರ್ಥಿಗಳ ಖಾತೆಗೆ ವಿದ್ಯಾರ್ಥಿ ವೇತನವನ್ನು ಜಮಾ ಮಾಡುವುದಾಗಿ ಹೇಳಿ ವಂಚಿಸುತ್ತಿದೆ. ಸ್ಕಾಲರ್‌ಶಿಪ್‌ ನಿಮ್ಮ ಖಾತೆಗೆ ಬಂದಿದ್ದು, ಅದನ್ನು ವಿತ್‌‌ಡ್ರಾ ಮಾಡಿಕೊಂಡು ಪ್ರವೇಶಾತಿ ಪಡೆಯಿರಿ ಎಂದು ಕಾಲೇಜುಗಳು ಒತ್ತಡ ಸೃಷ್ಟಿಸಿವೆ. ಆದರೆ ನಮಗೆ ಯಾವುದೇ ಹಣ ಸರ್ಕಾರದಿಂದ ಬಂದಿಲ್ಲ. ಈ ಮೂಲಕ ಸರ್ಕಾರ ಮತ್ತು ವಿಶ್ವವಿದ್ಯಾನಿಲಯ ನಮ್ಮ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಮನವಿ ಪತ್ರವನ್ನು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳಾದ ಸುಭಾಷ್, ಚಂದ್ರಕಲಾ, ಆಸಿಯಾ ನಿತಿನ್, ಸ್ವಾತಿ, ಚಂದ್ರಿಕಾ, ಚಂದನ, ಹೇಮಾ ವಿದ್ಯಾರ್ಥಿಗಳಾದ ಸಂಗೀತಾ, ಕಾವ್ಯ, ಅಂಜಲಿ ಐಶ್ವರ್ಯ, ನಿರ್ಮಲಾ, ರಮ್ಯಾ, ಕೋಮಲಾ ಹಾಗೂ ಇನ್ನಿತರ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

0
ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ. "ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ...