ಶನಿವಾರ ಮುಂಜಾನೆ ದಕ್ಷಿಣ ಬಿಹಾರದ ಔರಂಗಾಬಾದ್ ಜಿಲ್ಲೆಯ ಜನದಟ್ಟಣೆಯ ಕಾಲುದಾರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಿಲಿಂಡರ್‌ಗೆ ಸ್ಪೋಟಗೊಂಡು ಏಳು ಪೊಲೀಸ್ ಸಿಬ್ಬಂದಿ ಸೇರಿದಂತೆ 30 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಎನ್‌ಡಿಟಿವಿ ವರಿದ ಮಾಡಿದೆ.
ಘಟನೆಯಿಂದಾಗಿ ಕನಿಷ್ಠ ಹತ್ತು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಔರಂಗಾಬಾದ್ ಪಟ್ಟಣದ ಶಹಗಂಜ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಬೆಳಗಿನ ಜಾವ 2:30ಕ್ಕೆ ಕುಟುಂಬವೊಂದು ಛತ್ ಪೂಜೆಗೆ “ಪ್ರಸಾದ” ತಯಾರಿ ನಡೆಯುತ್ತಿದ್ದಾಗ ಮನೆಯೊಳಗೆ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಟೌನ್ ಪೊಲೀಸ್ ಠಾಣೆಯ ಪ್ರಭಾರಿ ಸಬ್ ಇನ್ಸ್ಪೆಕ್ಟರ್ ವಿನಯ್ ಕುಮಾರ್ ಸಿಂಗ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿದ್ದು, ನಿವಾಸಿಗಳನ್ನು ತೆರವುಗೊಳಿಸುವ ಮೊದಲೆ ಬೆಂಕಿ ಹೊತ್ತಿಕೊಂಡಿದೆ ಎಂದು ಮನೆಯ ಮಾಲೀಕ ಅನಿಲ್ ಗೋಸ್ವಾಮಿ ಅವರು ಹೇಳಿದ್ದಾರೆ” ಎಂದು ವಿನಯ್ ಕುಮಾರ್ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: ಕೃತಿಚೌರ್ಯ ಆರೋಪ: ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿಗೆ ಕೇರಳ ನ್ಯಾಯಾಲಯ ತಡೆಯಾಜ್ಞೆ
ಪೊಲೀಸ್ ತಂಡ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿದ್ದಾರೆ. ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ಮಹಿಳಾ ಪೇದೆ ಸೇರಿದಂತೆ ಏಳು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Bihar: A massive fire broke out outside Agam Kuan Police Station in Patna. Dozens of seized vehicles parked outside the PS burned to ashes. Fire tenders at the spot. More details awaited. pic.twitter.com/gOwHaLd4F0
— ANI (@ANI) April 23, 2021
ಗಾಯಾಳುಗಳನ್ನು ಸದರ್ ಆಸ್ಪತ್ರೆ ಮತ್ತು ಖಾಸಗಿ ನರ್ಸಿಂಗ್ ಹೋಂಗೆ ದಾಖಲಿಸಲಾಗಿದೆ ಎಂದು ವರದಿಯಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ‘ಇಂಡಿಗೋ’ ವಿಮಾನದಲ್ಲಿ ಬೆಂಕಿ!


