Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

- Advertisement -
- Advertisement -

ಕನ್ನಡಿಗರ ಹೃದಯದಲ್ಲಿ ನೆಲೆಸಿರುವ ಪುನೀತ್‌ ರಾಜ್‌ಕುಮಾರ್‌, ಎಲ್ಲರ ಪ್ರೀತಿಯ ನಟ ಅಪ್ಪು ಅವರು ಅಗಲಿ ಒಂದು ವರ್ಷವಾಗಿದೆ. ಪುನೀತ್‌‌ ಅವರ ಪ್ರಕೃತಿ ಪ್ರೀತಿಯನ್ನು ದಾಖಲಿಸಿರುವ ‘ಗಂಧದಗುಡಿ’ ಸಾಕ್ಷ್ಯಚಿತ್ರವೂ ಚಿತ್ರಮಂದಿರದಲ್ಲಿ ಪ್ರದರ್ಶನವಾಗುತ್ತಿದೆ. ಅಪ್ಪು ನಮ್ಮನ್ನು ನಿನ್ನೆ ಮೊನ್ನೆಯೋ ಬಿಟ್ಟು ಹೋದರೇನೋ ಎಂಬಂತೆ ಭಾಸವಾಗುತ್ತಿದೆ. ಅವರ ಕುರಿತು ಯಾರಾದರೂ ಹಗುರವಾಗಿ ಮಾತನಾಡುವುದನ್ನು ಕನ್ನಡಿಗರು ಊಹಿಸುವುದೂ ಇಲ್ಲ, ಸಹಿಸುವುದಿಲ್ಲ ಇಲ್ಲ. ಈ ಹೊತ್ತಿನಲ್ಲಿ ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರು ಹಗುರವಾಗಿ ಮಾತನಾಡಿದ್ದಾರೆಂದು ಪ್ರತಿಪಾದಿಸಿ ಪೋಸ್ಟರ್‌ವೊಂದು ವೈರಲ್‌ ಆಗುತ್ತಿದೆ.

“ಪುನೀತ್‌ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ?- ಚಕ್ರವರ್ತಿ ಸೂಲಿಬೆಲೆ” ಎಂದಿರುವ ಪೋಸ್ಟರ್‌ಅನ್ನು ಸಾಕಷ್ಟು ಜನರು ಹಂಚಿಕೊಳ್ಳುತ್ತಿದ್ದಾರೆ. ‘ಬಿ ಟಿವಿ’ ಚಾನೆಲ್‌ ವರದಿ ಮಾಡಿರುವಂತೆ ಈ ಪೋಸ್ಟರ್‌ ರೂಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

May be an image of 1 person and text that says "ಪುನೀತ್ ಅವರನ್ನು ಇಷ್ಟೊಂದು ಆರಾಧಿಸುವ ಅಗತ್ಯವೇನಿದೆ. ಅವರೇನು ಸೈನಿಕರೇ? BTVNEWSLIVE.COM ಚಕ್ತವರ್ತಿ ಸೂಲಿಬೆಲೆ"

ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಈ ಪೋಸ್ಟರ್‌ ಅನ್ನು ಅನೇಕರು ಫೇಸ್‌ಬುಕ್‌ನಲ್ಲೂ ಹಂಚಿಕೊಂಡಿದ್ದಾರೆ. ಕೆಲವರು ಡಿಲೀಟ್ ಕೂಡ ಮಾಡಿದ್ದಾರೆ. ವಾಟ್ಸ್‌ಅಪ್‌ ಗ್ರೂಪ್‌ಗಳಲ್ಲಿ ಸೂಲಿಬೆಲೆಯವರಿಗೆ ಖಾರವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ವಾಟ್ಸ್‌ಅಪ್‌ ಗ್ರೂಪ್‌ವೊಂದರಲ್ಲಿ ಆಗಿರುವ ಚರ್ಚೆ

“ಮೊದಲು ಹಂಸಲೇಖ. ಆಮೇಲೆ ಚೇತನ್ ಅಹಿಂಸಾ. ಇವಾಗ ಡಾಲಿ ಧನಂಜಯ. ಮತ್ತೆ ಪುನೀತ್ ರಾಜ್ ಕುಮಾರ್ ರವರ ಬಳಿ ಬರ್ತಿದಾರೆ. ಇದಕ್ಕೆ ಅಭಿಮಾನಿಗಳೇ ಉತ್ತರ ನೀಡ್ತಾರೆ. ಇದ್ಯಾಕೋ ಅತಿ ಅಯ್ತು ಅನ್ಸಲ್ವಾ?” ಎಂದು ಅಪ್ಪು ಅಭಿಮಾನಿಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಡಾ.ಪುನೀತ್ ರಾಜ್ ಕುಮಾರ್ ನಮಗೆಲ್ಲ ಸ್ಪೂರ್ತಿ. ಅವರನ್ನು ಕಳೆದುಕೊಂಡಾಗ ಕರ್ನಾಟಕದ ಪ್ರತಿಯೊಬ್ಬರು ಕಣ್ಣೀರು ಹಾಕಿದ್ದಾರೆ. ನಮ್ಮ ಅಪ್ಪು ಬಗ್ಗೆ ಮಾತನಾಡುವ ಅರ್ಹತೆಯೂ ನಿಮಗಿಲ್ಲ. ನಮ್ಮ ಪರಮಾತ್ಮ, ನಿಮ್ಮಂತೆ ನಮಗೆ ಸುಳ್ಳು ಹೇಳಿಲ್ಲ” ಎಂದು ಯೂತ್‌ ಕಾಂಗ್ರೆಸ್ ಕರ್ನಾಟಕ ಘಟಕವು ಟ್ವೀಟ್ ಮಾಡಿದೆ. (ಅರ್ಕೈವ್‌ ಲಿಂಕ್‌)

“ಈ ರೀತಿಯಲ್ಲಿ ಬಿಟಿವಿ ವರದಿ ಮಾಡಿದೆಯೇ?” “ಸುದ್ದಿ ನಿಜವೇ?” ಎಂದು ‘ನಾನುಗೌರಿ.ಕಾಂ’ ಪರಿಶೀಲಿಸಿದೆ. ‘ಬಿ ಟಿವಿ’ಯ ಪತ್ರಕರ್ತ ನವೀನ್‌ ಸೂರಿಂಜೆ ಅವರನ್ನು ಸಂಪರ್ಕಿಸಿದಾಗ, “ಈ ರೀತಿಯ ಶೀರ್ಷಿಕೆಯಲ್ಲಿ ಯಾವುದೇ ಸುದ್ದಿಯನ್ನು ನಾವು ಮಾಡಿಲ್ಲ. ಆದರೆ ಬಿ.ಟಿ.ಯ ಮಾದರಿಯಲ್ಲೇ ಪೋಸ್ಟರ್‌ ಎಡಿಟ್ ಮಾಡಲಾಗಿದೆ. ಹಿಂದೊಮ್ಮೆ ಆಗಿದ್ದ ಸುದ್ದಿಯಲ್ಲಿ ಶೀರ್ಷಿಕೆಯನ್ನು ಅಳಸಿ, ಬೇರೆ ಶೀರ್ಷಿಕೆ ನೀಡಿ ವೈರಲ್‌ ಮಾಡಿದ್ದಾರೆ. ಸೂಲಿಬೆಲೆಯವರು ಪುನೀತ್ ರಾಜ್‌ಕುಮಾರ್‌ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದು ಚರ್ಚೆಯಾಗಿತ್ತು. ಈಗ ವೈರಲ್‌ ಆಗುತ್ತಿರುವ ಪೋಸ್ಟರ್‌ಗೂ ಬಿಟಿವಿಗೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು. ಬಿಟಿವಿ ಮಾಡಿದ್ದ ಹಳೆಯ ಸುದ್ದಿ ತುಣುಕನ್ನು ‘ನಾನುಗೌರಿ.ಕಾಂ’ ಗಮನಕ್ಕೆ ತಂದರು.

“ಹಿಂದೂಗಳ ರಕ್ಷಣೆ ನೀವೇ ಮಾಡುತ್ತೀರೋ, ನಾವೇ ಮಾಡಿಕೊಳ್ಳಬೇಕಾ… ಗೃಹ ಸಚಿವರಿಗೆ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ…” ಎಂಬ ಶೀರ್ಷಿಕೆಯಲ್ಲಿ ‘ಬಿ ಟಿವಿ’ ಮಾಡಿರುವ ವರದಿಯಲ್ಲಿ ಬಳಸಲಾಗಿರುವ ಪೋಸ್ಟರ್‌ನಲ್ಲಿ ‘ಸರ್ಕಾರ ಹಾಗೂ ಇಂಟೆಲಿಜೆನ್ಸ್‌ ವಿಫಲವಾಗಿದೆ’ ಎಂದು ಬರೆದಿರುವುದನ್ನು ಕಾಣಬಹುದು.

ಅಪ್ಪು ಬಗ್ಗೆ ಹಗುರವಾಗಿ ಮಾತನಾಡಿದ ಆರೋಪ; ನಂತರ ಕ್ಷಮೆಯಾಚಿಸಿದ್ದ ಸೂಲಿಬೆಲೆ

“ಚಕ್ರವರ್ತಿ ಸೂಲಿಬೆಲೆ ಅಪ್ಪು ಬಗ್ಗೆ ಹಗುರವಾಗಿ ಟ್ವೀಟ್‌ ಮಾಡಿದ ಆರೋಪಕ್ಕೆ ಈ ಹಿಂದೆ ಗುರಿಯಾಗಿದ್ದರು.” ಬೊಮ್ಮಾಯಿಯವರನ್ನು ಟೀಕಿಸುವ ಭರದಲ್ಲಿ ಅಪ್ಪು ಅವರ ಸಾವಿನ ಸಂದರ್ಭದ ಬಗ್ಗೆ ಲಘುವಾಗಿ ಟ್ವೀಟ್ ಮಾಡಿದ್ದು ಆಕ್ಷೇಪಗಳಿಗೆ ಕಾರಣವಾಗಿತ್ತು.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಟೀಕಿಸುತ್ತಾ ಚಕ್ರವರ್ತಿ ಸೂಲಿಬೆಲೆ, ಪುನೀತ್‌ ರಾಜ್‌ಕುಮಾರ್‌ರನ್ನು ಅವಮಾನಿಸಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಸೂಲಿಬೆಲೆ ಕ್ಷಮೆಯಾಚಿಸಿದ್ದರು.

ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಸಂಸದ ಜಿ.ಎಂ ಸಿದ್ದೇಶ್ವರರವರು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ಕೊಟ್ಟರೆ ತೊಂದರೆಯಿಲ್ಲ, ಬೇಕಾದಷ್ಟು ಜನರಿದ್ದಾರೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ್ದ ಚಕ್ರವರ್ತಿ ಸೂಲಿಬೆಲೆ, ರಾಜ್ಯ ಬಿಜೆಪಿ ಸರ್ಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿಯವರ ವಿರುದ್ಧ ಸರಣಿ ಟ್ವೀಟ್ ಮಾಡಿದ್ದರು. ಅದರಲ್ಲಿ ಅಪ್ಪು ಸಾವಿನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮೂರು ದಿನ ಸಮಯ ಏಕೆ ನೀಡಬೇಕಿತ್ತು ಎಂಬರ್ಥದಲ್ಲಿ ಬರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

“ನಮ್ಮ ಫೈಲ್‌ಗಳಿಗೆ ಸಹಿ ಹಾಕುವಷ್ಟು ಸಿಎಂಗೆ ಸಮಯವಿಲ್ಲವೆ ಎಂದು ಕೆಲ ಶಾಸಕರು ದೂರುತ್ತಿದ್ದಾರೆ. ಆದರೆ ಪ್ರೀಮಿಯರ್ ಸಿನಿಮಾಗಳನ್ನು ನೋಡಿ ಕಣ್ಣೀರು ಹಾಕಲು ಅವರಿಗೆ ಸಮಯವಿದೆ. ಸಿನಿಮಾ ನಟರೊಬ್ಬರ ಸಾವಿನ ಸಂದರ್ಭದಲ್ಲಿ ಅದರಲ್ಲಿ ತೊಡಗಿಸಿಕೊಳ್ಳಲು ಮೂರು ದಿನ ಸಮಯ ನೀಡಿದ್ದರು. ಈಗಲೂ ಸಾಕಷ್ಟು ಪ್ರತಿರೋಧ ಬಾರದಿದ್ದರೆ ಅವರು ಖಂಡಿತ ವಿಕ್ರಾಂತ್ ರೋಣ ಸಿನಿಮಾ ನೋಡುತ್ತಿದ್ದರು” ಎಂದು ಸೂಲಿಬೆಲೆ ಅಣಕ ಮಾಡಿದ್ದರು.

“ಉಪಯೋಗಕ್ಕೆ ಬಾರದ ಸಿಎಂನ ಏನಾದ್ರೂ ಬೈದುಕೊ. ಆದ್ರೆ ಪುನೀತ್ ರಾಜ್ಕುಮಾರ್ ಅವರನ್ನು ಕೇವಲ ಒಬ್ಬ ನಟ ಅನ್ನಬೇಡ ಮೂರ್ಖ. ಅವರು ನಮ್ಮ ರಾಜ್ಯದ ಸಾಂಸ್ಕೃತಿಕ ರಾಯಭಾರಿ. ನಿಮ್ಮ ಧರ್ಮಾಂಧತೆ ವಿಷಯಕ್ಕೆ ಅವರು ಯಾವತ್ತೂ ಸೊಪ್ಪು ಹಾಕಿಲ್ಲ. ಅಮಾಯಕರು ಸಾಯ್ತಾ ಇರೋದು ನಿನ್ನಂಥ ಅಯೋಗ್ಯರಿಂದ. ಜನರನ್ನು ಕೊಂದು ಉಳಿಸುವ ಧರ್ಮ ಯಾವುದು ಇಲ್ಲ” ಎಂದು ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿರಿ: ಮುಸ್ಲಿಮರ ಹೆಸರಿನಲ್ಲಿ ಭಯ ಹುಟ್ಟು ಹಾಕಿ ರೈತರಿಂದ 200 ಎಕರೆ ಭೂಮಿ ಖರೀದಿಸಿದ ಹಿಂದುತ್ವ ಸಂಘಟನೆ

ಜನರ ವಿರೋಧದ ಬಳಿಕ ಸೂಲಿಬೆಲೆ, “ಈ ಟ್ವೀಟ್ ಪುನೀತ್ ಅವರನ್ನು ಅಗೌರವಿಸಿದ್ದು ಎಂದು ಅನೇಕರು ಭಾವಿಸಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ಅವರ ಬಗ್ಗೆ ನನಗೆ ಅಪಾರವಾದ ಗೌರವವಿದೆ. ದಯವಿಟ್ಟು ಈ ಟ್ವೀಟನ್ನು ಅನ್ಯಥಾ ಭಾವಿಸಬೇಡಿ. ಅಭಿಮಾನಿಗಳಿಗೆ ನೋವಾಗಿದ್ದರೆ ನಿಸ್ಸಂಶಯವಾಗಿ ಕ್ಷಮೆ ಯಾಚಿಸುತ್ತೇನೆ. ಪುನೀತ್ ಅವರ ಅಭಿಮಾನಿಯಾಗಿ ಇದು ನನ್ನ ಕರ್ತವ್ಯವೂ ಹೌದು” ಎಂದು ಸ್ಪಷ್ಟಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...