Homeಮುಖಪುಟಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಪಕ್ಷದ ಶಾಸಕರನ್ನು ಖರೀದಿಸಲು ಬಿಜೆಪಿ ನಾಯಕರು ಯತ್ನಿಸಿದ್ದಾರೆಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇಂದು ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗಿಯಾಗಿರುವುದು ಕಂಡುಬಂದರೆ ಅವರನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಹಿಂದೆ ದೆಹಲಿ, ಪಂಜಾಬ್ ಮತ್ತು ಇತರ ಎಂಟು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮಾಡುವ ಪ್ರಯತ್ನಗಳನ್ನು ಬಿಜೆಪಿ ಮಾಡಿತ್ತು ಎಂದಿರುವ ಅವರು, “ಬಿಜೆಪಿ ಆಡುತ್ತಿರುವ ಕೆಟ್ಟ ಆಟವು (dirty game) ತೆಲಂಗಾಣದಲ್ಲಿ ಈ ಬಾರಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇತ್ತೀಚೆಗೆ ಭಾರತ್ ರಾಷ್ಟ್ರ ಸಮಿತಿ ಎಂದು ಮರುನಾಮಕರಣಗೊಂಡ ತೆಲಂಗಾಣ ರಾಷ್ಟ್ರ ಸಮಿತಿಗೆ ಸೇರಿದ ಕೆಲವು ಶಾಸಕರನ್ನು ಬಿಜೆಪಿಗೆ ಸೆಳೆಯುವುದಕ್ಕಾಗಿ ಲಂಚ ನೀಡಲು ಯತ್ನಿಸಲಾಗಿದೆ ಎಂಬ ಆರೋಪ ಬಂದಿದೆ. ಮೂವರು ವ್ಯಕ್ತಿಗಳ ನಡುವಿನ ಸಂಭಾಷಣೆಯನ್ನು ಹೊಂದಿರುವ ಆಡಿಯೊ ಕ್ಲಿಪ್ ವೈರಲ್‌ ಆಗಿದೆ.

ಆಡಿಯೊವನ್ನು ಉಲ್ಲೇಖಿಸಿರುವ ಸಿಸೋಡಿಯಾ, “‘ಶಾಹ್ ಜಿ’ ಎಂಬವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಿದ್ದರೆ, ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಏಕೆಂದರೆ ಒಬ್ಬ ದಲ್ಲಾಳಿ, ಶಾಸಕನನ್ನು ಖರೀದಿಸಿ ಸಿಕ್ಕಿಬಿದ್ದರೆ ಮತ್ತು ದೇಶದ ಗೃಹ ಸಚಿವರ ಹೆಸರು ಅದರಲ್ಲಿ ಕೇಳಿಬಂದರೆ ಅದು ಇಡೀ ದೇಶಕ್ಕೆ ಅಪಾಯಕಾರಿ” ಎಂದು ಎಚ್ಚರಿಸಿದ್ದಾರೆ.

ಕಳೆದ ಬುಧವಾರ ತೆಲಂಗಾಣದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪಕ್ಷದ ಶಾಸಕರನ್ನು ಬಿಜೆಪಿಗೆ ಸೆಳೆಯುವ ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿತ್ತು. ತಮ್ಮ ಕಸ್ಟಡಿಗೆ ನೀಡುವಂತೆ ಕೋರಿದ್ದ ಪೊಲೀಸರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದರಿಂದ ಈ ಮೂವರು ಹೊರಬರಲು ಸಾಧ್ಯವಾಯಿತು.

ಆರೋಪಿಗಳನ್ನು ಹೈದರಾಬಾದ್ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಬಂಧಿಸಲಾಗಿತ್ತು. ಟಿಆರ್‌ಎಸ್‌ನ ನಾಲ್ವರು ಶಾಸಕರನ್ನು ಬಿಜೆಪಿಗೆ ಸೆಳೆಯಲು ಲಂಚ ನೀಡುತ್ತಿದ್ದ ವೇಳೆ ಸಿಕ್ಕಿಬಿದ್ದಿರುವುದಾಗಿ ಪೊಲೀಸರು ತಿಳಿಸಿದ್ದರು.

ತೆಲಂಗಾಣದಲ್ಲಿ ಬಿಜೆಪಿ ನಡೆಸುತ್ತಿರುವ ‘ಆಪರೇಷನ್ ಕಮಲ’ವನ್ನು ಉಲ್ಲೇಖಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಸೋಡಿಯಾ, “ಅಕ್ಟೋಬರ್ 27ರಂದು ಸೈಬರಾಬಾದ್‌ನಲ್ಲಿ ದಾಳಿ ನಡೆಸಿದಾಗ ಮೂವರು ಪಿಂಪ್‌ಗಳು ₹ 100 ಕೋಟಿಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ನಿಮ್ಮಲ್ಲಿ ಕೆಲವರು ವರದಿ ಮಾಡಿದ್ದರು. ಈ ದಲ್ಲಾಳಿಗಳು ಬಿಜೆಪಿಯ ಆಪರೇಷನ್ ಕಮಲವನ್ನು ನಡೆಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಈ ಮೂವರು ಬ್ರೋಕರ್‌ಗಳು- ರಾಮಚಂದ್ರ ಭಾರತಿ, ಸಿಮಯ್ಯ ಮತ್ತು ನಂದ್ ಕುಮಾರ್” ಎಂದು ಮಾಹಿತಿ ನೀಡಿದ್ದಾರೆ.

ಬಂಧಿತ ಮೂವರು ವ್ಯಕ್ತಿಗಳು ಮತ್ತು ಟಿಆರ್‌ಎಸ್‌ನ ಕೆಲವು ಶಾಸಕರ ನಡುವಿನ ಸಂಭಾಷಣೆಗಳ ಆಡಿಯೊ ರೆಕಾರ್ಡಿಂಗ್ ಸಂಬಂಧಿಸಿದಂತೆ ಸಿಸೋಡಿಯಾ ಮಾತನಾಡಿ, “ಅಕ್ಟೋಬರ್ 28 ರಂದು, ಅವರ ಸಂಪೂರ್ಣ ಸಂಭಾಷಣೆಯ ಆಡಿಯೋ ಹೊರಬಂದಿದೆ” ಎಂದಿದ್ದಾರೆ.

ದೆಹಲಿಯಲ್ಲಿ ನಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ ತನ್ನ ಶಾಸಕರಿಗೆ ₹ 20 ಕೋಟಿ ನೀಡಲು ಯತ್ನಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ನಾಯಕರು ಕಳೆದ ಆಗಸ್ಟ್‌ನಲ್ಲಿ ಆರೋಪಿಸಿದ್ದರು. ಈ ಆರೋಪಗಳನ್ನು ಬಿಜೆಪಿ ತಳ್ಳಿಹಾಕಿತ್ತು.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಎಎಪಿಯ ದೆಹಲಿ ಶಾಸಕರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಬಿಜೆಪಿ ಪ್ರಯತ್ನಿಸಿತ್ತು ಎಂಬ ಆರೋಪವನ್ನು ಉಲ್ಲೇಖಿಸಿದ ಸಿಸೋಡಿಯಾ, “ಇಂದು ಎರಡನೇ ಆಡಿಯೋ ರೆಕಾರ್ಡಿಂಗ್ ಹೊರಬಿದ್ದಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಇಂದು ಹೊಸ ಆಡಿಯೋ ಹೊರಬಿದ್ದಿದೆ. ಇದು ತೆಲಂಗಾಣದ ಶಾಸಕರು ಮತ್ತು ಆಪರೇಷನ್ ಕಮಲದ ನಡುವಿನ ಸಂಭಾಷಣೆಯಾಗಿದೆ. ದೆಹಲಿಯಲ್ಲೂ ಇದಕ್ಕೆ ಪ್ರಯತ್ನಿಸಲಾಗಿದೆ ಎಂದು ಮೂವರಲ್ಲಿ ಒಬ್ಬರು ಬಹಿರಂಗಪಡಿಸಿದ್ದಾರೆ” ಎಂದು ಹೇಳಿದ್ದಾರೆ.

“ಈ ಶಾಸಕರನ್ನು ಖರೀದಿಸಲು ₹ 1,075 ಕೋಟಿ ವ್ಯವಸ್ಥೆ ಮಾಡಿದ್ದಾರೆಂಬುದು ಸದ್ಯದ ಪ್ರಶ್ನೆ, ಇದು ಯಾರ ಹಣ ಮತ್ತು ಎಲ್ಲಿಂದ ಬಂತು?” ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...