Homeಮುಖಪುಟಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಉತ್ತರ ಪ್ರದೇಶದ ಸಚಿವರಾದ ಗುಲಾಬ್ ದೇವಿ ಅವರು ಅಕ್ಟೋಬರ್ 26ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾಗ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. “ಪ್ರಧಾನಿ ಮೋದಿಯವರು ದೇವರ ಅವತಾರ. ಅವರು ಇಚ್ಛಿಸಿದರೆ ತಮ್ಮ ಜೀವನಪೂರ್ತಿ ಪ್ರಧಾನಿಯಾಗಿರಬಹುದು” ಎಂದಿದ್ದಾರೆ ಗುಲಾಬ್‌ ದೇವಿ.

“ಪ್ರಧಾನಿ ನರೇಂದ್ರ ಮೋದಿಯವರನ್ನು ಭೂಮಿಯ ಮೇಲಿನ ದೇವರ ಅವತಾರ ಎಂದು ಕರೆದಿರುವ ಬಗ್ಗೆ ಕ್ಷಮೆಯಾಚಿಸುವುದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ.

‘ದಿ ಇಂಡಿಯನ್‌ ಎಕ್ಸ್‌ಪ್ರೆಸ್‌’ ಜೊತೆ ಮಾತನಾಡಿರುವ ಅವರು, “ಜನರ ಮನೆಗಳಿಗೆ ನೀರು ತಲುಪಬೇಕು ಎಂದು ಅವರು (ಮೋದಿ) ಬಯಸಿದರೆ, ನೀರು ತಲುಪಲು ಪ್ರಾರಂಭಿಸುತ್ತದೆ. ಬಡವರಿಗೆ ಮನೆ ಸಿಗಬೇಕು ಎಂದು ಅವರು ಬಯಸಿದಾಗ, ಮನೆಗಳ ನಿರ್ಮಾಣ ಆರಂಭವಾಗುತ್ತದೆ. ಜನರು ಗ್ಯಾಸ್ ಸಂಪರ್ಕವನ್ನು ಪಡೆಯಬೇಕು ಎಂದು ಅವರು ಬಯಸಿದಾಗ, ಸಂಪರ್ಕಗಳು ಪ್ರಾರಂಭವಾಗುತ್ತವೆ. ಶೌಚಾಲಯಗಳು ನಿರ್ಮಾಣವಾಗುತ್ತವೆ. ಇದು ಮೋದಿಯವರನ್ನು ದೇವರ ಅವತಾರವನ್ನಾಗಿ ಮಾಡಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಲಾಬ್ ದೇವಿ ಅವರು ಅಕ್ಟೋಬರ್ 26‘ರಂದು ಸಂಭಾಲ್‌ನ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಅವರು ಮೋದಿಯನ್ನು ದೇವರಿಗೆ ಸಮೀಕರಿಸುವ ಹೇಳಿಕೆಯನ್ನು ಅಂದು ನೀಡಿದರು. “ಮೋದಿ ಬಯಸಿದರೆ ತಮ್ಮ ಜೀವಿತಾವಧಿಯವರೆಗೆ ಪ್ರಧಾನಿಯಾಗಿರುತ್ತಾರೆ” ಎಂದಿದ್ದರು.

ಸಚಿವೆಯ ಹೇಳಿಕೆಗೆ ಸಮಾಜ ಪಕ್ಷದ ಸಂಸದ ಶಫಿಕೂರ್ ರೆಹಮಾನ್ ಬಾರ್ಕ್ ಪ್ರತಿಕ್ರಿಯಿಸಿ, “ಪಿಎಂ ನಿಜಕ್ಕೂ ದೇವರ ಅವತಾರವಾಗಿದ್ದರೆ, ಅವರು ರಾಜಕೀಯದಲ್ಲಿ ಏನು ಮಾಡುತ್ತಿದ್ದರು?” ಎಂದು ಕೇಳಿದ್ದಾರೆ. “ಮೋದಿ ಅವರು ರಾಜೀನಾಮೆ ನೀಡಬೇಕು. ಗುಲಾಬ್ ದೇವಿ ಅವರು ಕುತಂತ್ರದ ಮಿತಿಯನ್ನು ದಾಟಿದ್ದಾರೆ” ಎಂದು ಅವರು ಟೀಕಿಸಿದ್ದಾರೆ.

ಗುಲಾಬ್‌ ದೇವಿ, “ತಮ್ಮ ವೈಯಕ್ತಿಕ ನಂಬಿಕೆ ಏನೆಂಬುದರ ಬಗ್ಗೆ ಯಾರಿಗೂ ಸಮಸ್ಯೆಯಾಗಬಾರದು. ಪ್ರತಿಪಕ್ಷಗಳಿಗೆ ತನಗೆ ಅನಿಸಿದ್ದನ್ನು ಮಾತನಾಡಲು ಎಲ್ಲ ಹಕ್ಕಿದೆ. ಹಿಂದೂ ಧರ್ಮದಲ್ಲಿ ದೇವರನ್ನು ಮರಗಳಲ್ಲಿ, ಹಸುಗಳಲ್ಲಿ, ತಂದೆ-ತಾಯಿಗಳಲ್ಲಿ, ಗುರುಗಳಲ್ಲಿ ಕಾಣಲಾಗುತ್ತದೆ. ಹಾಗಾದರೆ ದೇಶದ ರಾಜನನ್ನು ದೇವರ ಪ್ರತಿನಿಧಿ (ಪ್ರತಿನಿಧಿ) ಎಂದು ನೋಡುವುದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ವಕ್ತಾರ ರಾಕೇಶ್ ತ್ರಿಪಾಠಿಯವರು ಗುಲಾಬ್ ದೇವಿಯವರ ಮಾತುಗಳನ್ನು ಬೆಂಬಲಿಸಿ ಪ್ರತಿಕ್ರಿಯೆ ನೀಡಿದ್ದಾರೆ. “ನಾವು ಗೌರವಿಸುವ ವ್ಯಕ್ತಿಯನ್ನು ಈ ರೀತಿ ಕರೆಯುತ್ತೇವೆ. ನಾವು ಸಾರ್ವಜನಿಕರನ್ನು ದೇವರೆಂದು ಸಹ ಉಲ್ಲೇಖಿಸುತ್ತೇವೆ. ಅದೇ ರೀತಿ ಸಚಿವರು ಪ್ರಧಾನಿಯ ಬಗ್ಗೆ ತಮ್ಮ ವೈಯಕ್ತಿಕ ಗೌರವವನ್ನು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

67 ವರ್ಷದ ಗುಲಾಬ್ ದೇವಿ ಅವರು ಸಂಭಾಲ್‌ನ ಚಂದೌಸಿ ಅಸೆಂಬ್ಲಿ ಕ್ಷೇತ್ರದಿಂದ ಐದು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದಲ್ಲಿರುವ ಐವರು ಮಹಿಳಾ ಸಚಿವರಲ್ಲಿ ಇವರು ಹಿರಿಯವರಾಗಿದ್ದಾರೆ. ರಾಜಕೀಯಕ್ಕೆ ಬರುವ ಮೊದಲು ರಾಜಕೀಯ ವಿಜ್ಞಾನ ಉಪನ್ಯಾಸಕಿಯಾಗಿದ್ದ ಗುಲಾಬ್ ದೇವಿಯವರು, ದಲಿತ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಅಪ್ಪು ಬಗ್ಗೆ ಹಗುರವಾಗಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ದಾರೆಯೇ?

ಆದಿತ್ಯನಾಥ್ ಅವರ ಅಧಿಕಾರದ ಮೊದಲ ಅವಧಿಯಲ್ಲಿ ಗುಲಾಬ್ ದೇವಿ ಅವರು ಸಮಾಜ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು ಈಗ ಪ್ರೌಢ ಶಿಕ್ಷಣ ಇಲಾಖೆಯ ಸ್ವತಂತ್ರ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.

ಇಂಗ್ಲೆಡ್ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಯೊಬ್ಬರನ್ನು ಭಾರತದ ಪ್ರಧಾನಿಯನ್ನಾಗಿ ಮಾಡಬೇಕೆಂದು ಪ್ರತಿಪಕ್ಷಗಳ ನಾಯಕರು ಹೇಳಿದ್ದರು. ಈ ಕುರಿತು ಕೆಲವು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ ಗುಲಾಬ್‌ ದೇವಿಯವರು, “ಮೋದಿಜಿ ದೇವರ ಅವತಾರ” ಎಂದು ಬಣ್ಣಿಸಿದ್ದರು.

“ಭಾರತೀಯ ಮೂಲದ ಹಿಂದೂವಾಗಿರುವ ರಿಷಿ ಸುನಕ್ ಇಂಗ್ಲೆಡ್‌ನಲ್ಲಿ ಪ್ರಧಾನಿಯಾಗಿದ್ದಾರೆ. ಆ ದೇಶದ ನಡೆಯಿಂದ ಭಾರತ ಪಾಠ ಕಲಿಯಬೇಕು. ಅಲ್ಪಸಂಖ್ಯಾತ ಸಮುದಾಯದ ಜನರು ದೇಶವನ್ನು ಮುನ್ನಡೆಸಲು ಅವಕಾಶ ನೀಡಬೇಕು” ಎಂದು ಹೇಳಿದವರಲ್ಲಿ ಎಸ್‌ಪಿ ಸಂಸದರಾದ ಬಾರ್ಕ್ ಕೂಡ ಒಬ್ಬರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮೋದಿ ದೇವರ ಅವತಾರವಲ್ಲಾ… ದೆವ್ವದ ಅವತಾರ… ಈ ದೇಶಕ್ಕೆ ಹಿಡಿದ ಕೊಳ್ಳಿ ದೆವ್ವ ಅದು

  2. ಗೋಧ್ರಾದಲ್ಲಿ ತಾನು ರಾಕ್ಷಸನ ಅವತಾರ ಎಂದು ಈತನೇ ಸಾಬೀತು ಮಾಡಿದ್ದಾನೆ ಪಾಪ !!!😢😢😢😢😢

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...