Homeಮುಖಪುಟಮೊರ್ಬಿ ದುರಂತದ ಸಂತ್ರಸ್ತರನ್ನು ಭೇಟಿಯಾಗಲಿರುವ ಪ್ರಧಾನಿ: ಆಸ್ಪತ್ರೆಗೆ ನವೀಕರಣಕ್ಕೆ ಮುಂದಾದ ಸಿಬ್ಬಂದಿ

ಮೊರ್ಬಿ ದುರಂತದ ಸಂತ್ರಸ್ತರನ್ನು ಭೇಟಿಯಾಗಲಿರುವ ಪ್ರಧಾನಿ: ಆಸ್ಪತ್ರೆಗೆ ನವೀಕರಣಕ್ಕೆ ಮುಂದಾದ ಸಿಬ್ಬಂದಿ

- Advertisement -
- Advertisement -

ಗುಜರಾತ್‌ನ ಮೊರ್ಬಿ ನಗರದ ನದಿಗೆ ನಿರ್ಮಿಸಿದ್ದ ತೂಗು ಸೇತುವೆ ಕುಸಿತದಿಂದಾಗಿ ಈವರೆಗೆ 135 ಜನರು ಮೃತಪಟ್ಟಿದ್ದಾರೆ. ಗಾಯಗೊಂಡ ನೂರಕ್ಕೂ ಹೆಚ್ಚು ಮೊರ್ಬಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಜಿಲ್ಲಾಸ್ಪತ್ರೆಯನ್ನು ನವೀಕರಣಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳಪೆ ಸ್ಥಿತಿಯಲ್ಲಿದ್ದ ಜಿಲ್ಲಾಸ್ಪತ್ರೆಯನ್ನು ತಹಬದಿಗೆ ತರಲು ಸೋಮವಾರ ರಾತ್ರಿಯಿಡಿ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ. ಹಲವು ಗೋಡೆಗಳಿಗೆ ಹೊಸದಾಗಿ ಬಣ್ಣ ಬಳಿಯಲಾಗಿದೆ. ಟೈಲ್ಸ್ ಹಾಕಲಾಗಿದೆ. ಎರಡು ವಾರ್ಡ್‌ಗಳ ಬೆಡ್‌ಶೀಟ್‌ಗಳನ್ನು ಬದಲಿಸಿ ಹೊಸ ಬೆಡ್‌ಶೀಟ್‌ಗಳನ್ನು ಹಾಕಲಾಗಿದೆ. ಶಿಥಿಲ ಸ್ಥಿತಿಯಲ್ಲಿರುವ ಗೋಡೆಗಳನ್ನು ಮರೆಮಾಚಲಾಗಿದೆ. ಒಟ್ಟಾರೆಯಾಗಿ ಹೊಸ ಚಿತ್ರಣ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಆಸ್ಪತ್ರೆಯ ಈ ನವೀಕರಣ ಕಾರ್ಯವು ಹಿಂದೆ ಎಂದೂ ಆಗದಿದ್ದರೂ ಈ ಬಾರಿ ಪ್ರಧಾನಿ ಭೇಟಿಗಾಗಿ ನಡೆಯುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಬಿಜೆಪಿ ಪಕ್ಷವು ಪ್ರಧಾನಿ ಮಂತ್ರಿಗಳ ಫೋಟೋಶೂಟ್‌ಗಾಗಿ ಇವೆಂಟ್ ಮ್ಯಾನೆಜ್‌ಮೆಂಟ್ ಮಾಡುತ್ತಿದೆ ಎಂದು ಟೀಕಿಸಿವೆ.

“ನಾಳೆ ಪ್ರಧಾನಿ ನರೇಂದ್ರ ಮೋದಿಯವರು ಮೊರ್ಬಿಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಆ ಹಿನ್ನೆಲೆಯಲ್ಲಿ ಬಣ್ಣ ಬಳಿಯಲಾಗುತ್ತಿದೆ. ಹೊಳೆಯುವ ಟೈಲ್ಸ್ ಹಾಕಲಾಗುತ್ತಿದೆ. ಪ್ರಧಾನಿಯವರ ಚಿತ್ರಗಳಲ್ಲಿ ಯಾವುದೇ ಲೋಪವಾಗದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಎಷ್ಟೋ ಜನ ಸಾವನಪ್ಪಿದರೂ ಸಹ ಈವೆಂಟ್ ಮ್ಯಾನೇಜ್‌ಮೆಂಟ್‌ನಲ್ಲಿ ಬ್ಯುಸಿಯಾಗಿರುವ ಬಿಜೆಪಿಗೆ ನಾಚಿಕೆ ಎಂಬುದಿಲ್ಲ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಮೊರ್ಬಿ ಸಿವಿಲ್ ಆಸ್ಪತ್ರೆಯಲ್ಲಿನ ದೃಶ್ಯಗಳಿವು. ನಾಳೆ ನಡೆಯಲಿರುವ ಪ್ರಧಾನಿ ಫೋಟೋಶೂಟ್‌ನಲ್ಲಿ ಯಾವುದೇ ಲೋಪವಾಗದಂತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಕಳೆದ 27 ವರ್ಷಗಳಲ್ಲಿ ಬಿಜೆಪಿ ಕೆಲಸ ಮಾಡಿದ್ದರೆ, ಮಧ್ಯರಾತ್ರಿಯಲ್ಲಿ ಆಸ್ಪತ್ರೆಯನ್ನು ಅಲಂಕರಿಸುವ ಅಗತ್ಯವಿರಲಿಲ್ಲ” ಎಂದು ಆಮ್ ಆದ್ಮಿ ಪಕ್ಷ ಟ್ವೀಟ್ ಮಾಡಿದೆ.

ಇದನ್ನೂ ಓದಿ; ಮೊರ್ಬಿ ತೂಗುಸೇತುವೆ ದುರಂತ: ಶವ ರಾಜಕೀಯ ಮಾಡಬಾರದೆಂದ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ-2024: ಕುಗ್ಗಿದ ಮೋದಿ ವರ್ಚಸ್ಸು; ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವಲೋಕನ…

0
2014 ಮತ್ತು 2019ರ ಲೋಕಸಭೆ ಚುನಾವಣೆಗೆ ಹೋಲಿಕೆ ಮಾಡಿದರೆ 2024ರಲ್ಲಿ ದೇಶದಲ್ಲಿ ಮೋದಿ ವರ್ಚಸ್ಸು ಕಡಿಮೆಯಾಗಿದೆ. ಈ ಬಾರಿ ಬ್ರ್ಯಾಂಡ್ ಮೋದಿ ದುರ್ಬಲವಾಗುತ್ತಿದೆ, ಮೋದಿ ಕುರಿತು ನಿರೂಪಣೆಯಲ್ಲಿ ಬದಲಾವಣೆ ಇದೆ, ಜನರಲ್ಲಿ ಮೋದಿ...