2022 ರಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಗುರುವಾರ ಪ್ರಕಟಿಸಿದೆ. ರಾಜ್ಯದಲ್ಲಿ ಈ ಬಾರಿ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ ಎಂದು ಆಯೋಗ ಹೇಳಿದೆ.
ಎರಡು ಹಂತಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಮೊದಲನೆ ಹಂತ ಡಿಸೆಂಬರ್ 1 ರಂದು ನಡೆಯಲಿದ್ದು, ಎರಡನೇ ಹಂತ ಡಿಸೆಂಬರ್ 5 ರಂದು ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಅಕ್ಟೋಬರ್ 14 ರಂದು ಹಿಮಾಚಲ ಪ್ರದೇಶ ಮತ್ತು ಗುಜರಾತ್‌ನ ಚುನಾವಣೆಯನ್ನು ಒಟ್ಟಿಗೆ ಘೋಷಿಸಿಲಾಗುವುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಂದು ಹಿಮಾಚಲ ಪ್ರದೇಶದ ಚುನಾವಣೆಯನ್ನು ಘೋಷಿಸಿ ಅಚ್ಚರಿಯೆಂಬಂತೆ ಗುಜರಾತ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿರಲಿಲ್ಲ.
ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ಕ್ಕೆ ಚುನಾವಣೆ: ಡಿಸೆಂಬರ್ 08ಕ್ಕೆ ಫಲಿತಾಂಶ
ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿರುವ 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯ ಅವಧಿ ಮುಂದಿನ ವರ್ಷ ಫೆಬ್ರವರಿ 18ಕ್ಕೆ ಕೊನೆಗೊಳ್ಳಲಿದೆ. ಈ ಬಾರಿಯ ಚುನಾವಣೆ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದು ಚುನಾವಣಾ ತಜ್ಞರು ಹೇಳಿದ್ದಾರೆ.
ಗುಜರಾತ್ ಚುನಾವಣಾ ವೇಳಾಪಟ್ಟಿಯ ವಿವರ ಇಲ್ಲಿದೆ:
ಹಂತ 1
ಅಧಿಸೂಚನೆ ಹೊರಡಿಸಿದ ದಿನಾಂಕ: ನವೆಂಬರ್ 5
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 14
ಪರಿಶೀಲನೆಯ ದಿನಾಂಕ: ನವೆಂಬರ್ 15
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ನವೆಂಬರ್ 17
ಮತದಾನದ ದಿನಾಂಕ: ಡಿಸೆಂಬರ್ 1
ಫಲಿತಾಂಶಗಳ ಪ್ರಕಟಣೆ: ಡಿಸೆಂಬರ್ 8
ಹಂತ 2
ಅಧಿಸೂಚನೆ ಹೊರಡಿಸಿದ ದಿನಾಂಕ: ನವೆಂಬರ್ 10
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 17
ಪರಿಶೀಲನೆಯ ದಿನಾಂಕ: ನವೆಂಬರ್ 18
ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ನವೆಂಬರ್ 21
ಮತದಾನದ ದಿನಾಂಕ: ಡಿಸೆಂಬರ್ 5
ಫಲಿತಾಂಶಗಳ ಪ್ರಕಟಣೆ: ಡಿಸೆಂಬರ್ 8
ಇದನ್ನೂ ಓದಿ: ಅದಾನಿ ಆಳ್ವಿಕೆ: ಹಿಮಾಚಲ ಪ್ರದೇಶದ ಸೇಬು ಬೆಳೆಗಾರರು ತತ್ತರ!
ಅಕ್ಟೋಬರ್ 14 ರಂದು ಚುನಾವಣಾ ಆಯೋಗವು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಒಂದೇ ಹಂತದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆಯಲಿದೆ ಎಂದು ಘೋಷಿಸಿದೆ. ಡಿಸೆಂಬರ್ 08 ಕ್ಕೆ ಹಿಮಾಚಲ ಪ್ರದೇಶದ ಫಲಿತಾಂಶ ಕೂಡಾ ಹೊರಬೀಳುತ್ತದೆ.


