Homeಕರ್ನಾಟಕಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ; ದುಡಿಕಿನ ತೀರ್ಮಾನ ಎಂದ ಕಾಂಗ್ರೆಸ್

ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ಸೇರ್ಪಡೆ; ದುಡಿಕಿನ ತೀರ್ಮಾನ ಎಂದ ಕಾಂಗ್ರೆಸ್

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ತಯಾರಾಗುತ್ತಿದ್ದು, ನಿರೀಕ್ಷೆಯಂತೆ ನಾಯಕರುಗಳ ಪಕ್ಷಾಂತರಗಳು ಪ್ರಾರಂಭವಾಗಿದೆ. ಈ ನಡುವೆ ಕಾಂಗ್ರೆಸ್‌ನ ಹಿರಿಯ ನಾಯಕ, ತುಮಕೂರಿನ ಮಾಜಿ ಸಂಸದ ಎಸ್‌.ಪಿ. ಮುದ್ದಹನುಮೇಗೌಡ ಅವರು ಗುರುವಾರ ಬಿಜೆಪಿಗೆ ಸೇರಿದ್ದಾರೆ.

ಮುದ್ದಹನುಮೇಗೌಡ ಅವರ ಜೊತಗೆ ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್. ಅನಿಲ್‌ಕುಮಾರ್, ನಟ ಶಶಿಕುಮಾರ್ ಸೇರಿದಂತೆ ಹಲವರು ಜನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಗೆ ಸೇರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುದ್ದಹನುಮೆಗೌಡ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದು, ನ್ಯಾಯಧೀಶರಾಗಿ ಕೂಡಾ ಸೇವೆ ಸಲ್ಲಿಸಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿದ್ದ ಕಾರಣಕ್ಕೆ ಅವರು ಪ್ರತಿನಿಧಿಸುತ್ತಿದ್ದ ಕ್ಷೇತ್ರವನ್ನು ಹೆಚ್.ಡಿ. ದೇವೇಗೌಡರಿಗೆ ಕಾಂಗ್ರೆಸ್ ಬಿಟ್ಟುಕೊಟ್ಟಿತ್ತು. ಹೀಗಾಗಿ ಮುದ್ಧಹನುಮೆಗೌಡ ಅವರು ಕಾಂಗ್ರೆಸ್ ಜೊತೆಗೆ ಮುನಿಸಿಕೊಂಡಿದ್ದರು.

ತಮ್ಮ ಪಕ್ಷದ ಹಿರಿಯ ನಾಯಕನ ನಿರ್ಗಮನದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮುದ್ದಹನುಮೆಗೌಡ ಅವರು ಸ್ವಲ್ಪ ದುಡಿಕಿ ತೀಮಾನ ತೆಗೆದುಕೊಂಡಿದ್ದು, ಒಂದು ವೇಳೆ ಪಕ್ಷದಲ್ಲೆ ಇರುತ್ತಿದ್ದರೆ ಪಕ್ಷದಿಂದ ಅವರಿಗೆ ಈ ಬಾರಿ ಅವಕಾಶ ಸಿಗುತ್ತಿತ್ತು ಎಂದು ಹೇಳಿದೆ.

ಇದನ್ನೂಓದಿ: ಫ್ಯಾಕ್ಟ್‌ಚೆಕ್: ತುಮಕೂರು ಜಿಲ್ಲೆಗೆ ಮನುಷ್ಯ ರೂಪದ ವಿಚಿತ್ರ ಪ್ರಾಣಿ ಬಂದಿದ್ದು ನಿಜವೇ?

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ನಿಕೇತ್ ರಾಜ್ ಮೌರ್ಯ ಅವರು, “ಮುದ್ದಹನುಮೆಗೌಡರು ತಮ್ಮ ತೀರ್ಮಾನ ತೆಗೆದುಕೊಳ್ಳಲು ಸ್ವತಂತ್ರರಿದ್ದಾರೆ. ಆದರೆ ಅವರು ಬಿಜೆಪಿಗೆ ಹೋಗಿರುವುದು ಅವರು ನಂಬಿರುವಂತಹ ತತ್ವ ಸಿದ್ದಾಂತಗಳಿಗೆ ತದ್ವಿರುದ್ಧವಾಗಿದೆ. ಅಷ್ಟೆ ಅಲ್ಲದೆ ಬಿಜೆಪಿ ಅವರನ್ನು ಯಾವ ರೀತಿಯಲ್ಲಿ ನಡೆಸಿಕೊಳ್ಳುತ್ತದೆ ಎಂಬುವುದು ಕೂಡಾ ನಮಗೆ ಅನುಮಾನವಿದೆ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿತ್ತು. ಅವರು ಇನ್ನೊಂದು ಸ್ವಲ್ಪ ತಾಳ್ಮೆಯಿಂದ ಇರಬೇಕಾಗಿತ್ತು ಎನ್ನುವುದು ನಮ್ಮ ನಿರೀಕ್ಷೆಯಾಗಿತ್ತು” ಎಂದು ಹೇಳಿದರು.

ಚುನಾವಣೆ ಸಮಯದಲ್ಲಿ ಪಕ್ಷದ ಹಿರಿಯ ನಾಯಕ ವಿರೋಧಿ ಪಕ್ಷಕ್ಕೆ ಸೇರಿದರೆ ಪಕ್ಷ ಅದನ್ನು ಹೇಗೆ ಸರಿತೂಗಿಸುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ನಿಕೇತ್‌ ರಾಜ್, “ಬಂದದ್ದೆಲ್ಲವೂ ಬರಲಿ, ಭಗವಂತನ ದಯೆಯೊಂದಿರಲಿ ಎಂಬ ಮಾತಿನಂತೆ ಕಾಂಗ್ರೆಸ್‌ ಪಕ್ಷವಿದೆ. ಪಕ್ಷ ಬಿಟ್ಟು ಹೋಗುವವರನ್ನು ಯಾರೂ ತಡೆಹಾಕಿ ನಿಲ್ಲಿಸಲು ಆಗುವುದಿಲ್ಲ. ಪಕ್ಷ ಬಿಟ್ಟು ಹೋಗುವವರು ಹೇಗೆ ಇದ್ದಾರೋ ಹಾಗೆಯೆ, ಪಕ್ಷಕ್ಕೆ ಸೇರುವವರ ಸಂಖ್ಯೆ ಕೂಡಾ ಹೆಚ್ಚಾಗಿದೆ” ಎಂದು ಹೇಳಿದರು.

“ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರಕ್ಕೆ ಅತ್ಯುತ್ತಮ ಅಭ್ಯರ್ಥಿ ಸಿಕ್ಕಿದ್ದು, ಜೆಡಿಎಸ್‌ ಎಮ್‌ಎಲ್‌ಸಿ ಬೆಮಲ್ ಕಾಂತರಾಜ್ ಸಿದ್ದರಾಗುತ್ತಿದ್ದಾರೆ. ಗುಬ್ಬಿ ಕ್ಷೇತ್ರದ ಶಾಸಕರು ಕೂಡಾ ಕಾಂಗ್ರೆಸ್ ಸೇರಲು ಸಿದ್ದರಾಗುತ್ತಿದ್ದಾರೆ. ಇದೇ ರೀತಿ ತುಮಕೂರು ಜಿಲ್ಲೆಯಾದ್ಯಂತ ಬಿಜೆಪಿ ಮತ್ತು ಜೆಡಿಎಸ್‌ನ ಹಾಲಿ ಶಾಸಕರಿಂದ ಹಿಡಿದು ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಸೇರಲು ತಯಾರಾಗುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ದೃತಿಗೆಡುವುದಿಲ್ಲ” ಎಂದು ನಿಕೇತ್ ರಾಜ್ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂಓದಿ: ತುಮಕೂರು: ದೇವರ ಮೆರವಣಿಗೆ ಕಳುಹಿಸಿ ಎಂದ ದಲಿತರ ಮೇಲೆ ದೌರ್ಜನ್ಯ; ಜೀವ ಬೆದರಿಕೆ

ಬಿಜೆಪಿ ನಾಯಕರ ಸೂಚನೆ ಮೇರೆಗೆ ತಮ್ಮ ನಿವೃತ್ತಿಯ ನಂತರ ಕೊರಟಗೆರೆ ಕ್ಷೇತ್ರದಲ್ಲಿ ಚುನಾವಣೆಗೆ ಪೂರ್ವ ತಯಾರಿ ನಡೆಸಿದ್ದ ಅನಿಲ್‌ಕುಮಾರ್, ಈಗ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಅವರು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಕೊರಟಗೆರೆ ಕ್ಷೇತ್ರದಲ್ಲಿ ಅನಿಲ್‌ಕುಮಾರ್ 2023ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆ.

ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ ನಟ ಶಶಿಕುಮಾರ್ ಅವರು ಕಳೆದ ಚುನಾವಣೆಯಲ್ಲಿ ಜೆಡಿಎಸ್ ಸೇರಿದ್ದರು; ಇದೀಗ ಬಿಜೆಪಿ ಸೇರಿದ್ದಾರೆ. ಇಷ್ಟೆ ಅಲ್ಲದೆ ಸೇವಾ ದಳದ ರಾಜ್ಯ ಉಪಾಧ್ಯಕ್ಷ ಹನುಮಂತರಾವ್ ಜವಳಿ, ರಮೇಶ ಮುನಿಯಪ್ಪ, ಜಿ. ವೆಂಕಟಾಚಲಯ್ಯ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...