Homeರಾಜಕೀಯ‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

‘ಧೈರ್ಯವಿದ್ದರೆ ಬಂಧಿಸಿ’: ಬಿಜೆಪಿಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೋರೆನ್‌ ಸವಾಲು

- Advertisement -
- Advertisement -

ಪಕ್ಷ ಅಥವಾ ಅದರ ಯಾವುದೇ ನಾಯಕರನ್ನು ಹೆಸರಿಸದೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಜಾರಿ ನಿರ್ದೇಶನಾಲಯದ ಮೂಲಕ ಸಮನ್ಸ್ ಕಳುಹಿಸುವ ಬದಲು ಧೈರ್ಯವಿದ್ದರೆ ಬಂಧಿಸುವಂತೆ ಸವಾಲು ಎಸೆದಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ತಮ್ಮ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ಅವರು ಇಂದು ರಾಜ್ಯದಲ್ಲಿ ಇರುವ ನಿರ್ದೇಶನಾಲಯಲ್ಲಿ ಹಾಜರಾಗಬೇಕಿತ್ತು. ಅದರ ಬದಲಾಗಿ ಮುಖ್ಯಮಂತ್ರಿ ಸೋರೆನ್ ಅವರು ರಾಂಚಿಯ ಕಾಂಕೆ ರಸ್ತೆ ಪ್ರದೇಶದಲ್ಲಿ ತಮ್ಮ ಅಧಿಕೃತ ನಿವಾಸದ ಹೊರಗೆ ಮಧ್ಯಾಹ್ನ 2.30 ರ ನಂತರ ನೂರಾರು ಬೆಂಬಲಿಗರ ನಡುವೆ ಮಾತನಾತ್ತಾ ಬಿಜೆಪಿಗೆ ಸವಾಲೆಸೆದಿದ್ದಾರೆ. ನಂತರ ಅವರು ಬುಡಕಟ್ಟು ಜನಾಂಗದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಛತ್ತೀಸ್‌ಗಢಕ್ಕೆ ತೆರಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಆದಿವಾಸಿ ನೃತ್ಯ ಮಹೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಲಾಗಿತ್ತು. ಅದೇ ದಿನ ನಿರ್ದೇಶನಾಲಯ ಅವರನ್ನು ಕರೆಸಿರುವುದು ‘ಪಿತೂರಿ’ ಎಂದು ಸೋರೆನ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್

“ನಾನು ಯಾರನ್ನಾದರೂ ಕೊಲೆ ಮಾಡಿದ್ದೇನೆಯೇ? ನಾನೇನು ಅಪರಾಧ ಮಾಡಿದ್ದೇನೆ? ಒಂದು ವೇಳೆ ತಪ್ಪು ಮಾಡಿದ್ದರೆ ನನ್ನನ್ನು ಬಂಧಿಸಿ ತೋರಿಸಿ. ಸಮನ್ಸ್ ಏಕೆ ಕಳುಹಿಸಬೇಕು? ನಮ್ಮ ಸರ್ಕಾರವು ರಾಜ್ಯಕ್ಕಾಗಿ ಪೂರ್ಣ ಶಕ್ತಿಯಿಂದ ಕೆಲಸ ಮಾಡುತ್ತಿದೆ. ಒಂದು ವೇಳೆ ಆದಿವಾಸಿಗಳು ಬಂದರೆ ವಿಪಕ್ಷಗಳಿಗೆ ತಲೆಮರೆಸಿಕೊಳ್ಳಲು ಜಾಗ ಸಿಗುವುದಿಲ್ಲ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.‘

‘‘ಆದಿವಾಸಿಗಳು ಮತ್ತು ಮೂಲ ನಿವಾಸಿಗಳು ಯಶಸ್ವಿಯಾಗುವುದನ್ನು ಬಯಸದ ‘ಹೊರಗಿನ ಗ್ಯಾಂಗ್’ ಜಾರ್ಖಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂದು ಅವರು ಆರೋಪಿಸಿದ್ದು, ಅವರೆಲ್ಲರನ್ನೂ ತಾವು ಗುರುತಿಸಿದ್ದು, ಅವರಿಗೆ ‘‘ತಕ್ಕ ಉತ್ತರ’’ ನೀಡುತ್ತಿದ್ದೇನೆ ಎಂದು ಸೊರೆನ್ ಹೇಳಿದ್ದಾರೆ.

ವಿಚಾರಣೆಯ ಹೆಸರಿನಲ್ಲಿ ನಾವು ಇಲ್ಲಿ ಸರ್ಕಾರ ರಚಿಸುತ್ತಿದ್ದೇವೆ ಎಂಬ ಸಂದೇಶವನ್ನು ಅವರು (ಬಿಜೆಪಿ) ನೀಡಲು ಬಯಸುತ್ತಿದ್ದಾರೆ. ಆದರೆ ಈ ಹಿಂದೆ ನಡೆದ ನಾಲ್ಕು ಉಪಚುನಾವಣೆಯಲ್ಲಿ ನಾಲ್ಕರಲ್ಲೂ ಅವರು ಸೋತಿದ್ದಾರೆ ಎಂದು ಸೊರೆನ್ ನೆನಪಿಸಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್: ವಿಮಾನ ನಿಲ್ದಾಣದಲ್ಲಿ ಅತಿಕ್ರಮ ಪ್ರವೇಶ, ಬಲವಂತವಾಗಿ ವಿಮಾನ ಹಾರಿಸಿದ್ದ ಬಿಜೆಪಿ ಸಂಸದನ ವಿರುದ್ಧ ದೂರು

ಮುಂಬರುವ ಲೋಕಸಭೆ ಚುನಾವಣೆಯಲ್ಲೂ ರಾಜ್ಯದ ಜನತೆಯಿಂದ ಉತ್ತರ ಸಿಗಲಿದೆ ಎಂದು ಹೇಳಿದ ಅವರು, “ಜಾರ್ಖಂಡ್ ಸರ್ಕಾರದ ಪ್ರಮುಖ ಕಾರ್ಯಕ್ರಮವಾದ ‘ಸರ್ಕಾರ್ ಆಪ್ಕೆ ದ್ವಾರ’ದಿಂದಾಗಿ ಬಿಜೆಪಿಯು ‘ಹೆದರಿರುವ ಮೋಡ್’ನಲ್ಲಿದೆ” ಎಂದು ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...