Homeರಾಷ್ಟ್ರೀಯಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

ಮಂಕಿಪಾಕ್ಸ್‌: ದೆಹಲಿಯ 5 ಸೋಂಕಿತರ ರೋಗನಿರ್ಣಯ ಮಾಡಲು ವಿಫಲ

- Advertisement -
- Advertisement -

ದೆಹಲಿಯಲ್ಲಿ ಪತ್ತೆಯಾದ ಐದು ಮಂಕಿಪಾಕ್ಸ್‌‌ ಸೋಂಕಿನ ಪ್ರಕರಣಗಳಲ್ಲಿ, ರೋಗಿಗಳು ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ಮಾಡದೆ ಇದ್ದರೂ ಅವರಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯೊಂದು ವಿವರಿಸಿದ್ದು, ಸಮುದಾಯದ ನಡುವೆ ಮಂಕಿಪಾಕ್ಸ್‌ ಸೋಂಕಿನ ಬಗ್ಗೆ ಸರಿಯಾಗಿ ರೋಗನಿರ್ಣಯ ಮಾಡಲು ವಿಫಲವಾಗಿದೆ ವರದಿ ಸೂಚಿಸಿದೆ.

ನವದೆಹಲಿಯ ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜು, ಪುಣೆಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ – ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ನವದೆಹಲಿಯ ಏಮ್ಸ್‌ನ ಸಂಶೋಧಕರು, ಸೋಂಕು ಹರಡಲು ಹೆಚ್ಚಿನ ಸಾಧ್ಯತೆ ಇರುವ ಪುರುಷ ಮತ್ತು ಸ್ತ್ರೀ ಲೈಂಗಿಕ ಕಾರ್ಯಕರ್ತರೊಂದಿಗೆ ಲೈಂಗಿಕತೆಯಲ್ಲಿ ಏರ್ಪಡುವ ಜನರಲ್ಲಿ ಮಂಕಿಪಾಕ್ಸ್ ವೈರಸ್ (MPXV)ನ ಸಕ್ರಿಯ ಕಣ್ಗಾವಲು ಅಗತ್ಯವನ್ನು ಒತ್ತಿಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವರ್ಷ ಜುಲೈ 14 ರಂದು, ಭಾರತದ ಮೊದಲ ಮಂಕಿಪಾಕ್ಸ್‌‌ ಪ್ರಕರಣ ಕೇರಳದಲ್ಲಿ ವರದಿ ಆಗಿತ್ತು. ಅಂದಿನಿಂದ, ಅಕ್ಟೋಬರ್ 13, 2022 ರವರೆಗೆ ಕೇರಳದಲ್ಲಿ 6 ಪ್ರಕರಣದಗಳು ಮತ್ತು ದೆಹಲಿಯಲ್ಲಿ 14 ಪ್ರಕರಣಗಳು ಸೇರಿ ಒಟ್ಟು 20 ದೃಡಪಡಿಸಿದ ಮಂಕಿಪಾಕ್ಸ್ ಪ್ರಕರಣಗಳನ್ನು ಗುರುತಿಸಲಾಗಿದೆ.

ಇದನ್ನೂ ಓದಿ: ಮಂಕಿಪಾಕ್ಸ್: ಆತಂಕದ ಅವಶ್ಯಕತೆ ಇಲ್ಲ; ತಿಳಿವಳಿಕೆ ಮತ್ತು ಮುನ್ನೆಚ್ಚರಿಕೆಯಿಂದ ನಿಯಂತ್ರಣ ಸಾಧ್ಯ

ಅಕ್ಟೋಬರ್‌ನಲ್ಲಿ ಜರ್ನಲ್ ಆಫ್ ಮೆಡಿಕಲ್ ವೈರಾಲಜಿಯಲ್ಲಿ ಪ್ರಕಟವಾದ ಅಧ್ಯಯನವು, ಕೇರಳದಲ್ಲಿ ಪತ್ತೆಯಾದ ಪ್ರಕರಣಗಳು ಉತ್ತಮವಾಗಿ ವ್ಯಾಖ್ಯಾನಿಸಲಾದ ಸಾಂಕ್ರಾಮಿಕ ರೋಗಶಾಸ್ತ್ರೀಯ ಸಂಬಂಧವನ್ನು ಹೊಂದಿವೆ ಎಂದು ಹೇಳಿದೆ. ಕೇರಳದ ಈ ಪ್ರಕರಣಗಳಲ್ಲಿ ರೋಗಿಗಳು ಅಂತರಾಷ್ಟ್ರೀಯ ಪ್ರಯಾಣ ಮಾಡಿರುವ ಬಗ್ಗೆ ಮತ್ತು ಶಂಕಿತ ರೋಗಿಗಳೊಂದಿಗೆ ಸಂಪರ್ಕ ಇದ್ದ ಬಗ್ಗೆ ಹೇಳಲಾಗಿದೆ.

ಆದರೆ ದೆಹಲಿಯಲ್ಲಿ ಪತ್ತೆಯಾದ ಮಂಕಿಪಾಕ್ಸ್‌‌‌ ಪ್ರಕರಣದಲ್ಲಿ ರೋಗಿಗಳು ಸೋಂಕಿತ ಪ್ರದೇಶಗಳಿಗೆ ಪ್ರಯಾಣ ಮಾಡದೆ ಅವರಿಗೆ ಸೋಂಕು ತಗಲಿರುವ ಬಗ್ಗೆ ವರದಿ ಉಲ್ಲೇಖಿಸಿದೆ. “ನವದೆಹಲಿಯಿಂದ ದೃಢಪಟ್ಟ ಮಂಕಿಪಾಕ್ಸ್ ಪ್ರಕರಣಗಳಲ್ಲಿ ಸೋಂಕಿತರು, ಮಂಕಿಪಾಕ್ಸ್ ಇರುವ ಪ್ರದೇಶಗಳಿಗೆ ಪ್ರಯಾಣ ಮಾಡಿಲ್ಲ” ಎಂದು ಸಂಶೋಧಕರು ತಿಳಿಸಿದ್ದು, ಜೊತೆಗೆ ಈ ಮಂಕಿಪಾಕ್ಸ್ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ಸಂಪೂರ್ಣವಾಗಿ ಚೇತರಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

“ಇದು ಆರಂಭಿಕ ಪತ್ತೆ ಮತ್ತು ರೋಗಿಗಳ ನಿರ್ವಹಣೆಗೆ ಸಕಾಲಿಕ ಕ್ಲಿನಿಕಲ್ ಮತ್ತು ಪ್ರಯೋಗಾಲಯ ರೋಗನಿರ್ಣಯದ ಮಹತ್ವವನ್ನು ಒತ್ತಿಹೇಳುತ್ತದೆ” ಎಂದು ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ಪ್ರಮುಖ ಲೇಖಕ ಡಾ. ವಿನೀತ್ ರೆಲ್ಹಾನ್ ವರದಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮಂಕಿಪಾಕ್ಸ್: ಕೋವಿಡ್ ರೀತಿ ವೇಗವಾಗಿ ಹರಡುವುದಿಲ್ಲ ಎಂದ ತಜ್ಞರು

ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಪುರುಷರ ಮೂಲಕ ಪ್ರಮುಖವಾಗಿ ಮಂಕಿಪಾಕ್ಸ್‌ ಹರಡುತ್ತಿದೆ ಎಂದು 2022 ರ ವರದಿ ಉಲ್ಲೇಖಿಸಿತ್ತು.

ಆದ್ದರಿಂದ, ಸೋಂಕಿನ ಪ್ರಸರಣವನ್ನು ಅರ್ಥಮಾಡಿಕೊಳ್ಳಲು ಪುರುಷ-ಪುರುಷರ ನಡೆಸುವ ಲೈಂಗಿಕ ಸಂಬಂಧ ನಡೆಸುವವರು, ಮಹಿಳಾ ಲೈಂಗಿಕ ಕಾರ್ಯಕರ್ತರು, ಪುರುಷ ಮತ್ತು ಸ್ತ್ರೀಯರೊಂದಿಗೆ ಲೈಂಗಿಕ ಸಂಬಂಧದಲ್ಲಿ ಏರ್ಪಡುವ ಜನರ ಮೇಲೆ ತೀವ್ರ ಕಣ್ಗಾವಲು ಅಗತ್ಯವಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಮಂಕಿಪಾಕ್ಸ್ ಸೋಂಕಿನ ಹೊಸ ಪ್ರಸ್ತುತಿಗಳನ್ನು ಅರ್ಥಮಾಡಿಕೊಳ್ಳಲು ಆರೋಗ್ಯ ಕಾರ್ಯಕರ್ತರಲ್ಲಿ, ನಿರ್ದಿಷ್ಟವಾಗಿ ಲೈಂಗಿಕವಾಗಿ ಹರಡುವ ಸೋಂಕುಗಳು ಚಿಕಿತ್ಸಾಲಯಗಳಲ್ಲಿ ಕೆಲಸ ಮಾಡುವವರಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಿದೆ ಎಂದು ಅಧ್ಯಯನ ಹೇಳಿದೆ.

ಇದನ್ನೂ ಓದಿ: ಭಾರತದ ಮೊದಲನೇ ‘ಮಂಕಿಪಾಕ್ಸ್‌‌’ ಕೇರಳದಲ್ಲಿ ಪತ್ತೆ

ಮಂಕಿಪಾಕ್ಸ್ ವೈರಸ್ ಒಂದು ಹೆಚ್ಚುತ್ತಿರುವ ಆರ್ಥೋಪಾಕ್ಸ್ ವೈರಸ್ ಆಗಿದ್ದು, ಮೇ 2022 ರಿಂದ ಪತ್ತೆಯಾಗುತ್ತಿದೆ. ಅಕ್ಟೋಬರ್ 14, 2022 ರವರೆಗೆ 109 ಸ್ಥಳಗಳಿಂದ ಒಟ್ಟು 73,288 ಮಂಕಿಪಾಕ್ಸ್‌ ಪ್ರಕರಣಗಳು ಪತ್ತೆಹಚ್ಚಲಾಗಿದೆ ಎಂದು ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...