Homeರಾಷ್ಟ್ರೀಯಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

ಜ್ಞಾನವಾಪಿ: ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಇರುವ ‘ಶಿವಲಿಂಗ’ ಎನ್ನಲಾದ ಕಾರಂಜಿಯ ಕುರಿತು ವೈಜ್ಞಾನಿಕ ತನಿಖೆ ನಡೆಸುವಂತೆ ಹಿಂದೂ ಕಕ್ಷಿದಾರರು ಸಲ್ಲಿಸಿರುವ ಮನವಿಯನ್ನು ವಾರಣಾಸಿ ನ್ಯಾಯಾಲಯ ಅಕ್ಟೋಬರ್‌ 14 ರಂದ ತಿರಸ್ಕರಿಸಿತ್ತು. ಇದೀಗ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಮೇಲೆ ಅಲಹಾಬಾದ್ ಹೈಕೋರ್ಟ್ ಭಾರತೀಯ ಪುರಾತತ್ವ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.

ಕಳೆದ ತಿಂಗಳು, ವಾರಣಾಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿದೆ ಎನ್ನಲಾಗಿರುವ ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆಯನ್ನು ಕೋರಿ ಹಿಂದೂ ಕಕ್ಷಿದಾರರ ಮನವಿಯನ್ನು ತಿರಸ್ಕರಿಸಿತ್ತು. ಜ್ಞಾನವಾಪಿ ಮಸೀದಿಯ ಸಮೀಕ್ಷೆಯ ಸಮಯದಲ್ಲಿ “ಶಿವಲಿಂಗ” ಪತ್ತೆಯಾಗಿದೆ ಎಂದು ಹೇಳಲಾದ ಸ್ಥಳವನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ನ ಆದೇಶವನ್ನು ಪರಿಗಣಿಸಿ ಮನವಿಯನ್ನು ತಿರಸ್ಕರಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಾರಣಾಸಿ ಸ್ಥಳೀಯ ನ್ಯಾಯಾಲಯದ ಆದೇಶದ ಪ್ರಕಾರ ನಡೆದ ವೀಡಿಯೊಗ್ರಫಿ ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಕಂಡುಬಂದಿದೆ ಎಂದು ಹೇಳಲಾದ ‘ಶಿವಲಿಂಗ’ದ ಕಾರ್ಬನ್-ಡೇಟಿಂಗ್ ಅನ್ನು ಐವರು ಅರ್ಜಿದಾರರ ಪೈಕಿ ನಾಲ್ವರು ಕೋರಿದ್ದರು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

ಮಸೀದಿಯ ಸಂಕೀರ್ಣದ ಒಳಗೆ ವರ್ಷಪೂರ್ತಿ ಪ್ರಾರ್ಥನೆಗೆ ಅವಕಾಶವನ್ನು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ.

ಕಾರ್ಬನ್ ಡೇಟಿಂಗ್‌ನಂತಹ ಯಾವುದೇ ಸಮೀಕ್ಷೆಯು ಮಸೀದಿಯೊಳಗಿನ “ಶಿವಲಿಂಗ” ಸ್ಥಳವನ್ನು ಸೀಲ್ ಮಾಡಲು ಹೇಳಿರುವ ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ. ಆಪಾದಿತ ರಚನೆಗೆ ಮಾಡಲಾಗುವ ಯಾವುದೇ ಹಾನಿಯು ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೇಳಿರುವ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಎಂದು ವಾರಣಾಸಿ ನ್ಯಾಯಾಲಯ ಅಕ್ಟೋಬರ್‌ 14 ರ ತೀರ್ಪಿನಲ್ಲಿ ಹೇಳಿತ್ತು.

‘ಶಿವಲಿಂಗ’ಕ್ಕೆ ಯಾವುದೇ ಹಾನಿಯು ಧಾರ್ಮಿಕ ಭಾವನೆಗಳಿಗೆ ಹಾನಿ ಮಾಡುತ್ತದೆ ಮತ್ತು ವಿವಾದದ ಕಾನೂನು ಪರಿಹಾರದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಾಲಯ ತಿಳಿಸಿತ್ತು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

ಮಸೀದಿ ಸಮಿತಿಯು ಇಂತಹ ತನಿಖೆಯನ್ನು ಆಕ್ಷೇಪಿಸಿದ್ದು, ಪ್ರಕರಣವು ಮಸೀದಿಯೊಳಗಿನ ದೇಗುಲದಲ್ಲಿ ಪೂಜೆ ಮಾಡುವ ಬಗ್ಗೆ ಮತ್ತು ಅದರ ಆಪಾದಿತ ರಚನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿತ್ತು. ‘ಶಿವಲಿಂಗ’ ಎಂದು ಆಪಾದಿಸಲಾಗಿರುವ ವಸ್ತುವು ವಾಸ್ತವವಾಗಿ ‘ಕಾರಂಜಿ’ ಆಗಿದೆ ಎಂದು ನ್ಯಾಯಾಲಯದಲ್ಲಿ ವಾದಿಸಿತ್ತು.

ಸೆಪ್ಟೆಂಬರ್ 12 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಐವರು ಮಹಿಳೆಯರ ಪ್ರಕರಣಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ವಾದಿಸಿದ ಮಸೀದಿ ಸಮಿತಿಯ ಅರ್ಜಿಯನ್ನು ವಜಾಗೊಳಿಸಿ, ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಗೊಳಿಸಿತ್ತು.

ಈ ವರ್ಷದ ಆರಂಭದಲ್ಲಿ, ವಾರಣಾಸಿಯ ಕೆಳ ನ್ಯಾಯಾಲಯವು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಶತಮಾನಗಳಷ್ಟು ಹಳೆಯದಾದ ಮಸೀದಿಯ ಚಿತ್ರೀಕರಣಕ್ಕೆ ಆದೇಶ ನೀಡಿತ್ತು. ಈ ವೇಳೆ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡು ಬಂದಿದೆ ಎಂದು ಆರೋಪಿಸಿ ಸಮೀಕ್ಷೆಯ ವಿಡಿಯೊ ಸೋರಿಕೆ ಮಾಡಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯು ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂಗಳು ಆರೋಪಿಸುತ್ತಿದ್ದಾರೆ. 1980- 90 ರ ದಶಕದಲ್ಲಿ ಬಿಜೆಪಿ ಬೆಳೆಸಿದ ಅಯೋಧ್ಯೆ ಮತ್ತು ಮಥುರಾ ಜೊತೆಗೆ ಇರುವ ಮಸೀದಿಗಳಲ್ಲಿ ಈ ಮಸೀದಿಯು ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...