Homeದಲಿತ್ ಫೈಲ್ಸ್ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು - ಪ್ರತಿಭಟನೆ

ದಲಿತರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಣೆ: ದೂರು – ಪ್ರತಿಭಟನೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ವೆಂಕಟರಮಣ ದೇವಸ್ಥಾನದಲ್ಲಿ ಪರಿಶಿಷ್ಟ ಜಾತಿ ಸಮುದಾಯದವರ ಮದುವೆಗೆ ಕಲ್ಯಾಣ ಮಂಟಪ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ಆರೋಪಿಸಿ ದೂರು ದಾಖಲಾಗಿದ್ದು, ತಹಶೀಲ್ದಾರ್ ಕಚೇರಿ ಎದುರು ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಗುಡಿಬಂಡೆ ತಾಲ್ಲೂಕಿನ ಬ್ರಾಹ್ಮಣರಹಳ್ಳಿಯ ಪರಿಶಿಷ್ಟ ಜಾತಿ ಸಮುದಾಯದ ವೆಂಕಟರಾಯಪ್ಪನವರ ಪುತ್ರಿ ವೆಂಕಟಲಕ್ಷ್ಮಿ ಮತ್ತು ಬಾಗೇಪಲ್ಲಿಯ ಮಹೇಶ್ ಎಂಬುವವರ ನಡುವೆ ನವೆಂಬರ್ 3ರಂದು ವಿವಾಹ ನಿಶ್ಚಯವಾಗಿತ್ತು. ಅದಕ್ಕೂ 15 ದಿನ ಮೊದಲೇ ವೆಂಕಟಲಕ್ಷ್ಮಿಯ ಸಹೋದರ ಆವುಲಕೊಂಡಪ್ಪ ಎಂಬುವವರು ಗುಡಿಬಂಡೆಯ ವೆಂಕಟರಮಣ ದೇವಾಲಯ ಸಮಿತಿಯ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರ ಬಳಿ ತೆರಳಿ ನನ್ನ ತಂಗಿಯ ವಿವಾಹಕ್ಕೆ ದೇವಾಲಯ ಕಲ್ಯಾಣ ಮಂಟಪ್ಪವನ್ನು ಬಾಡಿಗೆಗೆ ನೀಡಬೇಕೆಂದು ಮನವಿ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆದರೆ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪರವರು ಅಂದು ಬೇರೆ ಮದುವೆ ನಿಗಧಿಯಾಗಿದೆ ಎಂದು ಸುಳ್ಳು ಹೇಳಿರುತ್ತಾರೆ. ವೆಂಕಟಲಕ್ಷ್ಮಿ ಮತ್ತು ಮಹೇಶ್ ಮದುವೆಯ ಲಗ್ನ ಪತ್ರಿಕೆಯಲ್ಲಿ ಅದೇ ಕಲ್ಯಾಣ ಮಂಟಪದ ಹೆಸರು ಸಹ ಮುದ್ರಿಸಿರುತ್ತಾರೆ. ಆದರೆ ಅಂದು ದೇವಾಲಯ ಬೀಗ ಹಾಕಿ ದಲಿತರ ಮದುವೆಗೆ ಅವಕಾಶ ನೀಡಿಲ್ಲ. ಅನಿವಾರ್ಯವಾಗಿ ದೇವಾಲಯದ ಹೊರಗೆ ಮದುವೆ ಮಾಡಲಾಗಿದೆ ಎಂದು ತಹಶೀಲ್ದಾರ್‌ರವರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಸದರಿ ದೇವಸ್ಥಾನವು ಮುಜರಾಯಿ ಇಲಾಖೆಗೆ ಸೇರಿದ್ದು, ಎಲ್ಲಾ ಜಾತಿಯವರಿಗೂ ಬಳಕೆಯ ಹಕ್ಕಿದೆ ಎಂದು ಕಾನೂನು ಹೇಳುತ್ತದೆ. ಆದರೂ ನವೆಂಬರ್ 3 ರಂದು ಬೇರೆ ಯಾವುದೇ ಮದುವೆ ಇಲ್ಲದಿದ್ದರೂ ಸಹ ಉದ್ದೇಶಪೂರ್ವಕವಾಗಿ ದಲಿತರ ಮದುವೆಗೆ ಅವಕಾಶ ನೀಡದೆ ಅಸ್ಪೃಶ್ಯತೆ ಆಚರಿಸಲಾಗಿದೆ ಎಂದು ವಧುವಿನ ಸಹೋದರ ಆವುಲಕೊಂಡಪ್ಪ ತಹಶೀಲ್ದಾರ್‌ರವರಿಗೆ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ತಹಶೀಲ್ದಾರ್‌ ಸಿಗ್ಬತ್ ಉಲ್ಲಾರವರು, “ದೂರು ಪರಿಶೀಲಿಸಿದಾಗ ಮೇಲ್ನೋಟಕ್ಕೆ ತಪ್ಪು ನಡೆದಿರುವುದು ಕಂಡುಬಂದಿದೆ. ಹಾಗಾಗಿ ಟ್ರಸ್ಟ್ ಕಾರ್ಯದರ್ಶಿ ಮಾಚಾವಲಹಳ್ಳಿ ವೆಂಕಟರಾಯಪ್ಪನವರಿಗೆ ಕಾರಣ ಕೇಳಿ ನೋಟಿಸ್ ಕಳಿಸಲಾಗಿದೆ. ಅವರಿಂದ ಮಾಹಿತಿ ಬಂದ ನಂತರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ದಲಿತ ಸಂಘರ್ಷ ಸಮಿತಿಯ ಮುಖಂಡರು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮತ್ತು ಗುಡಿಬಂಡೆ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಿಗೂ ಸಹ ದೂರು ಸಲ್ಲಿಸಿದ್ದಾರೆ. ಆನಂತರ ಆರೋಪಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಮತ್ತು ಅಸ್ಪೃಶ್ಯತೆ ಆಚರಣೆ ನಿಲ್ಲಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ದಸಂಸ ಮುಖಂಡರಾದ ಜಿ.ವಿ ಗಂಗಪ್ಪ, ಗುಡಿಬಂಡೆ ತಾಲ್ಲೂಕು ಸಂಚಾಲಕ ರಮಣ, ಇಸ್ಕೂಲಪ್ಪ, ಆದಿನಾರಾಯಣ, ನರಸಿಂಹಮೂರ್ತಿ, ಅಮರಾವತಿ, ಗಂಗರಾಜು, C. ಮುನಿಯಪ್ಪ, M. ವೆಂಕಟ ರಾಯಪ್ಪ ಉಪಸ್ಥಿತರಿದ್ದರು.

ಇದನ್ನೂ ಓದಿ; ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಲಿತರು ಕಲ್ಯಾಣ ಮಂಟಪದಲ್ಲಿ ಮದುವೆ ಆಗುವಂತಿಲ್ಲ ತಪ್ಪು. . ಪಕ್ಕದಲ್ಲಿ ಕುಳಿತರೆ ತಪ್ಪು. ಪ್ರೇಮ ವಿವಾಹ ತಪ್ಪು.ಸಂಭ್ರಮ ಆಚರಣೆ ಮಾಡಿದರೆ ತಪ್ಪು. ಶಾಲೆಯಲ್ಲಿ ಅಡಿಗೆ ಮಾಡಿದರೆ ತಪ್ಪು……..!

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...