Homeಅಂತರಾಷ್ಟ್ರೀಯತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ ಟ್ವಿಟರ್: ಬೇರೆ ಆಯ್ಕೆ ಇಲ್ಲವೆಂದ ಎಲಾನ್ ಮಸ್ಕ್‌‌!

ತನ್ನ ಅರ್ಧದಷ್ಟು ಉದ್ಯೋಗಿಗಳನ್ನು ವಜಾ ಮಾಡಿದ ಟ್ವಿಟರ್: ಬೇರೆ ಆಯ್ಕೆ ಇಲ್ಲವೆಂದ ಎಲಾನ್ ಮಸ್ಕ್‌‌!

- Advertisement -
- Advertisement -

ಬಿಲೇನಿಯರ್‌‌ ಎಲಾನ್ ಮಸ್ಕ್‌‌ ಅವರು ಸಾಮಾಜಿಕ ಜಾಲತಾಣ ಟ್ವಿಟರ್‌‌ ಅನ್ನು ಸ್ವಾಧೀನಪಡಿಸಿಕೊಂಡ ಒಂದು ವಾರದಲ್ಲೆ ಕಂಪೆನಿಯ ಸುಮಾರು 7,500 ಸಿಬ್ಬಂದಿಯನ್ನು ಶುಕ್ರವಾರ ವಜಾಗೊಳಿಸಿದೆ. “ಕಂಪೆನಿಯ ಸುಮಾರು 50% ದಷ್ಟು ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ” ಎಂದು ಸುದ್ದಿ ಸಂಸ್ಥೆ ಎಎಫ್‌ಫಿ ಹೇಳಿದೆ.

ಪ್ರಪಂಚದಾದ್ಯಂತದ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಅವರು ತಮ್ಮ ಹತಾಶೆಯನ್ನು ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. “ಟ್ವಿಟ್ಟರ್‌ನಲ್ಲಿ ನನ್ನ ಕೆಲಸವು ಕೊನೆಗೊಂಡಿದೆ ಎಂಬ ಸುದ್ದಿಯಿಂದ ನನಗೆ ತಲುಪಿದೆ. ಈ ಬಗ್ಗೆ ನಾನು ಎದೆಗುಂದಿದ್ದು, ಇದನ್ನು ನಾನು ವಿರೋಧಿಸುತ್ತಿದ್ದೇನೆ” ಎಂದು ಟ್ವಿಟರ್‌‌ನ ಕೆನಡಾ ಮತ್ತು ಅಮರಿಕದ ಸಾರ್ವಜನಿಕ ನೀತಿ ನಿರ್ದೇಶಕ ಮಿಚೆಲ್ ಆಸ್ಟಿನ್ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದುರದೃಷ್ಟವಶಾತ್ ಕಂಪನಿಯು ದಿನಕ್ಕೆ 40 ಲಕ್ಷ ಡಾಲರ್‌‌ನಷ್ಟು ಕಳೆದುಕೊಳ್ಳುತ್ತಿರುವಾಗ ಬೇರೆ ಯಾವುದೇ ಆಯ್ಕೆಯಿಲ್ಲ” ಎಂದು ಎಲಾನ್ ಮಸ್ಕ್‌‌ ಶುಕ್ರವಾರ ಸಂಜೆ ಈ ವಿಷಯದ ಕುರಿತು ತಮ್ಮ ಮೊದಲ ಕಾಮೆಂಟ್‌ನಲ್ಲಿ ಟ್ವೀಟ್ ಮಾಡಿದ್ದಾರೆ. ವಜಾಗೊಳಿಸುವ ಮುನ್ನ, ಟ್ವಿಟರ್ ವಿಶ್ವಾದ್ಯಂತ ತನ್ನ ಕಚೇರಿಗಳಿಗೆ ಪ್ರವೇಶವನ್ನು ಮುಚ್ಚಿತ್ತು ಮತ್ತು ಇಮೇಲ್ ಮೂಲಕ ತಮ್ಮ ಭವಿಷ್ಯದ ಸುದ್ದಿಗಾಗಿ ಕಾಯಲು ಉದ್ಯೋಗಿಗಳನ್ನು ಮನೆಯಲ್ಲಿಯೇ ಇರುವಂತೆ ಕೇಳಿತ್ತು.

ಇದನ್ನೂ ಓದಿ: ಬಲಪಂಥೀಯ ಮುಖ ಕಳಚಿಕೊಳ್ಳಲು ‘ದೇಸಿ ಟ್ವಿಟರ್‌‌ ಕೂ’ ಪ್ರಯತ್ನ: ವರದಿ

“ಜನರನ್ನು ಈ ರೀತಿ ನಡೆಸಿಕೊಳ್ಳುತ್ತಿರುವುದು ತುಂಬಾ ಅಮಾನವೀಯವಾಗಿದೆ. ಇದು ಕೂಲಿ ಪ್ರಯತ್ನದಂತೆ ತೋರುತ್ತದೆ, ಕಂಪೆನಿಯು ಏನು ಮಾಡಿಯಾದರೂ ಹಣ ಉಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೆಸರು ಹೇಳಲಿಚ್ಛಿಸದ ವಜಾಗೊಂಡ ಉದ್ಯೋಗಿಯೊಬ್ಬರು ಹೇಳಿದ್ದಾರೆ.

ಶತಕೋಟಿ ಡಾಲರ್‌ಗಳನ್ನು ಸಾಲ ಪಡೆದುಕೊಂಡು ಮಾಡಿದ್ದ ಒಪ್ಪಂದದಂತೆ 44 ಶತಕೋಟಿ ಡಾಲರ್‌ಗಳ ಬೃಹತ್ ಮೊತ್ತದವನ್ನು ಪಾವತಿಸಲು ಬೇಕಾಗಿ ಎಲಾನ್ ಮಸ್ಕ್‌‌ ಈ ಪ್ರಯತ್ನ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ. ಇದಕ್ಕಾಗಿ ಅವರು ತಮ್ಮ ಎಲೆಕ್ಟ್ರಿಕ್ ಕಾರ್ ಕಂಪನಿಯಾದ ಟೆಸ್ಲಾದ 15.5 ಶತಕೋಟಿ ಡಾಲರ್‌‌ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಕಂಪೆನಿಯಲ್ಲಿ ಉಳಿದ ಉದ್ಯೋಗಿಗಳ ಮೇಲೆ ಬಿರುಸಿನ ವೇಗವನ್ನು ಎಲಾನ್ ಮಸ್ಕ್‌‌ ಅವರ ತಂಡ ಹೇರುತ್ತಿವೆ ಎಂದು ಕಂಪನಿಯ ಮೂಲಗಳು ಹೇಳಿವೆ. ಟ್ವಿಟ್ಟರ್ ಉದ್ಯೋಗಿಗಳ ಕೆಲಸವನ್ನು ಮೇಲ್ವಿಚಾರಣೆ ಮಾಡಲು ಟೆಸ್ಲಾ ಡೆವಲಪರ್‌ಗಳನ್ನು ಕರೆತರುತ್ತಿವೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಅಪ್ರಾಪ್ತ ಹೆಣ್ಣುಮಕ್ಕಳ ವೈಯಕ್ತಿಕ ವಿವರ ಪೋಸ್ಟ್‌‌ ಮಾಡಿದ್ದ ಬಿಜೆಪಿ: ಟ್ವೀಟ್‌ ರದ್ದು ಮಾಡಿದ ಟ್ವಿಟರ್‌‌

ಭಾರಿ ಹಣ ಪಾವತಿಸಿ ಟ್ವಿಟರ್‌ ಅನ್ನು ಕೊಂಡುಕೊಂಡಿದ್ದ ಎಲಾನ್ ಮಸ್ಕ್‌‌ ಹಣ ಸಂಪಾದಿಸಲು ಹೊಸ ಮಾರ್ಗಗಳನ್ನು ಹುಡುಕಲು ಇದನ್ನೆಲ್ಲಾ ಮಾಡುತ್ತಿದ್ದು, ಬ್ಲೂಟಿಕ್‌‌ ಬಳಕೆದಾರರಿಗೆ ತಿಂಗಳಿಗೆ 8 ಡಾಲರ್‌‌ ಶುಲ್ಕ ವಿಧಿಸುವ ಕಲ್ಪನೆ ಕೂಡಾ ಇದರಲ್ಲಿ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...