Homeಮುಖಪುಟಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

ಸಿದ್ದರಾಮಯ್ಯನವರೇ, ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗಾಗುತ್ತದೆ: ಬಿ.ಸಿ ನಾಗೇಶ್ ಪ್ರಶ್ನೆ

- Advertisement -
- Advertisement -

ಶಾಲೆಗಳಲ್ಲಿ ಧ್ಯಾನ ಕಡ್ಡಾಯ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಈ ಯೋಜನೆಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಪ್ರಶ್ನೆಗಳ ಸುರಮಳೆ ಸುರಿಸಿದ್ದಾರೆ.

“ಸಿದ್ದರಾಮಯ್ಯನವರೇ, ಮಾನಸಿಕ, ದೈಹಿಕ ಆರೋಗ್ಯ, ಏಕಾಗ್ರತೆ, ವ್ಯಕ್ತಿತ್ವ ವಿಕಸನಕ್ಕಾಗಿ ಶಾಲಾ ಮಕ್ಕಳು 10 ನಿಮಿಷ ಧ್ಯಾನ ಮಾಡುವ ಉತ್ತಮ ಆಲೋಚನೆಯಲ್ಲೂ ನಿಮ್ಮಂತವರು ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವುದು ದುರಾದೃಷ್ಟಕರ. ಮಕ್ಕಳು ಧ್ಯಾನ ಮಾಡುವುದು ಗಿಮಿಕ್ ಹೇಗೆ ಆಗುತ್ತದೆ ಎಂಬುದನ್ನು ಜನತೆಗೆ ಸ್ವಲ್ಪ ವಿವರಿಸುವಿರಾ?” ಎಂದು ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಸಂಶೋಧಕರು, ವೈದ್ಯರು, ವಿಜ್ಞಾನಿಗಳ ಪ್ರಕಾರ ಯೋಗ ಮತ್ತು ಧ್ಯಾನ ಮಾಡುವುದು ದೈಹಿಕ, ಮಾನಸಿಕ ಆರೋಗ್ಯಕ್ಕೆ ಅತ್ಯಂತ ಉಪಯುಕ್ತ. ಆದರೆ, ನೀವು ಮಾತ್ರ ಧ್ಯಾನ, ಯೋಗ ಮಾಡಿದರೆ ಮಕ್ಕಳು ‘ಕುಗ್ಗಿ ಹೋಗುತ್ತಾರೆ’ ಎನ್ನುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಮೊದಲು “ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದರು.

“ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ. ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ” ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದರು.

“ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು ನವೆಂಬರ್ 03ರಂದು ಬಿ.ಸಿ ನಾಗೇಶ್ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ: ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾಗೇಷ್ ರವರೇ ಎರಡೂಕಡೆಯಿಂದ ಯೋಚಿಸೀ, ನಿಮ್ಮತರಹ ಮುಠ್ಠಾಳರು ವಿದ್ಯಾ ಮಂತ್ರಿಯೇ, ಈವಯಸ್ಸೀಲ್ಲೂ ಅರ್ಥವಾಗದಮೇಲೇ ಗುಂಡೀಗೋದಮೇಲೆ ಆಗುತ್ತದಯೇ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...