Homeಕರ್ನಾಟಕಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

ಮತ್ತೊಂದು ವಿವಾದಕ್ಕೆ ರಂಗಾಯಣ ನಿರ್ದೇಶಕರ ರೂಪುರೇಷೆ; ‘ಟಿಪ್ಪು’ ಕುರಿತ ನಾಟಕ ಪ್ರದರ್ಶನಕ್ಕೆ ಸಿದ್ಧ

- Advertisement -
- Advertisement -

ಸದಾ ವಿವಾದದ ಮೂಲಕ ಸುದ್ದಿಯಲ್ಲಿರುವ ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಈಗ ಮೈಸೂರು ಆಳಿದ ‘ಟಿಪ್ಪು ಸುಲ್ತಾನ್‌’ ಕುರಿತು ನಾಟಕ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ ಟಿಪ್ಪು ಸುಲ್ತಾನ್ ಕುರಿತು ಟೀಕಾಪ್ರಹಾರ ನಡೆಸಿದ್ದಾರೆ.

ಸುಳ್ಳುಗಳಿಂದಲೇ ಟೀಕೆಗೆ ಒಳಗಾಗಿರುವ ವ್ಯಕ್ತಿಯನ್ನು ಬಹುರೂಪಿ ನಾಟಕೋತ್ಸವಕ್ಕೆ ಕರೆಸಿ ವಿವಾದ ಸೃಷ್ಟಿಸಿದ್ದರಿಂದ ಹಿಡಿದು, ಕಿರಿಯ ಕಲಾವಿದರ ಮೇಲೆ ಟೀಕಾಪ್ರಹಾರವನ್ನು ನಡೆಸಿದವರೆಗೆ ರಂಗಾಯಣವನ್ನು ಕೋಮು ಕೇಂದ್ರಿತ ಮಾಡಿದರೆಂಬ ಟೀಕೆಗೆ ಗುರಿಯಾಗಿರುವ ಕಾರ್ಯಪ್ಪ ಈಗ ಮತ್ತೊಮ್ಮೆ ವಿವಾದದ ಕಡೆಗೆಯೇ ಗಮನ ಹರಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಪ್ಪ ಅವರೇ ಬರೆದಿರುವ ‘ಟಿಪ್ಪುವಿನ ನಿಜ ಕನಸುಗಳು’ ನಾಟಕ ಕೃತಿಯನ್ನು ವನರಂಗದಲ್ಲಿ ಡಾ.ಎಸ್‌.ಎಲ್‌.ಭೈರಪ್ಪ ಅವರು ನ.13ರಂದು ಬಿಡುಗಡೆ ಮಾಡಲಿದ್ದಾರೆ. ನ.20ರಿಂದ ಭೂಮಿಗೀತದಲ್ಲಿ ರಂಗಪ್ರಸ್ತುತಿ ನಡೆಯಲಿದೆ.

ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ, ಆರ್‌ಎಸ್‌ಎಸ್ ಮುಖಂಡ ವಾದಿರಾಜ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆಯ ವಿವಾದಕ್ಕೆ ಕಾರಣವಾಗಿದ್ದ ರೋಹಿತ್‌ ಚಕ್ರತೀರ್ಥ ಅವರು ಕೃತಿ ಕುರಿತು ಮಾತನಾಡಲಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿರುವ ಅಡ್ಡಂಡ ಕಾರ್ಯಪ್ಪ, ಭಿತ್ತಿಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ್ದಾರೆ. “ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುವ ದೃಷ್ಟಿಯಿಂದ ಟಿಪ್ಪು ಕುರಿತು ಬಚ್ಚಿಡಲಾದ ಅನೇಕ ಸತ್ಯಗಳನ್ನು ಹೊರಚೆಲ್ಲಲು 15 ದೃಶ್ಯಗಳ ನಾಟಕವನ್ನು ರಚಿಸಿ, ಪ್ರಯೋಗಕ್ಕೆ ಸಿದ್ಧಪಡಿಸಲಾಗಿದೆ. ರಂಗ ವಿನ್ಯಾಸ ಶಶಿಧರ ಉಡುಪ, ವಸ್ತ್ರಪರಿಕರ ವಿನ್ಯಾಸಕಾರ ಪ್ರಮೋದ್ ಶಿಗ್ಗಾಂವ್ ಮಾಡಿದ್ದಾರೆ. ಸುಬ್ರಹ್ಮಣ್ಯ ಮತ್ತು ಧನಂಜಯ ಅವರು ಈ ನಾಟಕಕ್ಕೆ ಸಂಗೀತ ಸಂಯೋಜಿಸಿದ್ದು, ಮಹೇಶ್ ಕಲ್ಲತ್ತಿ ಬೆಳಕಿನ ವಿನ್ಯಾಸ ಮಾಡಿದ್ದಾರೆ. ಎಸ್.ರಾಮನಾಥ್ ಕೆಲವು ಹಾಡುಗಳನ್ನು ಬರೆದಿದ್ದಾರೆ. ಮೂರು ಗಂಟೆಗಳ ಕಾಲ ನಾಟಕವನ್ನು ಪ್ರದರ್ಶಿಸಲಾಗುತ್ತಿದೆ” ಎಂದಿದ್ದಾರೆ.

ರಂಗಾಯಣ ರೆಪರ್ಟರಿಯ 15 ಕಲಾವಿದರೊಂದಿಗೆ 10 ಅತಿಥಿ ಕಲಾವಿದರು ಈ ನಾಟಕದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂವತ್ತು ಕಲಾವಿದರ ತಂಡ ಈ ನಾಟಕಕ್ಕೆ ಕೆಲಸ ಮಾಡಿದೆ. ನಾಟಕದ ಪ್ರಥಮ ಪ್ರದರ್ಶನ ನ.20ರಂದು ಸಂಜೆ 6 ಗಂಟೆಗೆ ನಡೆಯಲಿದೆ. ನಂತರ ನ.21, 24, 26, 27, 30 ಹಾಗೂ ಡಿಸೆಂಬರ್‌ 4ರಂದು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ವಿವರಿಸಿದ್ದಾರೆ.

“ಈ ನಾಟಕವು ಸತ್ಯ ಚರಿತ್ರೆಯ ಅನಾವರಣ. ಟಿಪ್ಪು ಕುರಿತು ಅತಿರಂಜಕ ಸುಳ್ಳು ಚರಿತ್ರೆಯೇ ನಿರ್ಮಾಣವಾಗಿದೆ. ಭಾರತೀಯ ಸಂಸ್ಕೃತಿಯ ಮೇಲೆ ನಡೆದಿರುವ ಮುಸ್ಲಿಂ ದೊರೆಗಳ ಆಕ್ರಮಣಕಾರಿ ಕೃತ್ಯಗಳನ್ನು ಅತ್ಯಂತ ಜಾಣತನದಿಂದ ಮುಚ್ಚಿಟ್ಟು ಬರೆದಿರುವ ಇತಿಹಾಸಕಾರರ ಚಿರಿತ್ರೆಯನ್ನೇ ಪಠ್ಯ ಪುಸ್ತಕವನ್ನಾಗಿಸಿ ಅದನ್ನೇ ಓದಿಸಿಕೊಂಡು ಬರಲಾಗಿದೆ. ಈ ಸುಳ್ಳಿನಲ್ಲಿ ಟಿಪ್ಪು ಸುಲ್ತಾನ್ ಸೇರುತ್ತಾನೆ” ಎಂದು ಕಾರ್ಯಪ್ಪ ಟೀಕಿಸಿದ್ದಾರೆ.

ಟಿಪ್ಪು ಸುಲ್ತಾನ್‌ ಕುರಿತು ನಿಲ್ಲದ ಅಪಪ್ರಚಾರ

ಮೈಸೂರು ಆಳಿದ ಟಿಪ್ಪು ಸುಲ್ತಾನ್‌ರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವ ಪ್ರಯತ್ನಗಳು ಹಲವು ವರ್ಷಗಳಿಂದ ನಡೆಯುತ್ತಲೇ ಇವೆ. ಆದರೆ ಚಿಂತಕರು, ಇತಿಹಾಸಕಾರರು ಬೇರೆಯೇ ಸಂಗತಿಗಳನ್ನು ಹೇಳುತ್ತಾರೆ. ‘ನಾನುಗೌರಿ.ಕಾಂ’ ಈ ಕುರಿತು ಪದೇ ಪದೇ ವರದಿಗಳನ್ನು ಮಾಡಿದೆ.

ಬ್ರಾಹ್ಮಣರಿಗೆ ಟಿಪ್ಪು ಭೂದಾನ ಮಾಡಿದ್ದಿದೆ. ತುಳುನಾಡಿನ ದೇವಾಲಯಗಳಿಗೆ, ಕೇರಳದ ಮಲಬಾರ್ ಪ್ರದೇಶಕ್ಕೆ ಟಿಪ್ಪು ಸಾಕಷ್ಟು ಕೊಡುಗೆಗಳನ್ನು ಟಿಪ್ಪು ನೀಡಿದ್ದಾರೆ. ಟಿಪ್ಪು, ಅರ್ಹತೆ ಮತ್ತು ಸಾಮರ್ಥ್ಯದ ಆಧಾರದಲ್ಲಿ ಎಲ್ಲ ಧರ್ಮೀಯರಿಗೂ ತನ್ನ ಆಸ್ಥಾನದಲ್ಲಿ ಉನ್ನತ ಹುದ್ದೆಗಳನ್ನು ನೀಡಿದ್ದರು ಎಂಬುದು ಇತಿಹಾಸ ಪುಟಗಳಿಂದ ತಿಳಿದುಬರುತ್ತದೆ.

ಇವುಗಳನ್ನೂ ಓದಿರಿ: ರಂಗಾಯಣ ನಿರ್ದೇಶಕರ ವಿವಾದಗಳ ಕುರಿತ ಸುದ್ದಿಗಳನ್ನು ಓದಲು ‘ಇಲ್ಲಿ ಕ್ಲಿಕ್’ ಮಾಡಿರಿ

“ಶೃಂಗೇರಿಯ ಮಠಾಧೀಶರಾಗಿದ್ದ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಹಲವು ಪತ್ರಗಳೇ ಆತನ ಪರಧರ್ಮ ಸಹಿಷ್ಣುತೆಗೆ ಸಾಕ್ಷಿಯಾಗಿವೆ. ಸ್ವಾಮೀಜಿಯವರಿಗೆ ಟಿಪ್ಪು ಬರೆದಿರುವ ಪತ್ರಗಳು ಕನ್ನಡದಲ್ಲಿರುವುದು- ಟಿಪ್ಪು ಕನ್ನಡ ವಿರೋಧಿ ಎನ್ನುವವರಿಗೆ ಉತ್ತರವಾಗಿವೆ” ಎನ್ನುತ್ತಾರೆ ‘ಟಿಪ್ಪು ಸುಲ್ತಾನ್‌’ ಕುರಿತು ಪುಸ್ತಕವನ್ನು ಬರೆದಿರುವ ‘ಇಸ್ಮತ್ ಫಜೀರ್‌’.

ಮರಾಠರ ಸೇನೆ ಶೃಂಗೇರಿ ಮಠದ ಮೇಲೆ ದಾಳಿ ಮಾಡಿದಾಗ, ಟಿಪ್ಪು ಸ್ವಾಮೀಜಿಯವರಿಗೆ ಪತ್ರ ಬರೆದು ಸಂತೈಸಿದ್ದಾರೆ. ಮಠಕ್ಕೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ಎಲ್ಲ ಸಹಕಾರವನ್ನು ಟಿಪ್ಪು ನೀಡಿರುವುದು ಇಲ್ಲಿನ ಪತ್ರಗಳಿಂದ ಸ್ಪಷ್ಟವಾಗುತ್ತದೆ.

ಸ್ವಾಮೀಜಿಯವರು ಪುಣೆಗೆ ಹೋಗಿ ಹಲವು ದಿನಗಳಾದರೂ ವಾಪಸ್ ಬರದಿದ್ದಾಗ ಟಿಪ್ಪು ಪತ್ರ ಬರೆದು, “ಶ್ರೀ ಸ್ವಾಮೀಜಿಯವರಿಗೆ ಟಿಪ್ಪು ಸುಲ್ತಾನ್ ಬಾದಶಹರವರ ಸಲಾಮು…. ತಮ್ಮಂಥಾ ದೊಡ್ಡವರು ಯಾವ ದೇಶದಲ್ಲಿ ಇದ್ದರೂ ಆ ದೇಶಕ್ಕೆ ಮಳೆ, ಬೆಳೆ ಸಕಲವೂ ಆಗಿ ಸುಭಿಕ್ಷೆಯೂ ಆಗಿ ಇರತಕ್ಕದ್ದರಿಂದ ಪರಸ್ಥಳದಲ್ಲಿ ಬಹಳ ದಿವಸ ತಾವು ಯಾತಕ್ಕೆ ಇರಬೇಕು? ಹೋದ ಕೆಲಸವನ್ನು ಕ್ಷಿಪ್ರದಲ್ಲಿ ಅನುಕೂಲ ಮಾಡಿಸಿಕೊಂಡು ಸ್ಥಳಕ್ಕೆ ಸಾಗಿಬರುವಂತೆ ಮಾಡಿಸುವುದು…” ಎಂದು ಭಿನ್ನವಿಸಿಕೊಂಡಿದ್ದು ಇತಿಹಾಸದಲ್ಲಿ ದಾಖಲಾಗಿದೆ.

ಮಂಗಳೂರು ಭಾಗದ ಕ್ರೈಸ್ತರು ಬ್ರಿಟಿಷರೊಂದಿಗೆ ಕೈಜೋಡಿಸಿದ್ದನ್ನು ಟಿಪ್ಪು ಸಹಿಸಲಿಲ್ಲ. ಮುಸ್ಲಿಮರು ರಾಜ್ಯದ್ರೋಹ ಮಾಡಿದಾಗಲೂ ಟಿಪ್ಪು ವಿನಾಯಿತಿ ನೀಡಲಿಲ್ಲ. ಮಲಬಾರಿನ ನಾಯಕರುಗಳು, ಮಂಗಳೂರಿನ ಕ್ರೈಸ್ತರು, ಕೊಡವರು ಮುಂತಾದವರ ಜೊತೆ ಕ್ರೂರವಾಗಿ ವರ್ತಿಸಿದ್ದಕ್ಕೆ ರಾಜ್ಯದ್ರೋಹವೇ ಕಾರಣವಾಗಿತ್ತು. ಅದು ಅಂದಿನ ಆಡಳಿತದ ಪರಿಯಾಗಿತ್ತು ಎಂಬುದನ್ನು ಲೇಖಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

ಕೊಡಗಿನಲ್ಲಿ 70,000 ಹಿಂದೂಗಳನ್ನು ಟಿಪ್ಪು ಮತಾಂತರ ಮಾಡಿದ ಎನ್ನುತ್ತಾರೆ. ಆದರೆ ಟಿಪ್ಪು ನಿಧನದ 37 ವರ್ಷಗಳ ನಂತರದ ಜನಗಣತಿಯಲ್ಲಿ ಕೊಡಗಿನ ಜನಸಂಖ್ಯೆ 65,437 ಇರುವುದು ವಾಸ್ತವ. ಈ ಅಂಕಿಸಂಖ್ಯೆಗಳೇ ಈ ಮತಾಂತರದ ಸುಳ್ಳಿನ ಕಥೆಗೆ ಉತ್ತರ ಹೇಳುತ್ತವೆ. ಕ್ರೈಸ್ತರನ್ನು ಮತಾಂತರ ಮಾಡಲಾಯಿತು, 7,900 ದೇವಾಲಯಗಳನ್ನು ಧ್ವಂಸ ಮಾಡಲಾಯಿತು ಎಂಬುದೂ ಇಂತಹದ್ದೇ ಕಟ್ಟುಕತೆಗಳು. ಬಲವಂತದ ಮತಾಂತರ ಎಂಬುದು ಆಧಾರರಹಿತವಾಗಿದೆ ಎಂದು ಇತಿಹಾಸಕಾರರು ಪದೇಪದೇ ಹೇಳುತ್ತಿದ್ದಾರೆ.

ಟಿಪ್ಪುವಿನ ನ್ಯಾಯದಾನ ವ್ಯವಸ್ಥೆಯೂ ಮಾನವೀಯವಾಗಿತ್ತು. ತಿರುವಾಂಕೂರಿನ ನಂಬೂದಿರಿ ಜಾತಿಯ ಅರಸರು ಕೇರಳದಲ್ಲಿ ’ಮುಲಕ್ಕರ’ (ಸ್ತನ ತೆರಿಗೆ) ಎಂಬ ಅಮಾನವೀಯ ತೆರಿಗೆಯನ್ನು ಅಲ್ಲಿನ ಕೆಳವರ್ಗದ ಮಹಿಳೆಯರಿಗೆ ವಿಧಿಸುತ್ತಿದ್ದರು. ಋತುಮತಿಯಾದ ಕೆಳವರ್ಗದ ಮಹಿಳೆಯರು ಮೇಲ್ವಸ್ತ್ರ ಧರಿಸದೇ
ತಮ್ಮ ಸ್ತನಗಳು ಕಾಣುವಂತೆ ಅವರು ನಡೆದಾಡಬೇಕಿತ್ತು. ಒಂದು ವೇಳೆ ಯಾರಾದರೂ ಸ್ತನ ಮುಚ್ಚುವ ಮೇಲ್ವಸ್ತ್ರ ಧರಿಸಿದರೆ ಅದಕ್ಕಾಗಿ ತೆರಿಗೆ ಕಟ್ಟಬೇಕಾಗಿತ್ತು. ಇಂತಹ ಅಮಾನವೀಯ ಪದ್ಧತಿಯ ವಿರುದ್ಧ ಮೊಟ್ಟಮೊದಲು ಕಾನೂನು ಜಾರಿಗೆ ತಂದು ಕೆಳವರ್ಗದ ಮಹಿಳೆಯರಿಗೆ ಗೌರವ ಕೊಟ್ಟ ಅರಸ ಟಿಪ್ಪು ಸುಲ್ತಾನ್. ಭೂಮಿ ಇಲ್ಲದವರು ಭೂಮಿ ಹೊಂದಲು ಅವಕಾಶ ನೀಡಿದರು. ರೈತರ ಮೇಲಿನ ತೆರಿಗೆ ಭಾರ ಕಡಿಮೆ ಮಾಡಿದರು. ಕೃಷಿ ಪರಿಕರಗಳನ್ನು ಖರೀದಿಸಲು ಮುಂಗಡ ಹಣ ನೀಡುವ ಪದ್ಧತಿ ಶುರುಮಾಡಿದರು. ಕೆ.ಆರ್.ಎಸ್. ಅಣೆಕಟ್ಟೆಗೆ ಅಡಿಗಲ್ಲು ಹಾಕಿದರು. ಕಾರ್ಮಿಕರ ಘನತೆಯನ್ನು ಎತ್ತಿ ಹಿಡಿದರು – ಇಂತಹ ಹಲವು ಸುಧಾರಣೆಗಳತ್ತ ಗಮನ ಹರಿಸಿದ ಟಿಪ್ಪು, ಮೂವರು ಶತ್ರುಗಳನ್ನು (ಬ್ರಿಟಿಷರು, ಮರಾಠರು, ನಿಜಾಮರು) ಸದಾ ಎದುರಿಸಬೇಕಾಯಿತು ಎಂದು ಚರಿತ್ರಾಕಾರರು ಉಲ್ಲೇಖಿಸುತ್ತಾರೆ.

(ಟಿಪ್ಪು ಕುರಿತ ವಿಶೇಷ ಬರಹಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಹೆಸರಿಗೆ ಮಸಿ ಬಳಿಯಲು ಮನುವಾದಿಗಳು ಎಷ್ಟೇ ಪ್ರಯತ್ನ ಮಾಡಿದರೂ, ಸಪಲರಾಗುವುದಿಲ್ಲ. ಏಕೆಂದರೆ ಟಿಪ್ಪುವಿನ ಸಾದನೆ ಅಜರಾಮರ.

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...