Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ಸೋತು ಹೊರನಡೆದ ದಕ್ಷಿಣ ಆಫ್ರಿಕಾ - ಭಾರತ ಸೆಮಿಫೈನಲ್‌ಗೆ

ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ಸೋತು ಹೊರನಡೆದ ದಕ್ಷಿಣ ಆಫ್ರಿಕಾ – ಭಾರತ ಸೆಮಿಫೈನಲ್‌ಗೆ

- Advertisement -
- Advertisement -

ಟಿ20 ವಿಶ್ವಕಪ್ ಟೂರ್ನಿಯ ಮತ್ತೊಂದು ಅಚ್ಚರಿಯ ಬೆಳವಣಿಗೆಯಲ್ಲಿ ಬಲಿಷ್ಟ ದಕ್ಷಿಣ ಆಫ್ರಿಕಾ ತಂಡ ಸೆಮಿಫೈನಲ್ ತಲುಪದೆ ಟೂರ್ನಿಯಿಂದ ಹೊರನಡೆದಿದೆ. ಇಂದು ನಡೆದ ನೆದರ್ಲೆಂಡ್ಸ್ ವಿರುದ್ಧದ ಗೆಲ್ಲಲೇಬೇಕಾದ ಪಂದ್ಯದಲ್ಲಿ 13 ರನ್‌ಗಳ ಸೋಲಿನೊಂದಿಗೆ ನಿರಾಸೆಯಿಂದ ಟೂರ್ನಿಯಿಂದ ಹೊರಬಿದ್ದಿದೆ. ಇದರಿಂದಾಗಿ ಭಾರತ ತಂಡ ಇನ್ನೊಂದು ಪಂದ್ಯ ಉಳಿದಿರುವಂತೆಯೇ ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಇಂದು ನಡೆವ ಜಿಂಬಾಬ್ವೆ ವಿರುದ್ಧದ ಪಂದ್ಯದ ನಂತರ ಅಂಕಗಳ ಆಧಾರದಲ್ಲಿ ಭಾರತ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಅಥವಾ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆಯೋ ಎಂಬುದಷ್ಟೇ ತೀರ್ಮಾನವಾಗಬೇಕಿದೆ.

ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಅದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕಂಡು ಕೇವಲ 145 ರನ್ ಅಷ್ಟೇ ಗಳಿಸಿ ಸೋಲೊಪ್ಪಿಕೊಂಡಿತು.

ಇನ್ನೊಂದೆ ದಕ್ಷಿಣ ಆಫ್ರಿಕಾ ತಂಡ ಹೊರ ನಡೆಯುತ್ತಲೇ ಸೆಮಿಫೈನಲ್‌ನ ಇನ್ನೊಂದು ಸ್ಥಾನಕ್ಕೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ದಕ್ಷಿಣ ಆಫ್ರಿಕಾ ತಂಡ 5 ಪಂದ್ಯಗಳಿಂದ ಕೇವಲ 5 ಅಂಕ ಗಳಿಸಿದೆ. ಭಾರತ ತಂಡ 4 ಪಂದ್ಯಗಳಿಂದ 6 ಅಂಕ ಗಳಿಸಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ತಲಾ 4 ಪಂದ್ಯಗಳಿಂದ 4 ಅಂಕ ಗಳಿಸಿದ್ದು, ತಮ್ಮ ಕೊನೆಯ ಪಂದ್ಯದಲ್ಲಿ ಪರಸ್ಪರ ಸ್ಫರ್ಧಿಸುತ್ತಿವೆ.

ಸದ್ಯಕ್ಕೆ ಪಾಕ್ ಎದುರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಬಾಂಗ್ಲಾದೇಶ ತಂಡವು 14 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 92 ರನ್ ಗಳಿಸಿದೆ. ಈ ಪಂದ್ಯದಲ್ಲಿ ಗೆದ್ದವರು ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಲಿದ್ದಾರೆ. ಒಂದು ವೇಳೆ ಮಳೆ ಬಂದು ಪಂದ್ಯ ರದ್ದಾದರೂ ಸಹ 5 ಅಂಕದೊಂದಿಗೆ ಉತ್ತಮ ನೆಟ್ ರನ್ ರೇಟ್ ಹೊಂದಿರುವ ಪಾಕಿಸ್ತಾನ ತಂಡ ಸೆಮಿಫೈನಲ್ ತಲುಪಲಿದೆ.

ಕಳೆದ ವರ್ಷದ ವಿಶ್ವಕಪ್‌ನಲ್ಲಿಯೂ ಸಹ ದಕ್ಷಿಣ ಆಫ್ರಿಕಾ ತಂಡ ಸೂಪರ್ 12 ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿಯೂ ಸೆಮಿಫೈನಲ್ ತಲುಪದೆ ನಿರಾಶೆ ಅನುಭವಿಸಿತ್ತು. 5 ಪಂದ್ಯಗಳಲ್ಲಿ 4 ಗೆದ್ದರೂ ಸಹ ನೆಟ್ ರನ್ ರೇಟ್ ಕಡಿಮೆಯಿದ್ದ ಕಾರಣ ಟೂರ್ನಿಯಿಂದ ಹೊನಡೆದಿತ್ತು. ಆದರೆ ಈ ಬಾರಿ ಒಂದು ಪಂದ್ಯ ಮಳೆಗೆ ಆಹುತಿಯಾದರೆ ಪಾಕ್ ಮತ್ತು ನೆದರ್ಲೆಂಡ್ಸ್ ಎದುರು ಸೋತು ಟೂರ್ನಿಯಿಂದ ಹೊರಬಿದ್ದಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಿದ ಇಂಗ್ಲೆಂಡ್, ನ್ಯೂಜಿಲೆಂಡ್ -ಅತಿಥೇಯ ಆಸ್ಟ್ರೇಲಿಯಾಕ್ಕೆ ನಿರಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....