Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಬಾಂಗ್ಲಾ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಪಾಕ್

ಟಿ20 ವಿಶ್ವಕಪ್: ಬಾಂಗ್ಲಾ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಪಾಕ್

- Advertisement -
- Advertisement -

ಗೆಲ್ಲಲೇಬೇಕಿದ್ದ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದ ಪಾಕಿಸ್ತಾನ ತಂಡ ಅಚ್ಚರಿಯ ರೀತಿಯಲ್ಲಿ ಸೆಮಿಫೈನಲ್‌ಗೆ ಪ್ರವೇಶ ಪಡೆದಿದೆ. ಇಂದು ಮೊದಲ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡ ನೆದರ್ಲೆಂಡ್ಸ್ ವಿರುದ್ಧ ಸೋಲುಂಡಿದ್ದು ಪಾಕ್ ಸೆಮಿಫೈನಲ್ ತಲುಪಲು ಸಹಕಾರಿಯಾಯಿತು.

ಪಾಕಿಸ್ತಾನ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲೆರಡು ಪಂದ್ಯದಲ್ಲಿ ಆಘಾತ ಅನುಭವಿಸಿ ಟೂರ್ನಿಯಿಂದ ಹೊರಬೀಳುವ ಆತಂಕ ಎದುರಿಸಿತ್ತು. ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಸೋತಿದ್ದ ಅದು ಎರಡನೇ ಪಂದ್ಯದಲ್ಲಿ ಸಹ ಜಿಂಬಾಬ್ವೆ ಎದುರು 1 ರನ್‌ನಿಂದ ಸೋತು ಬಹಳ ಟೀಕೆ ಎದುರಿಸಿತ್ತು. ಆದರೆ ನಂತರ ದಕ್ಷಿಣ ಆಫ್ರಿಕಾ, ನೆದರ್ಲೆಂಡ್ಸ್ ಮತ್ತು ಬಾಂಗ್ಲಾ ಎದುರು ಸತತ ಮೂರು ಪಂದ್ಯ ಗೆದ್ದು 6 ಅಂಕಗಳೊಂದಿಗೆ ಸೆಮಿಫೈನಲ್ ತಲುಪಿದೆ.

ಇಂದು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ತಂಡ ಕೇವಲ 128 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಪಾಕಿಸ್ತಾನ ತಂಡ 5 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು. ಇಂದು ಬಾಂಗ್ಲಾದೇಶ ಗೆದ್ದಿದ್ದಲ್ಲಿ ಅದು ಸೆಮಿಫೈನಲ್ ಪ್ರವೇಶ ಪಡೆಯುತ್ತಿತ್ತು.

ಇನ್ನೊಂದೆಡೆ ಭಾರತ ತಂಡ ಇನ್ನೊಂದು ಪಂದ್ಯ ಉಳಿದಿರುವಂತೆಯೇ ಸುಲಭವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಇಂದು ನಡೆವ ಜಿಂಬಾಬ್ವೆ ವಿರುದ್ಧದ ಪಂದ್ಯದ ನಂತರ ಅಂಕಗಳ ಆಧಾರದಲ್ಲಿ ಭಾರತ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಅಥವಾ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆಯೋ ಎಂಬುದಷ್ಟೇ ತೀರ್ಮಾನವಾಗಬೇಕಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್: ನೆದರ್ಲೆಂಡ್ಸ್ ವಿರುದ್ಧ ಸೋತು ಹೊರನಡೆದ ದಕ್ಷಿಣ ಆಫ್ರಿಕಾ – ಭಾರತ ಸೆಮಿಫೈನಲ್‌ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...