Homeಕ್ರೀಡೆಕ್ರಿಕೆಟ್ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ಸ್ಮರಣೀಯ ಗೆಲುವುಗಳ ಮೂಲಕ 2022ರ ಐಸಿಸಿ ಟಿ20 ವಿಶ್ವಕಪ್‌ಗೆ ಮೆರುಗು ತಂದ ಪುಟ್ಟ ತಂಡಗಳ ಪರಿಚಯ ಇಲ್ಲಿದೆ.

- Advertisement -
- Advertisement -

2022ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಹಲವು ಅಚ್ಚರಿಗಳಿಗೆ ಸಾಕ್ಷಿಯಾಗಿದೆ. ಕೆಲ ಪಂದ್ಯಗಳು ಮಳೆಗೆ ಆಹುತಿಯಾದರೂ ಹಲವು ಪಂದ್ಯಗಳ ಫಲಿತಾಂಶಕ್ಕಾಗಿ ಕೊನೆಯ ಎಸೆತದವರೆಗೂ ಕಾಯಬೇಕಾದ ರೋಚಕತೆ ಸೃಷ್ಟಿಯಾಗಿತ್ತು. ಸದ್ಯಕ್ಕೆ ಸೂಪರ್ 12 ವರೆಗಿನ ಪಂದ್ಯಗಳು ಮುಗಿದಿದ್ದು ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ತಲುಪಿವೆ. ಆದರೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾಗಿದ್ದ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ ಮತ್ತು ಇತ್ತೀಚಿಗೆ ತಾನೇ ಏಷ್ಯಾ ಕಪ್ ಗೆದ್ದಿದ್ದ ಶ್ರೀಲಂಕಾ ತಂಡಗಳು ಅನನುಭವಿ ತಂಡಗಳ ಎದುರು ಸೋತು ಟೂರ್ನಿಯಿಂದ ಹೊರನಡೆದಿವೆ. 2 ಬಾರಿ ಚಾಂಪಿಯನ್ ಆಗಿದ್ದ ವೆಸ್ಟ್ ಇಂಡೀಸ್ ತಂಡವು ಅರ್ಹತಾ ಹಂತದಲ್ಲಿಯೇ ಸೋತು ಮುಖಭಂಗ ಅನುಭವಿಸಿತ್ತು.

ಆದರೆ ಅನನುಭವಿ ಪುಟ್ಟ ತಂಡಗಳು ಬಲಿಷ್ಠ ತಂಡಗಳನ್ನು ಮಣಿಸಿ ಸಾಧನೆಗೈದಿವೆ. ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಅದ್ಭುತ ಪ್ರದರ್ಶನ ನೀಡಿವೆ. ಇದನ್ನೇ ಸ್ಪಿರಿಟ್ ಆಫ್ ಕ್ರಿಕೆಟ್ ಎಂದು ಕರೆಯುವುದು. ಇಲ್ಲಿ ಬಲಿಷ್ಠ ತಂಡಗಳೇ ಯಾವತ್ತಿಗೂ ಗೆಲ್ಲುತ್ತಾರೆ ಎನ್ನಲಾಗುವುದಿಲ್ಲ. ಸಿಕ್ಕ ಅವಕಾಶ ಬಳಸಿಕೊಂಡ ಪುಟ್ಟ ತಂಡಗಳು ತಮ್ಮ ಪ್ರದರ್ಶನದ ಮೂಲಕ ಜಗತ್ತೆ ತಮ್ಮತ್ತ ನೋಡುವಂತೆ ಮಾಡಿವೆ. ಆ ರೀತಿಯಾಗಿ ಈ ಬಾರಿಯ ಟೂರ್ನಿಯಲ್ಲಿ ಬಲಿಷ್ಟ ತಂಡಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಪುಟ್ಟ ಆದರೆ ದಿಟ್ಟ ತಂಡಗಳ ಪರಿಚಯ ಇಲ್ಲಿದೆ.

ನೆದರ್ಲೆಂಡ್ಸ್: ಅರ್ಹತಾ ಪಂದ್ಯಗಳಲ್ಲಿ ನಮೀಬಿಯಾ ಮತ್ತು ಯುಎಇ ವಿರುದ್ಧ ಗೆದ್ದು ಸೂಪರ್ 12 ಪ್ರವೇಶಿಸಿದ ನೆದರ್ಲೆಂಡ್ ತಂಡವು ಅಲ್ಲಿ ಜಿಂಬಾಬ್ವೆ ತಂಡದ ಎದುರು ಜಯ ಕಂಡಿತ್ತು. ಅದರೆ ಅದು ಹೆಚ್ಚು ಗಮನ ಸೆಳೆದಿದ್ದು ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಟೂರ್ನಿಯಿಂದ ಹೊರಹಾಕಿದ ನಂತರ. ಭಾನುವಾರದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಗೆಲ್ಲಲೇಬೇಕಾಗಿತ್ತು. ಆದರೆ ನೆದರ್ಲೆಂಡ್ಸ್ ತಂಡದ ಶಿಸ್ತುಬದ್ಧ ಬೌಲಿಂಗ್ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ 13 ರನ್‌ಗಳ ಸೋಲೊಪ್ಪಿಕೊಂಡಿತು. ಆ ಮೂಲಕ ಮೊದಲ ಬಾರಿಗೆ ನೆದರ್ಲೆಂಡ್ಸ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ದಾಖಲೆ ನಿರ್ಮಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲೆಂಡ್ಸ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಅದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕಂಡು ಕೇವಲ 145 ರನ್ ಅಷ್ಟೇ ಗಳಿಸಿತು. ನೆದರ್ಲೆಂಡ್ಸ್ ತಂಡವು ಸೂಪರ್ 12 ಹಂತದ 5 ಪಂದ್ಯಗಳಲ್ಲಿ 2 ಗೆಲುವಿನೊಂದಿಗೆ ಮುಂದಿನ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಪಡೆಯುವ ಸಂಭವವಿದೆ.

ಐರ್ಲೆಂಡ್: ಅರ್ಹತಾ ಪಂದ್ಯದಲ್ಲಿ ಸ್ಕಾಟ್ಲೆಂಡ್ ನೀಡಿದ 176 ರನ್‌ಗಳ ಗುರಿಯನ್ನು 4 ವಿಕೆಟ್ ಕಳೆದುಕೊಂಡು ಬೆನ್ನತ್ತಿದ್ದ ಐರ್ಲೆಂಡ್ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿಯೂ ಸಹ ಕೇವಲ 1 ವಿಕೆಟ್ ಕಳೆದುಕೊಂಡು 146 ರನ್‌ಗಳ ಗುರಿ ಬೆನ್ನತ್ತಿತ್ತು. ಆ ಮೂಲಕ ವೆಸ್ಟ್ ಇಂಡೀಸ್ ತಂಡ ಅರ್ಹತೆ ಪಡೆಯದೆ ಟೂರ್ನಿಯಿಂದ ಹೊರಬೀಳಲು ಕಾರಣವಾಗಿತ್ತು ಐರ್ಲೆಂಡ್.

ಸೂಪರ್ 12 ಪಂದ್ಯದಲ್ಲಿ ಐರ್ಲೆಂಡ್ ತಂಡ ಕ್ರಿಕೆಟ್ ಜನಕ ಎಂದು ಕರೆಯಲ್ಪಡುವ ಇಂಗ್ಲೆಂಡ್ ತಂಡವನ್ನು ಮಣಿಸಿತ್ತು. ಡಕ್ವರ್ತ್ ಲೂಯಿಸ್ ನಿಯಮದಿಂದ ಐರ್ಲೆಂಡ್ ತಂಡವು 5 ರನ್‌ಗಳ ಜಯಗಳಿಸಿ ಸಂಭ್ರಮಿಸಿತ್ತು. ಐರ್ಲೆಂಡ್ ನೀಡಿದ 157 ರನ್ ಬೆನ್ನತ್ತಿದ್ದ ಇಂಗ್ಲೆಂಡ್ ತಂಡ 14.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 105 ರನ್ ಗಳಿಸಿದಾಗ ಭಾರೀ ಮಳೆ ಸುರಿದ ಪರಿಣಾಮ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಐರ್ಲೆಂಡ್ ವಿಜಯಿ ಎಂದು ಘೋಷಿಸಲಾಯಿತು. ನಿಯಮದ ಪ್ರಕಾರ ಇಂಗ್ಲೆಂಡ್ 05 ರನ್ ಹಿಂದಿತ್ತು.

ನಮೀಬಿಯಾ: ಶ್ರೀಲಂಕಾ ತಂಡ ಇತ್ತೀಚಿಗಷ್ಟೇ ಏಷ್ಯಾ ಕಪ್ ಗೆದ್ದು ಬೀಗಿತ್ತು. ಆದರೆ ಅದದನ್ನು ಟಿ20 ವಿಶ್ವಕಪ್‌ನ ಮೊದಲ ಅರ್ಹತಾ ಪಂದ್ಯದಲ್ಲಿಯೇ ನಮೀಬಿಯಾ ತಂಡ ಭಾರೀ ಅಂತರದಿಂದ ಸೋಲಿಸಿಬಿಟ್ಟಿತ್ತು!. 20 ಓವರ್‌ಗಳಲ್ಲಿ 163 ರನ್ ಗಳಿಸಿದ್ದ ನಮೀಬಿಯಾದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಶ್ರೀಲಂಕಾ ಕುಸಿದಿಬಿತ್ತು. ಕೇವಲ 108 ರನ್‌ ಗಳಿಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡು 55 ರನ್‌ಗಳ ಸೋಲು ಅನುಭವಿಸಿತು. ಆದರೆ ಆನಂತರದ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ನಮೀಬಿಯಾ ಸೂಪರ್ 12 ಪ್ರವೇಶಿಸಲು ಸಾಧ್ಯವಾಗಲಿಲ್ಲ.

ಜಿಂಬಾಬ್ವೆ: ಅರ್ಹತಾ ಸುತ್ತಿನಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ಎದುರು ಗೆದ್ದು ಸೂಪರ್ 12 ಪ್ರವೇಶಿಸಿದ್ದ ಜಿಂಬಾಬ್ವೆ ತಂಡವು ಅಲ್ಲಿ ಪಾಕಿಸ್ತಾನ ತಂಡವನ್ನು 1 ರನ್‌ನಿಂದ ಸೋಲಿಸಿ ಅಚ್ಚರಿ ಉಂಟು ಮಾಡಿತ್ತು. ಈಗಾಗಲೇ ಮೊದಲ ಪಂದ್ಯದಲ್ಲಿ ಭಾರತದ ಎದುರು ಸೋತು ನಿರಾಶೆ ಅನುಭವಿಸಿದ್ದ ಪಾಕ್‌ಗೆ ಜಿಂಬಾಬ್ವೆ ನೀಡಿದ ಆಘಾತ ಸಾಮಾನ್ಯವಾದುದ್ದಲ್ಲ. ಅದು ಸೆಮಿಫೈನಲ್ ಪ್ರವೇಶಿಸದೆ ಟೂರ್ನಿಯಿಂದ ಹೋರಬೀಳುವ ಆತಂಕ ಎದುರಿಸುತ್ತಿತ್ತು. ಆದರೆ ಇನ್ನೊಂದೆಡೆ ನೆದರ್ಲೆಂಡ್ಸ್ ತಂಡವು ದಕ್ಷಿಣ ಆಫ್ರಿಕಾವನ್ನು ಮಣಿಸಿದ ಕಾರಣ ಪಾಕಿಸ್ತಾನ ಕೊನೆಗೂ ಸೆಮಿಫೈನಲ್ ಪ್ರವೇಶಿಸಿದೆ.

ಸ್ಕಾಟ್ಲೆಂಡ್: ಸ್ಕಾಟ್ಲೆಂಡ್ ತಂಡವು ಸೂಪರ್ 12 ಪ್ರವೇಶಿಸಲು ಸಾಧ್ಯವಾಗದಿದ್ದರೂ ಅದು ಅರ್ಹತಾ ಸುತ್ತಿನಲ್ಲಿ ಬಲಿಷ್ಟ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಅದು ಸಹ ಸೂಪರ್ 12 ಪ್ರವೇಶಿಸದಂತೆ ತಡೆದಿತ್ತು.

ಆಫ್ಘಾನಿಸ್ತಾನ: ಹಿಂದಿನ ವಿಶ್ವಕಪ್‌ನಲ್ಲಿನ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ಆಫ್ಘಾನಿಸ್ತಾನ ತಂಡವು ಸೂಪರ್ 12 ಹಂತಕ್ಕೆ ನೇರ ಪ್ರವೇಶ ಪಡೆದಿತ್ತು. ಆದರೆ ಮಳೆಯಿಂದಾಗಿ ಅದರ 2 ಪಂದ್ಯಗಳು ರದ್ದಾದವು. ಆದರೂ ಅದು ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗೆಲುವಿನ ಸನಿಹ ತಲುಪಿತು. ಆಸ್ಟ್ರೇಲಿಯಾ ನೀಡಿದ 169 ರನ್‌ಗಳ ಗುರಿ ಬೆನ್ನತ್ತಿದ್ದ ಆಫ್ಘಾನಿಸ್ತಾನ ತಂಡವು 164 ರನ್ ಗಳಿಸಿ ಕೇವಲ 4 ರನ್ ಅಂತರದಿಂದ ಸೋಲು ಕಂಡಿತು. ಹಾಗಾಗಿ ಗೆದ್ದರೂ ನೆಟ್‌ ರನ್‌ ರೇಟ್ ಹೆಚ್ಚು ಮಾಡಿಕೊಳ್ಳಲು ಸಾಧ್ಯವಾಗದ ಆಸ್ಟ್ರೇಲಿಯಾ ತಂಡವು ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್‌ನಷ್ಟೆ (07) ಅಂಕಗಳನ್ನು ಹೊಂದಿದ್ದರೂ ಸೆಮಿಫೈನಲ್ ಪ್ರವೇಶಿಸದೆ ಟೂರ್ನಿಯಿಂದ ಹೊರಬೀಳಬೇಕಾಯಿತು.

ಇದನ್ನೂ ಓದಿ: ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮತ್ತೆ ಭಾರತ-ಪಾಕ್ ಮುಖಾಮುಖಿಯಾಗಬಹುದು: ಮರುಕಳಿಸುವುದೇ 2007ರ ಫೈನಲ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...