Homeಮುಖಪುಟ‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

‘ಗೆಟೌಟ್‌‌’: ಪತ್ರಿಕಾಗೋಷ್ಠಿಯಿಂದ ಕೈರಲಿ, ಮೀಡಿಯಾ ಒನ್‌ ಪತ್ರಕರ್ತರನ್ನು ಹೊರಹಾಕಿದ ಕೇರಳ ರಾಜ್ಯಪಾಲ

- Advertisement -
- Advertisement -

ಕೇರಳದಲ್ಲಿ ನಡೆಯುತ್ತಿರುವ ಸರ್ಕಾರ ವರ್ಸಸ್‌ ರಾಜ್ಯಪಾಲರ ಸಂಘರ್ಷದ ಸರಣಿ ಮುಂದುವರೆದಿದ್ದು, ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಎರಡು ಮಲಯಾಳಂ ಸುದ್ದಿ ವಾಹಿನಿಗಳ ಪತ್ರಕರ್ತರು ಹೊರ ಹೋಗುವವರೆಗೂ ಗೋಷ್ಠಿಯಲ್ಲಿ ಮಾತನಾಡಲು ನಿರಾಕರಿಸಿದ ಘಟನೆ ನಡೆದಿದೆ.

ಆರಿಫ್ ಖಾನ್ ಅವರು ಇಂದು ಕೊಚ್ಚಿಯ ಎರ್ನಾಕುಲಂ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಅವರು ಕೈರಲಿ ಟಿವಿ ಮತ್ತು ಮೀಡಿಯಾ ಒನ್ ಚಾನೆಲ್ ಅನ್ನು ಹೊರಹೋಗುವಂತೆ ಆಕ್ರೋಶಭರಿತರಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೈರಲಿ ಟಿವಿ ಸಿಪಿಐಎಂ ಬೆಂಬಲಿತವಾಗಿದ್ದು, ಮೀಡಿಯಾ ಒನ್‌ ಮಾಧ್ಯಮಮ್ ಬ್ರಾಡ್‌ಕಾಸ್ಟಿಂಗ್ ಲಿಮಿಟೆಡ್‌ನಿಂದ ನಿರ್ವಹಿಸಲ್ಪಡುವ ಚಾನೆಲ್ ಆಗಿದೆ. ಈ ವರ್ಷದ ಆರಂಭದಲ್ಲಿ “ಭದ್ರತಾ ಕಾಳಜಿ” ಆರೋಪದಲ್ಲಿ ಒಕ್ಕೂಟ ಸರ್ಕಾರವು ಮೀಡಿಯಾ ಒನ್‌ ಪ್ರಸಾರ ಮಾಡುವುದನ್ನು ನಿರ್ಬಂಧಿಸಿತ್ತು.

ಇದನ್ನೂ ಓದಿ: ತಮಿಳುನಾಡು: ರಾಜ್ಯಪಾಲರನ್ನು ಪದಚ್ಯುತಗೊಳಿಸುವ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಎಲ್ಲ ಪಕ್ಷಗಳಿಗೆ ಮನವಿ ಮಾಡಿದ ಡಿಎಂಕೆ

ಮೈಕ್ ಮತ್ತು ಕ್ಯಾಮೆರಾಗಳನ್ನು ಹಿಡಿದಿದ್ದ ಪತ್ರಕರ್ತರ ಮಧ್ಯೆ ನಿಂತಿದ್ದ ಆರೀ‌ಫ್‌ ಖಾನ್, “ನಾನು ಕೈರಾಲಿ ಮತ್ತು ಮೀಡಿಯಾ ಒನ್‌ ನೊಂದಿಗೆ ಮಾತನಾಡುವುದಿಲ್ಲ … ಒಂದು ವೇಳೆ ಇದ್ದರೆ ನಾನು ಹೊರನಡೆಯುತ್ತೇನೆ. ಇಲ್ಲಿ ಕೈರಳಿ ಮತ್ತು ಮೀಡಿಯಾ ಒನ್‌ ಇಲ್ಲ ಎಂದು ನಾನು ಭಾವಿಸುತ್ತೇನೆ. ಈ ಚಾನೆಲ್‌ಗಳ ಯಾವುದಾದರೂ ಇಲ್ಲಿ ಇದ್ದಾರೆಯೆ?” ಎಂದು ಅವರು ಪ್ರಶ್ನಿಸಿದ್ದಾರೆ. ಎಂದು ಮೀಡಿಯಾ ಒನ್ ಇದೆಯೇ?”

ಈ ವೇಳೆ ಅಲ್ಲಿದ್ದ ಚಾನೆಲ್‌ನ ಪತ್ರಕರ್ತರೊಬ್ಬರು,“ಹೌದು, ಸರ್” ಎಂದು ಹೇಳಿದ್ದಾರೆ. ಇದಕ್ಕೆ ಉತ್ತರಿಸಿದ ಆರಿಫ್‌ ಖಾನ್‌, “ನಾನು ನಿಮ್ಮೊಂದಿಗೆ ಮಾತನಾಡಲು ಬಯಸುವುದಿಲ್ಲ. ಗೆಟ್‌ ಔಟ್‌, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಆಕ್ರೋಶ ಭರಿತರಾಗಿ ಹೇಳಿದ್ದಾರೆ.

ಇದನ್ನೂ ಓದಿ: ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

“ನಾನು ಕೈರಾಲಿಯೊಂದಿಗೆ ಮಾತನಾಡುವುದಿಲ್ಲ. ದಯವಿಟ್ಟು ಹೊರಟುಹೋಗಿ. ನಾನು ಮೀಡಿಯಾ ಒನ್ ಜೊತೆ ಮಾತನಾಡುವುದಿಲ್ಲ…ಈ ಬಗ್ಗೆ ನಾನು ಸ್ಪಷ್ಟವಾಗಿ ಹೇಳಿದ್ದೇನೆ. ಕಳೆದ 25 ದಿನಗಳಿಂದ ನಾನು ಪದೇ ಪದೇ ಇದನ್ನು ಹೇಳುತ್ತಿದ್ದೇನೆ. ನಾನು ದೂರ ಹೋಗಬೇಕೆಂದು ನೀವು ಬಯಸಿದರೆ, ನಾನು ಹೋಗುತ್ತೇನೆ. ನಾನು ಈ ಬಗ್ಗೆ ವಾದ ಮಾಡಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಇಷ್ಟೆ ಅಲ್ಲದೆ, ಕಾಂಗ್ರೆಸ್ ಬೆಂಬಲಿತ ಟಿವಿ ಚಾನೆಲ್‌ ‘ಜೈಹಿಂದ್‌’ ಸುದ್ದಿ ವಾಹಿನಿಗೆ ಕೂಡಾ ಪತ್ರಿಕಾಗೋಷ್ಠಿಯಲ್ಲಿ ಪ್ರವೇಶವನ್ನು ನಿರಾಕರಿಸಲಾಗಿದೆ ಎಂದು ಕೇರಳದ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್‌ ಹೇಳಿದ್ದಾರೆ.

ಕಳೆದ ತಿಂಗಳು, ಅವರು ನಾಲ್ಕು ಸುದ್ದಿ ವಾಹಿನಿಗಳಾದ ಕೈರಾಲಿ, ಮೀಡಿಯಾ ಒನ್, ಜೈ ಹಿಂದ್ ಮತ್ತು ರಿಪೋರ್ಟರ್ ಟಿವಿಯನ್ನು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದ್ದರು.

2019ರ ಕಾರ್ಯಕ್ರಮವೊಂದರಲ್ಲಿ ಅವಮಾನಿಸಿದ್ದಾಗಿ ಆರೋಪಿಸಿರುವುದರಿಂದ ಹಿಡಿದು ಉಪಕುಲಪತಿಗಳ ನೇಮಕದ ವರೆಗೆ ಹಲವಾರು ಘಟನೆಗಳ ಕುರಿತು ಆರಿಫ್‌ ಖಾನ್ ಅವರು ಪ್ರಸ್ತುತ ರಾಜ್ಯದಲ್ಲಿ ಪಿಣರಾಯಿ ವಿಜಯನ್ ಸರ್ಕಾರದೊಂದಿಗೆ ಸಂಘರ್ಷದಲ್ಲಿದ್ದಾರೆ. ಕೇರಳ ಸರ್ಕಾರವು ಆರಿಫ್‌ ಖಾನ್ ಅವರು ಆರ್‌ಎಸ್‌ಎಸ್ ಕೈಯಲ್ಲಿರುವ ಸಾಧನ ಎಂದು ಆರೋಪಿಸಿದೆ.

ಇದನ್ನೂ ಓದಿ: ಕೇರಳದ ಎಡರಂಗ ಸರ್ಕಾರ ಉರುಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸುತ್ತಿದೆ: ಕೊಡಿಯೇರಿ ಬಾಲಕೃಷ್ಣನ್ ಆರೋಪ

ಈ ನಡುವೆ, ರಾಜ್ಯಪಾಲರ ವರ್ತನೆಯನ್ನು ‘ನಿರಂಕುಶ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟವು, ಅವರ ವಿರುದ್ಧ ನಾಳೆ ರಾಜಭವನಕ್ಕೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...