Homeಮುಖಪುಟ10% ಮೀಸಲಾತಿಗೆ ಒಪ್ಪಿದ ಸುಪ್ರಿಂಕೋರ್ಟ್‌: ಟ್ವಿಟರ್‌‌ನಲ್ಲಿ ‘ಬ್ಯಾನ್‌ ಇಡಬ್ಲ್ಯೂಎಸ್‌’ ಟ್ರೆಂಡ್

10% ಮೀಸಲಾತಿಗೆ ಒಪ್ಪಿದ ಸುಪ್ರಿಂಕೋರ್ಟ್‌: ಟ್ವಿಟರ್‌‌ನಲ್ಲಿ ‘ಬ್ಯಾನ್‌ ಇಡಬ್ಲ್ಯೂಎಸ್‌’ ಟ್ರೆಂಡ್

- Advertisement -
- Advertisement -

ಆರ್ಥಿಕ ದುರ್ಬಲ ವರ್ಗ (ಇಡಬ್ಲ್ಯೂಎಸ್) ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡಿದ್ದ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸೋಮವಾರ ಎತ್ತಿ ಹಿಡಿದಿದೆ. ಆದರೆ ಸುಪ್ರೀಂಕೋರ್ಟಿನ ಈ ತೀರ್ಪಿನ ವಿರುದ್ಧ ಜಾಲತಾಣಗಳಲ್ಲಿ ಹಲವರು ಧ್ವನಿ ಎತ್ತಿದ್ದು, ‘ಬ್ಯಾನ್‌_ಇಡಬ್ಲ್ಯೂಎಸ್‌’ ಎಂಬ ಹ್ಯಾಶ್‌ ಟ್ಯಾಗ್‌ ಬಳಸಿ ಟ್ವೀಟ್‌ ಮಾಡುತ್ತಿದ್ದಾರೆ.

ಸೋಮವಾರ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್‌, “ಇಡಬ್ಲ್ಯೂಎಸ್‌‌ 10% ಮೀಸಲಾತಿ ತಾರತಮ್ಯವಲ್ಲ ಮತ್ತು ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. 50% ಸೀಲಿಂಗ್ ಮಿತಿಯ ನಿಯಮವನ್ನು ಉಲ್ಲಂಘಿಸುವುದಿಲ್ಲ” ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮನೋಜ್ ಥಂಡಿ ಎಂಬವರು,“ಸಾಮಾಜಿಕವಾಗಿ ಹಿಂದುಳಿದವರಿಗೆ ಸಂವಿಧಾನದಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ, ಆರ್ಥಿಕ ದುರ್ಬಲ ವರ್ಗದ ಮೀಸಲಾತಿಯು ಸಾಂವಿಧಾನಿಕ ರಚನೆಗೆ ಧಕ್ಕೆ ತರುತ್ತದೆ. ಇದು ಅಸಾಂವಿಧಾನಿಕ” ಎಂದು ಮನೋಜ್ ಥಂಡಿ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: EWS: ಸಾಮಾಜಿಕ ನ್ಯಾಯಕ್ಕಾಗಿ ನಡೆದ ಶತಮಾನದ ಹೋರಾಟಕ್ಕೆ ಹಿನ್ನಡೆ: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

“ಮೇಲ್ಜಾತಿಯ ಬಡವರನ್ನು ಯಾರೂ ದೇವಸ್ಥಾನದಿಂದ ಹೊರಗೆ ಓಡಿಸಲ್ಲ. ಬಾವಿಯಿಂದ ನೀರು ಸೇದುವುದಕ್ಕೆ ಅವರಿಗೆ ನಿರ್ಬಂಧವಿಲ್ಲ. ಅವರಿಗೆ ಪ್ರತ್ಯೇಕವಾಗಿ ಊಟ ನೀಡಲ್ಲ. ಆದರೆ, ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗದ ಜನತೆ ಈ ಅವಮಾನಗಳನ್ನು ಇಂದಿಗೂ ಅನುಭವಿಸುತ್ತಿದೆ. ಬ್ಯಾನ್‌_ಇಡಬ್ಲ್ಯೂಎಸ್‌” ಎಂದು ಪತ್ರಕರ್ತ ಹನ್ಸ್‌ರಾಜ್‌ ಮೀನಾ ಟ್ವೀಟ್‌ ಮಾಡಿದ್ದಾರೆ.

“ವಾಸ್ತವವಾಗಿ ಇಡಬ್ಲ್ಯೂಎಸ್‌ ಮೀಸಲಾತಿ ಅಸಾಂವಿಧಾನಿಕ. ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆ ಆಧಾರದ ಮೇಲೆ ಮೀಸಲಾತಿ ಕೊಡಬೇಕೇ ಹೊರತು ಆರ್ಥಿಕ ಸ್ಥಿತಿಯ ಆಧಾರದಲ್ಲಿ ಅಲ್ಲ. ಬ್ಯಾನ್‌_ಇಡಬ್ಲ್ಯೂಎಸ್‌” ಎಂದು ‘ರಾಜಸ್ಥಾನ ಟ್ರೈಬಲ್‌ ಆರ್ಮಿ’ ಟ್ವೀಟ್‌ ಮಾಡಿದೆ.

“ಇಡಬ್ಲ್ಯೂಎಸ್‌ ಮೀಸಲಾತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರನ್ನು ಹೊರಗಿಡಲಾಗಿದೆ. ಇಡಬ್ಲ್ಯೂಎಸ್‌ ಮೀಸಲಾತಿ ಕೇವಲ ಸಾಮಾನ್ಯ ವರ್ಗಕ್ಕೆ ಮಾತ್ರ. ಇದು ಸಂವಿಧಾನದ ಸಮಾನತೆ ತತ್ವಕ್ಕೆ ವಿರುದ್ಧವಾಗಿದ್ದು, ಸಂವಿಧಾನದ ಮೂಲ ರಚನೆಯನ್ನು ಉಲ್ಲಂಘಿಸುತ್ತದೆ. ಅಂಥ ತಾರತಮ್ಯ ಏಕೆ” ಎಂದು ಸ್ನೇಹ ಸೋನಾಲಿ ಎಂಬುವವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಇಡಬ್ಲ್ಯುಎಸ್ ಮೀಸಲಾತಿಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್!

ಇನ್ನೂ ಹಲವರು ಯು.ಯು. ಲಲಿತ್‌ ಅವರು ಸಿಜೆಐ ಹುದ್ದೆಯಿಂದ ಹೊರ ನಡೆಯುವ ಮುನ್ನ ಉತ್ತಮ ತೀರ್ಪು ನೀಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ಅಂಕಣದಲ್ಲಿ scst ಮತ್ತು obc ಸಮುದಾಯಗಳ ಮೀಸಲಾತಿ ವಿರೋದವಾಗಿ ಬರೆಯುವವರು ಒಂದೋ ಸಂವಿಧಾನ ವಿರೋಧಿಗಳು ಇಲ್ಲವೇ ಮನು ಶಾಸನದಲ್ಲಿದ್ದoತೆ ,ದಲಿತರು ಹಿಂದುಳಿದ ಸಮುದಾಯಗಳು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಆರ್ಥಿಕವಾಗಿ ಸಾವಿರಾರು ವರ್ಷಗಳಿಂದ ಹೇಗೆ ಶೋಚನೀಯ ವಾಗಿದ್ದರು ಅದೇ ಸ್ಥಿತಿಯಲ್ಲಿ ಮುಂದುವರೆಯಲು ಆಶಿಸುವ ಮನೋವಿಕಾರಿ ಜಾತಿವಾದಿ ಕ್ರಿಮಿಗಳಷ್ಟೇ.

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....