Homeಮುಖಪುಟನೋಟು ರದ್ದತಿಯ ಮಹಾ ವೈಫಲ್ಯವನ್ನು ಪ್ರಧಾನಿ ಮೋದಿ ಇನ್ನೂ ಒಪ್ಪಿಕೊಂಡಿಲ್ಲ: ಖರ್ಗೆ

ನೋಟು ರದ್ದತಿಯ ಮಹಾ ವೈಫಲ್ಯವನ್ನು ಪ್ರಧಾನಿ ಮೋದಿ ಇನ್ನೂ ಒಪ್ಪಿಕೊಂಡಿಲ್ಲ: ಖರ್ಗೆ

- Advertisement -
- Advertisement -

2016 ರ ನೋಟು ಅಮಾನ್ಯೀಕರಣದ ಕ್ರಮದ ಬಗ್ಗೆ ಸೋಮವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದು, “ಆರ್ಥಿಕತೆಯ ಪತನ”ಕ್ಕೆ ಕಾರಣವಾದ ಈ “ಮಹಾ ವೈಫಲ್ಯ”ವನ್ನು ಪ್ರಧಾನಿ ಇನ್ನೂ ಒಪ್ಪಿಕೊಂಡಿಲ್ಲ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ನೋಟು ಅಮಾನ್ಯೀಕರಣದ ಆರನೇ ವರ್ಷಾಚರಣೆಗೆ ಒಂದು ದಿನ ಮುಂಚಿತವಾಗಿ ಖರ್ಗೆಯವರು ಹೇಳಿಕೆ ನೀಡಿದ್ದಾರೆ. ಇದೇ ವೇಳೆ ಅಕ್ಟೋಬರ್ 21 ರ ಹೊತ್ತಿಗೆ ಸಾರ್ವಜನಿಕರ ಬಳಿಯಿರುವ ಕರೆನ್ಸಿ ಹೊಸ ದಾಖಲೆಯ 30.88 ಲಕ್ಷ ಕೋಟಿ ರೂ.ಗೆ ಜಿಗಿದಿದೆ ಎಂದು ಮಾಧ್ಯಮ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೋಟು ಅಮಾನ್ಯೀಕರಣವು ದೇಶವನ್ನು ಕಪ್ಪುಹಣದಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿತ್ತು. ಆದರೆ ಅದು ವ್ಯವಹಾರಗಳನ್ನು ಮತ್ತು ಉದ್ಯೋಗಗಳನ್ನು ಹಾಳುಮಾಡಿತು. ‘ಮಾಸ್ಟರ್‌ಸ್ಟ್ರೋಕ್’ ನಡೆದು 6 ವರ್ಷಗಳ ನಂತರ ಸಾರ್ವಜನಿಕವಾಗಿ ಲಭ್ಯವಿರುವ ನಗದು 2016 ಕ್ಕಿಂತ 72% ಹೆಚ್ಚಾಗಿದೆ” ಎಂದು ಖರ್ಗೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

“ಆರ್ಥಿಕ ಕುಸಿತಕ್ಕೆ ಕಾರಣವಾದ ಈ ಮಹಾ ವೈಫಲ್ಯವನ್ನು ಪ್ರಧಾನಿ ಇನ್ನೂ ಒಪ್ಪಿಕೊಂಡಿಲ್ಲ” ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕಪ್ಪುಹಣ ಬರಲಿಲ್ಲ, ಬಡತನ ಮಾತ್ರ ಬಂದಿದೆ. ಆರ್ಥಿಕತೆ ನಗದು ರಹಿತವಾಗಲಿಲ್ಲ, ದುರ್ಬಲಗೊಂಡಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. “ನೋಟು ಅಮಾನ್ಯೀಕರಣದಲ್ಲಿ, ರಾಜನು 50 ದಿನಗಳ ಬಗ್ಗೆ ಮಾತನಾಡುವ ಮೂಲಕ ಆರ್ಥಿಕತೆಯ ‘ಡೆಮೊ-ಲಿಷನ್’ ಮಾಡಿದರು” ಎಂದು ಅವರು ಹೇಳಿದ್ದಾರೆ.

ಆರ್‌ಬಿಐ ಶುಕ್ರವಾರ ಬಿಡುಗಡೆ ಮಾಡಿದ ಹಣದ ಪೂರೈಕೆಯ ಪಾಕ್ಷಿಕ ಅಂಕಿಅಂಶಗಳ ಪ್ರಕಾರ, ಅಕ್ಟೋಬರ್ 21 ರ ಹೊತ್ತಿಗೆ ಸಾರ್ವಜನಿಕರ ಬಳಿಯಿರುವ ಕರೆನ್ಸಿ 30.88 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. 2016ರ ನವೆಂಬರ್ 4ರಂದು ರಿಸರ್ವ್ ಬ್ಯಾಂಕ್‌ 17.7 ಲಕ್ಷ ಕೋಟಿ ರೂ.ಗಳ ಕರೆನ್ಸಿಯನ್ನು ಚಲಾವಣೆಗೆ ತಂದಿತ್ತು.

ಇದನ್ನೂ ಓದಿ: ನೋಟು ಅಮಾನ್ಯೀಕರಣದ ಸಂಭ್ರಮ ಸಮಾಧಿಯ ಮೇಲೆ ಕೇಕ್ ಕತ್ತರಿಸಿದಂತೆ- ಶಿವಸೇನೆ

2016ರ ನವೆಂಬರ್ 8 ರಂದು, ಆರ್ಥಿಕತೆಯಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣವನ್ನು ಕಡಿಮೆ ಮಾಡುವ ಅಂತಿಮ ಗುರಿಯೊಂದಿಗೆ 500 ಮತ್ತು 1,000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...