Homeಮುಖಪುಟಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ. ಚಂದ್ರಚೂಡ್

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ. ಚಂದ್ರಚೂಡ್

- Advertisement -
- Advertisement -

ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರಿಂದ ಬುಧವಾರ ಅಧಿಕಾರವನ್ನು ವಹಿಸಿಕೊಂಡರು.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರಿಗೆ ಪ್ರಮಾಣ ವಚನ ಬೋಧಿಸಿದರು. 74 ದಿನಗಳ ಕಾಲ ಸೇವೆ ಸಲ್ಲಿಸಿದ ಲಲಿತ್ ಅವರು ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯಾಗಿ ಅಕ್ಟೋಬರ್ 11 ರಂದು ಶಿಫಾರಸು ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಕಾನೂನು ಸಚಿವ ಕಿರಣ್ ರಿಜಿಜು ಅವರು ಚಂದ್ರಚೂಡ್‌ ಅವರ ನೇಮಕವನ್ನು ಅಕ್ಟೋಬರ್ 17 ರಂದು ಪ್ರಕಟಿಸಿದ್ದರು. ಈ ನಡುವೆ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಬಾರದು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನವೆಂಬರ್ 2 ರಂದು ಸುಪ್ರೀಂಕೋರ್ಟ್ ವಜಾ ಮಾಡಿತ್ತು.

ಇದನ್ನೂ ಓದಿ: ಬಾಬರಿ ತೀರ್ಪಿತ್ತ ದಿನ ಇತರ ನ್ಯಾಯಮೂರ್ತಿ‌ಗಳನ್ನು ಡಿನ್ನರ್‌ಗೆ ಕರೆದೊಯ್ದು, ಉತ್ತಮ ವೈನ್‌ ಕೊಡಿಸಿದ್ದೆ: ನಿವೃತ್ತ ಸಿಜೆಐ ರಂಜನ್ ಗೊಗೊಯ್

ಚಂದ್ರಚೂಡ್ ಅವರ ಅಧಿಕಾರಾವಧಿಯು ಎರಡು ವರ್ಷಗಳ ಕಾಲ ಇರಲಿದ್ದು, ನವೆಂಬರ್ 10, 2024 ರವರೆಗೆ ಅವರು ಅಧಿಕಾರದಲ್ಲಿ ಇರುತ್ತಾರೆ.

ಎರಡೂವರೆ ವರ್ಷಗಳ ಕಾಲ ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ ನಂತರ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸ ದಿನ: ರಾಮ್‌ ಕೆ ನಾಮ್ | ರಾಮನ ಹೆಸರಿನಲ್ಲಿ | In the name of god

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ವಿ. ಚಂದ್ರಚೂಡ್ ಅವರ ಪುತ್ರರಾಗಿರುವ ಡಿ.ವೈ. ಚಂದ್ರಚೂಡ್ ಅವರನ್ನು ಜೂನ್ 1998 ರಲ್ಲಿ ಬಾಂಬೆ ಹೈಕೋರ್ಟ್‌ನಿಂದ ಹಿರಿಯ ವಕೀಲರಾಗಿ ನೇಮಿಸಲಾಯಿತು. 2000ದ ಮಾರ್ಚ್ ತಿಂಗಳಲ್ಲಿ ಅವರು ಹೈಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡರು.

ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿದ್ದ ಅವಧಿಯಲ್ಲಿ, ಚಂದ್ರಚೂಡ್ ಅವರು ಖಾಸಗಿತನವನ್ನು ಮೂಲಭೂತ ಹಕ್ಕು ಎಂದು ಘೋಷಿಸುವುದು ಸೇರಿದಂತೆ ಹಲವು ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ.

ವಯಸ್ಕರ ನಡುವಿನ ಒಪ್ಪಿತ ಸಲಿಂಗಕಾಮ ಚಟುವಟಿಕೆಯು ಅಪರಾಧವಲ್ಲ ಎಂದು ಸರ್ವಾನುಮತದಿಂದ ತೀರ್ಪು ನೀಡಿದ್ದ ಐದು ನ್ಯಾಯಾಧೀಶರ ಪೀಠದಲ್ಲಿ ಚಂದ್ರಚೂಡ್‌ ಕೂಡಾ ಒಬ್ಬರಾಗಿದ್ದರು. ಈ ತೀರ್ಪಿನ ಮೂಲಕ, ಶಾಸಕಾಂಗ ಮಾತ್ರ ಕಾನೂನುಗಳನ್ನು ಬದಲಾಯಿಸಬಹುದು ಎಂದು ಹೇಳಿದ ನ್ಯಾಯಾಲಯವು 2013 ರಿಂದ ಇದ್ದ ತನ್ನದೇ ಆದೇಶವನ್ನು ತಿರಸ್ಕರಿಸಿತು.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

2019ರ ನವೆಂಬರ್‌ನಲ್ಲಿ, ಬಾಬರಿ ಮಸೀದಿ ದ್ವಂಸ ಪ್ರಕರಣದಲ್ಲಿ ಮಸೀದಿ ಇದ್ದ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಿಸಲು ಟ್ರಸ್ಟ್‌ಗೆ ಹಸ್ತಾಂತರಿಸಬೇಕೆಂದು ಸರ್ವಾನುಮತದಿಂದ ನಿರ್ಧರಿಸಿದ ಐವರು ನ್ಯಾಯಾಧೀಶರಲ್ಲಿ ಚಂದ್ರಚೂಡ್ ಕೂಡ ಒಬ್ಬರು. ಮಸೀದಿ ನಿರ್ಮಾಣಕ್ಕಾಗಿ ಮುಸ್ಲಿಮರಿಗೆ ಅಯೋಧ್ಯೆಯಲ್ಲಿ ಪ್ರತ್ಯೇಕ ಐದು ಎಕರೆ ಜಾಗವನ್ನು ನೀಡಬೇಕು ಎಂದು ಪೀಠವು ತೀರ್ಪು ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...