Homeಕ್ರೀಡೆಕ್ರಿಕೆಟ್ಇಂದು ಇಂಗ್ಲೆಂಡ್ ಎದುರು ಸೆಮಿಫೈನಲ್: ಭಾರತದ ಗೆಲುವಿಗೆ ಪಾಕ್ ಅಭಿಮಾನಿಗಳ ಹಾರೈಕೆ

ಇಂದು ಇಂಗ್ಲೆಂಡ್ ಎದುರು ಸೆಮಿಫೈನಲ್: ಭಾರತದ ಗೆಲುವಿಗೆ ಪಾಕ್ ಅಭಿಮಾನಿಗಳ ಹಾರೈಕೆ

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿಫೈನಲ್ ಇಂದು ನಡೆಯುತ್ತಿದ್ದು ಭಾರತ ಮತ್ತು ಇಂಗ್ಲೆಂಡ್ ಕಣಕ್ಕಿಳಿಯುತ್ತಿವೆ. ಈಗಾಗಲೇ ಪಾಕಿಸ್ತಾನ ತಂಡವು ನ್ಯೂಜಿಲೆಂಡ್ ವಿರುದ್ಧ ಗೆದ್ದು ಫೈನಲ್ ತಲುಪಿದೆ. ಹಾಗಾಗಿ ಇಂದು ನಡೆಯುವ ಪಂದ್ಯದಲ್ಲಿ ಭಾರತ ತಂಡ ಗೆಲ್ಲಲಿ ಎಂದು ಪಾಕ್ ಅಭಿಮಾನಿಗಳು ಹಾರೈಸಿದ್ದಾರೆ. ಹಾಗೊಂದು ವೇಳೆ ಭಾರತ ಗೆದ್ದಲ್ಲಿ 2007ರ ನಂತರ ಮತ್ತೊಮ್ಮೆ ಭಾರತ-ಪಾಕ್ ಫೈನಲ್‌ನಲ್ಲಿ ಭೇಟಿಯಾಗಲಿದ್ದಾರೆ. ಆ ರೋಚಕ ಕ್ಷಣಕ್ಕಾಗಿ ಹಲವರು ಕಾದು ಕುಳಿತಿದ್ದಾರೆ. ಇಂದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ.

ಇನ್ನೊಂದೆಡೆ ಇಂಗ್ಲೆಂಡ್ ತಂಡ ಸಹ ಭಾರತದ ವಿರುದ್ಧ ಗೆದ್ದು ಫೈನಲ್ ತಲುಪುವ ಹಂಬಲದಲ್ಲಿದೆ. 2010ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಇಂಗ್ಲೆಂಡ್, 2016ರಲ್ಲಿ ವೆಸ್ಟ್ ಇಂಡೀಸ್ ಎದುರು ಫೈನಲ್‌ನಲ್ಲಿ ಮುಗ್ಗಿರಿಸಿತ್ತು.

ಇದನ್ನೂ ಓದಿ: 360 ಡಿಗ್ರಿ ಬ್ಯಾಟರ್ ಸೂರ್ಯಕುಮಾರ್ ಯಾದವ್‌: ಟಿ20ಯಲ್ಲಿ ಮತ್ತೆರೆಡು ದಾಖಲೆ

ಭಾರತ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ಈ ಮೂರು ತಂಡಗಳು ಟಿ20 ವಿಶ್ವಕಪ್‌ ಅನ್ನು ತಲಾ ಒಮ್ಮೆಮ್ಮೆ ಜಯಿಸಿವೆ. ಮೂರು ತಂಡಗಳಲ್ಲಿ ಯಾವ ತಂಡ ಎರಡನೇ ಬಾರಿ ಪ್ರಶಸ್ತಿಗೆ ಮುತ್ತಿಕ್ಕಲಿದೆ ಎಂಬುದು ಭಾನುವಾರ ತೀರ್ಮಾನವಾಗಲಿದೆ.

ಇಂದು ಭಾರತ ತಂಡ ಇಂಗ್ಲೆಂಡ್ ಎದುರು ಗೆದ್ದು ನವೆಂಬರ್ 13ರಂದು ಪಾಕಿಸ್ತಾನದ ವಿರುದ್ಧ ಸೆಣಸಲಿ ಎಂದು ಪಾಕ್ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಇದುವರೆಗೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡ 14 ಬಾರಿ ಮುಖಾಮುಖಯಾಗಿವೆ. 13 ಬಾರಿ ಭಾರತ ಗೆದ್ದರೆ ಒಮ್ಮೆ ಮಾತ್ರ ಪಾಕ್ ಜಯಕಂಡಿದೆ.

2007ರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಇವೆರೆಡು ತಂಡಗಳು ಸೆಣಸಿದ್ದವು. ಆ ಪಂದ್ಯದಲ್ಲಿ ಭಾರತ ತಂಡ 5 ರನ್‌ಗಳಿಂದ ಪಾಕ್‌ ಅನ್ನು ಮಣಿಸಿ ಚಾಂಪಿಯನ್ ಆಗಿತ್ತು.

ಭಾರತ-ಪಾಕ್ ಅಭಿಮಾಣಿಗಳ ಕ್ರಿಕೆಟ್ ಜ್ವರ ಹೇಗಿದೆ ಎಂದು ಈ ಕೆಳಗಿನ ಟ್ವೀಟ್‌ಗಳಲ್ಲಿ ನೋಡಿ.

ಇದನ್ನೂ ಓದಿ : ಟಿ20 ವಿಶ್ವಕಪ್: ಬಲಿಷ್ಟ ತಂಡಗಳನ್ನು ಮಣಿಸಿದ ಪುಟ್ಟ ಆದರೆ ದಿಟ್ಟ ತಂಡಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...