Homeರಾಷ್ಟ್ರೀಯ‘ಬಲವಂತದ ಮತಾಂತರ ರಾಷ್ಟ್ರದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ!’: ಸುಪ್ರೀಂಕೋರ್ಟ್‌

‘ಬಲವಂತದ ಮತಾಂತರ ರಾಷ್ಟ್ರದ ಭದ್ರತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ!’: ಸುಪ್ರೀಂಕೋರ್ಟ್‌

- Advertisement -
- Advertisement -

ಬಲವಂತದ ಧಾರ್ಮಿಕ ಮತಾಂತರಗಳನ್ನು ‘ಬಹಳ ಗಂಭೀರ ಸಮಸ್ಯೆ’ ಎಂದು ಕರೆದ ಸುಪ್ರೀಂಕೋರ್ಟ್, ಒಕ್ಕೂಟ ಸರ್ಕಾರಕ್ಕೆ ಸೋಮವಾರ ನೋಟಿಸ್ ಜಾರಿಗೊಳಿಸಿ, ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಳಿದೆ. ಬಲವಂತದ ಧಾರ್ಮಿಕ ಮತಾಂತರಗಳನ್ನು ನಿಯಂತ್ರಿಸಲು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಆರ್.ಶಾ ಮತ್ತು ಹಿಮಾ ಕೊಹ್ಲಿ ಅವರ ಪೀಠವು ವಿಚಾರಣೆ ನಡೆಸುತ್ತಿದೆ.

ಅಶ್ವಿನಿ ಅವರು ತನ್ನ ಅರ್ಜಿಯಲ್ಲಿ, “ಬಲವಂತವಾಗಿ ಅಥವಾ ಕೆಲವು ರೀತಿಯ ಪ್ರಚೋದನೆಯಿಂದ ಮತಾಂತರ ನಡೆಸಲಾಗುತ್ತಿದ್ದು, ದೇಶದಲ್ಲಿ ಧಾರ್ಮಿಕ ಮತಾಂತರದಿಂದ ಮುಕ್ತವಾದ ಒಂದು ಜಿಲ್ಲೆ ಇಲ್ಲ” ಎಂದು ಪ್ರತಿಪಾದಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಉಡುಗೊರೆಗಳು ಮತ್ತು ಹಣದ ಬೆದರಿಸುವ, ಬೆದರಿಕೆ ಹಾಕುವ ಮೂಲಕ, ಮೋಸಗೊಳಿಸುವ ಮೂಲಕ ಮತ್ತು ಮಾಟಮಂತ್ರ, ಮೂಢನಂಬಿಕೆ, ಪವಾಡಗಳ ಮೂಲಕ ಮತಾಂತರಗಳನ್ನು ಮಾಡಲಾಗುತ್ತಿದೆ . ಈ ಆಚರಣೆಯನ್ನು ನಿಗ್ರಹಿಸಲು ಸರ್ಕಾರಗಳು ‘ಕಟ್ಟುನಿಟ್ಟಾದ ಕ್ರಮ’ಗಳನ್ನು ತೆಗೆದುಕೊಳ್ಳಬೇಕು” ಎಂದು ಅಶ್ವಿನಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯಡಿ ರಾಜ್ಯದಲ್ಲಿ ಮೊದಲ ಪ್ರಕರಣ ದಾಖಲು: ಒಪ್ಪಿತ ಮತಾಂತರಕ್ಕೂ ಕಾಯ್ದೆ ತೊಡಕು

ಬಲವಂತದ ಮತಾಂತರದ ಬಲಿಪಶುಗಳಲ್ಲಿ ಹೆಚ್ಚಿನವರು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯದ ಜನರಾಗಿದ್ದು, ಈ ರೀತಿಯ ಮತಾಂತರವು ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕುಗಳನ್ನು ಮಾತ್ರವಲ್ಲದೆ ಜಾತ್ಯತೀತತೆಯಂತಹ ಇತರ ಸಾಂವಿಧಾನಿಕ ತತ್ವಗಳನ್ನೂ ಕೂಡಾ ಉಲ್ಲಂಘನೆ ಮಾಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸುಪ್ರೀಂಕೋರ್ಟ್‌ ಒಕ್ಕೂಟ ಸರ್ಕಾರ, ಗೃಹ ಸಚಿವಾಲಯ ಮತ್ತು ಕಾನೂನು ಸಚಿವಾಲಯದಿಂದ ಪ್ರತಿಕ್ರಿಯೆಯನ್ನು ಕೇಳಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಪ್ರಸ್ತುತ ವಿಚಾರಣೆ ವೇಳೆ, ಧಾರ್ಮಿಕ ಸ್ವಾತಂತ್ರ್ಯ ಇರಬಹುದಾದರೂ, ಬಲವಂತದ ಮತಾಂತರದ ಸ್ವಾತಂತ್ರ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ನಿಟ್ಟಿನಲ್ಲಿ ಒಕ್ಕೂಟ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ಅವರನ್ನು ಕೇಳಿದೆ. “ನಿಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸಿ, ನೀವು ಯಾವ ಕ್ರಮವನ್ನು ತೆಗೆದುಕೊಳ್ಳಲು ಪ್ರಸ್ತಾಪಿಸುತ್ತೀರಿ. ಸಂವಿಧಾನದ ಅಡಿಯಲ್ಲಿ ಮತಾಂತರವು ಕಾನೂನುಬದ್ಧವಾಗಿದೆ, ಆದರೆ ಬಲವಂತದ ಮತಾಂತರವಲ್ಲ” ಎಂದು ಕೋರ್ಟ್‌ ಹೇಳಿದೆ ಎಂದು ‘ಲೈವ್ ಲಾ’ ವರದಿಯು ಉಲ್ಲೇಖಿಸಿದೆ.

ಇದನ್ನೂ ಓದಿ: ಆಪ್ ಸಚಿವನ ನೇತೃತ್ವದಲ್ಲಿ ಬೌದ್ಧ ಧರ್ಮಕ್ಕೆ ಸಾಮೂಹಿಕ ಮತಾಂತರ: ಪ್ರತಿಜ್ಞೆ ಆಕ್ಷೇಪಿಸಿದ ಬಿಜೆಪಿ

ಮಧ್ಯಪ್ರದೇಶ ಮತ್ತು ಒರಿಸ್ಸಾದಂತಹ ರಾಜ್ಯಗಳಲ್ಲಿ ಈ ವಿಷಯದ ಬಗ್ಗೆ ವಿವಿಧ ಕಾನೂನುಗಳಿವೆ. ಜೊತೆಗೆ ಈ ರಾಜ್ಯದ ಕಾನೂನುಗಳ ಸಿಂಧುತ್ವವನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ ಎಂದು ಮೆಹ್ತಾ ನ್ಯಾಯಾಲಯಕ್ಕೆ ಹೇಳಿದ್ದಾರೆ. ಇದಲ್ಲದೆ, ಮೆಹ್ತಾ ಅವರು ಜನರು ಮತಾಂತರಗೊಂಡರೆ ಅಕ್ಕಿ ಮತ್ತು ಗೋಧಿಯಂತಹ ಸಹಾಯಗಳನ್ನು ನೀಡಿದ ನಿದರ್ಶನಗಳನ್ನು ಒದಗಿಸಿದ್ದಾರೆ.

ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯವಿದೆ ಎಂದು ಸೂಚಿಸಿದ ಪೀಠ

“ಆಪಾದಿತ ಬಲವಂತದ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದಂತೆ, ಅದು ನಿಜವೆಂದು ಕಂಡುಬಂದರೆ, ಇದು ಬಹಳ ಗಂಭೀರವಾದ ವಿಷಯವಾಗಿದೆ. ಇದು ಅಂತಿಮವಾಗಿ ರಾಷ್ಟ್ರದ ಭದ್ರತೆ ಮತ್ತು ಧಾರ್ಮಿಕ ಸ್ವಾತಂತ್ರ್ಯ ಮತ್ತು ನಾಗರಿಕರ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರಬಹುದು” ಎಂದು ಸುಪ್ರಿಂಕೋರ್ಟ್ ಹೇಳಿದೆ.

“ಆದ್ದರಿಂದ, ಒಕ್ಕೂಟ ಸರ್ಕಾರವು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಬಲವಂತವಾಗಿ, ಆಮಿಷ ಅಥವಾ ಮೋಸದ ವಿಧಾನಗಳಿಂದ ಇಂತಹ ಬಲವಂತದ ಮತಾಂತರಗಳನ್ನು ನಿಗ್ರಹಿಸಲು ಒಕ್ಕೂಟ ಮತ್ತು ಇತರ ಸರ್ಕಾರ ಯಾವ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದರ ಕುರಿತು ಪ್ರತಿವಾದವನ್ನು ಸಲ್ಲಿಸುವುದು ಉತ್ತಮ” ಎಂದು ಸುಪ್ರಿಂಕೋರ್ಟ್‌ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜನಸಂಖ್ಯೆ ಹೆಚ್ಚಳ, ಮತಾಂತರ ಕುರಿತು ಮೋಹನ್ ಭಾಗವತ್‌ ಮಾತಿನ ಮರ್ಮವೇನು? ವಾಸ್ತವವೇನು?

ಅದರಂತೆ, ನ್ಯಾಯಾಲಯವು ನವೆಂಬರ್ 22 ರೊಳಗೆ ಒಕ್ಕೂಟ ಸರ್ಕಾರದ ಪ್ರತಿ-ಅಫಿಡವಿಟ್ ಅನ್ನು ಕೋರಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 28 ರಂದು ನಡೆಯಲಿದೆ.

ಬಿಜೆಪಿ ನಾಯಕ ಅಶ್ವಿನಿ ಅವರು ದೆಹಲಿ ಹೈಕೋರ್ಟ್‌ಗೆ ಕೂಡಾ ಇದೇ ರೀತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ವರ್ಷ ಜುಲೈನಲ್ಲಿ ಬಲವಂತದ ಮತಾಂತರಗಳನ್ನು ತಡೆಯಲು ಕಾನೂನನ್ನು ರಚಿಸುವಂತೆ ಒಕ್ಕೂಟ ಮತ್ತು ದೆಹಲಿ ಸರ್ಕಾರಗಳಿಗೆ ನಿರ್ದೇಶಿಸಲು ಹೈಕೋರ್ಟ್ ನಿರಾಕರಿಸಿತ್ತು. ಅಶ್ವಿನಿ ಅವರು ತಮ್ಮ ಅರ್ಜಿಯಲ್ಲಿ ಬಲವಂತದ ಮತಾಂತರದ ಯಾವುದೇ ನಿರ್ದಿಷ್ಟ ನಿದರ್ಶನಗಳನ್ನು ಒದಗಿಸಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಒಕ್ಕೂಟ ಮತ್ತು ರಾಜ್ಯ ಶಾಸಕಾಂಗವು ಅಂತಹ ಶಾಸನವನ್ನು ರಚಿಸಲು ಸ್ವತಂತ್ರವಾಗಿದೆ. ಅವರಿಗೆ ನ್ಯಾಯಾಲಯದ ಶಿಫಾರಸು ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...