Homeಅಂಕಣಗಳುಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

ಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

- Advertisement -
- Advertisement -

| ಗೌರಿ ಲಂಕೇಶ್ |
23 ಸೆಪ್ಟೆಂಬರ್, 2009 (ಸಂಪಾದಕೀಯದಿಂದ)

ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರತಿಭೆಯನ್ನು ಗುರುತಿಸುವುದಾಗಲಿ, ಅದನ್ನು ಪ್ರೋತ್ಸಾಹಿಸಿ ಬೆಳೆಸುವುದಾಗಲಿ ಗೊತ್ತಿಲ್ಲ ಎಂಬುದಕ್ಕೆ ಈ ಬಾರಿ ರಾಷ್ಟ್ರೀಯ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗಳನ್ನು ಪಡೆದಿರುವ ಪ್ರಕಾಶ್ ರೈ ಮತ್ತು ಉಮಾಶ್ರೀಯವರೇ ಉತ್ತಮ ಉದಾಹರಣೆಗಳು.

ಇಂಗ್ಲಿಷ್‍ನಲ್ಲಿ ‘Think out of the box’ ಎಂಬ ಜಾಣ್ಣುಡಿ ಇದೆ. ಇದರರ್ಥ ಸಾಂಪ್ರದಾಯಿಕವಾಗಿ ಯೋಚಿಸುವ ಬದಲಾಗಿ ಹೊಸ ರೀತಿಯಲ್ಲಿ, ಸೃಜನಾತ್ಮಕವಾಗಿ ಮತ್ತು ಬುದ್ಧಿವಂತಿಕೆಯಿಂದ ಚಿಂತಿಸಿ ಕ್ರಿಯಾಶೀಲರಾಗುವುದು. ಆದರೆ ಕನ್ನಡ ಚಿತ್ರರಂಗದವರಿಗೆ ಕ್ಲೀಷೆ, ಫಾರ್ಮುಲಾ, ರಿಮೇಕ್ ತರಹದ ಸಿದ್ಧ ತಂತ್ರಗಳ ಚೌಕಟ್ಟನ್ನು ಮೀರುವ ಕ್ರಿಯಾಶೀಲತೆಯೇ ಇಲ್ಲದಂತಾಗಿದೆ. ಆದ್ದರಿಂದಲೇ ಪಕ್ಕದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳ ಚಿತ್ರರಂಗಗಳಲ್ಲಿ ಸಾಧ್ಯವಾಗುತ್ತಿರುವ ಹೊಸ ಬಗೆಯ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳು ನಮ್ಮವರಿಂದ ಸಾಧ್ಯವಾಗುತ್ತಿಲ್ಲ.

ಇದಕ್ಕೊಂದು ಉದಾಹರಣೆ ಕೊಡಬಹುದು. ಕಳೆದ ವರ್ಷ ‘ಅಭಿಯುಂ ನಾನುಂ’ (ಅಭಿ ಮತ್ತು ನಾನು) ಎಂಬ ಚಿತ್ರವನ್ನು ತಮಿಳಿನಲ್ಲಿ ನಿರ್ಮಿಸಿ-ನಟಿಸಿದ್ದರು ಪ್ರಕಾಶ್ ರೈ. ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಕುರಿತ ಆ ಸಿನಿಮಾ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮನ್ನಣೆ ಪಡೆದಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಬೇಕೆಂದು ಹಲವರು ಯೋಚಿಸಿದರಾದರೂ ಕನ್ನಡದವರೇ ಆದ ಪ್ರಕಾಶ್ ಬದಲಾಗಿ ತಂದೆಯ ಪಾತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಹಾಕಿದರೆ ವಾಸಿ ಎಂದು ಭಾವಿಸಿದರು. ಅದಕ್ಕೆ ಅವರು ನೀಡಿದ ಕಾರಣ “ಪ್ರಕಾಶ್ ರೈಗೆ ಕನ್ನಡದಲ್ಲಿ ಮಾರ್ಕೆಟ್ ಇಲ್ಲ” ಎಂಬುದು.

ಅಂದಹಾಗೆ ‘ಮುಂಗಾರುಮಳೆ’ಯ ಮುನ್ನ ನಟ ಗಣೇಶನಿಗಾಗಲೀ, ‘ದುನಿಯಾ’ ಮುನ್ನ ವಿಜಯ್‍ಗಾಗಲಿ, ‘ನಂದಾ ಲವ್ಸ್ ನಂದಿತಾ’ ಮುನ್ನ ಯೋಗೇಶ್ ಅರ್ಥಾತ್ ಲೂಸ್ ಮಾದನಿಗಾಗಲಿ’ ಯಾವ ಮಾರುಕಟ್ಟೆ ಇತ್ತು? ಇಂತಹ ಪ್ರಶ್ನೆಗಳ ಬಗ್ಗೆ ಗಾಂಧಿನಗರ ಯೋಚಿಸುವುದೇ ಇಲ್ಲ. ಚಿತ್ರವೊಂದರ ಯಶಸ್ಸಿಗೆ ಮಾರುಕಟ್ಟೆ ಮುಖ್ಯ ಎಂಬುದನ್ನು ಒಪ್ಪಿಕೊಂಡರೂ ಅದರೊಂದಿಗೆ ಚಿತ್ರದ ಕಥೆ, ಅದರ ನಿರೂಪಣಾ ಶೈಲಿ ಮತ್ತು ಸದಭಿರುಚಿಯೂ ಅಷ್ಟೇ ಮುಖ್ಯ ಎಂಬುದನ್ನು ಪರಿಗಣಿಸಲೇಬೇಕು. ಈಗ ಆ ಚಿತ್ರವನ್ನು ಪ್ರಕಾಶ್ ರೈ ಸ್ವತಃ ನಿರ್ಮಿಸಿ, ನಿರ್ದೇಶಿಸಿ ನಟಿಸಲು ಹೊರಟಿದ್ದಾರೆ ಎನ್ನುವುದು ಬೇರೆ ಮಾತು.

ಪ್ರಕಾಶ್ ರೈಗೆ ರಾಷ್ಟ್ರಪ್ರಶಸ್ತಿ ಘೋಷಣೆಯಾದಾಗ ನಮ್ಮ ಮಾಧ್ಯಮಗಳು ಅದು ಕನ್ನಡಿಗರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಸಂದ ಗೌರವ ಎಂಬಂತೆ ಬಿಂಬಿಸಿದ್ದವು. ಆದರೆ ಎರಡು ದಶಕಗಳಿಂದ ಇವತ್ತಿನವರೆಗೂ ಕನ್ನಡ ಚಿತ್ರರಂಗ ಪ್ರಕಾಶ್ ರೈ ಎಂಬ ನಟನನ್ನು ತಿರಸ್ಕರಿಸುತ್ತಲೇ ಬಂದಿದೆ ಎಂಬುದು ವಾಸ್ತವ. 90ರ ದಶಕದ ಆರಂಭದಲ್ಲಿ ನಟನೆಯನ್ನೇ ತನ್ನ ಉಸಿರಾಗಿಸಿಕೊಂಡು ಅವಕಾಶಗಳಿಗಾಗಿ ಪರದಾಡುತ್ತಿದ್ದ ಪ್ರಕಾಶ್ ರೈ ಆಗಿನಿಂದಲೂ ನನಗೆ ಪರಿಚಯ.

ಒಂದು ಬಿಳಿ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಮಾತ್ರ ಹೊಂದಿದ್ದ ಪ್ರಕಾಶ್ ಮಿತ್ರರ ಬಟ್ಟೆ ಧರಿಸಿ ಮಿಂಚುತ್ತಿದ್ದುದ್ದು, ಗೆಳೆಯರೇ ನಾಟಕಗಳಲ್ಲಿ ಅವಕಾಶ ನೀಡದಿದ್ದಾಗ ಗಲಾಟೆ ಮಾಡಿದ್ದು, ಒಂದು ಹೊತ್ತಿನ ಊಟ ಸಿಗುತ್ತದೆಂದು ಚಿಕ್ಕಪುಟ್ಟ ಪಾತ್ರಗಳಿಗೆ ಡಬ್ ಮಾಡುತ್ತಿದ್ದದ್ದು, ಜೇಬಿನಲ್ಲಿ ಕಾಸಿಲ್ಲದೇ ‘ನಟರಾಜ್ ಎಕ್ಸ್‍ಪ್ರೆಸ್’ನಲ್ಲಿ ಓಡಾಡುತ್ತಿದ್ದುದು ಎಲ್ಲವೂ ನನಗೆ ನೆನಪಿದೆ. ಹಾಗಾಗಿ ಖ್ಯಾತ ನಿರ್ದೇಶಕ ಬಾಲಚಂದರ್ ಅವರು ಪ್ರಕಾಶನಿಗೆ ಅವಕಾಶ ಕೊಟ್ಟಾಗ ಅದರ ಬಗ್ಗೆ ಊರಿಗೆಲ್ಲಾ ಢಂಗೂರ ಸಾರಿ ಚೆನ್ನೈಗೆ ಹೋದ ಪ್ರಕಾಶ್ ಆನಂತರ ತೆಲುಗು ಸಿನಿಮಾಗಳಲ್ಲೂ ಖ್ಯಾತಿ ಪಡೆದಿದ್ದು, ಮಣಿರತ್ನಂ ಅವರ ‘ಇರುವರ್’ ಚಿತ್ರದಲ್ಲಿ ಕರುಣಾನಿಧಿಯ ಪಾತ್ರ ಮಾಡಿ ಜನಪ್ರಿಯತೆ ಪಡೆದದ್ದು, ಅದರೆಲ್ಲದರ ಮಧ್ಯೆಯೂ ಕನ್ನಡ ಚಿತ್ರರಂಗದೊಂದಿಗೆ ಸಂಪರ್ಕ ಇಟ್ಟುಕೊಂಡಿರಬೇಕೆಂದು ನಮ್ಮವರು ನೀಡಿದ ಪಾತ್ರಗಳಲ್ಲೂ ನಟಿಸಿದ್ದು, ಗಿರೀಶ್ ಕಾರ್ನಾಡ್ ಬರೆದಿರುವ ನಾಗಾಭರಣ ನಿರ್ದೇಶನದ ‘ನಾಗಮಂಡಲ’ದಲ್ಲಿ ಅದ್ಭುತವಾಗಿ ನಟಿಸಿದ್ದರೂ ರಾಜ್ಯ ಪ್ರಶಸ್ತಿಯಿಂದ ವಂಚಿತನಾಗಿ ಹಲುಬಿದ್ದು… ಎಲ್ಲವೂ ನೆನಪಿದೆ. ಅಪ್ಪಟ ಕನ್ನಡಿಗನಾದ ಪ್ರಕಾಶ್ ಇವತ್ತು ಇಲ್ಲಿ ಮಾರುಕಟ್ಟೆ ಹೊಂದಿರದೆ ತಮಿಳಿನ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆಂದರೆ ಅದು ಆತನ ಪ್ರತಿಭೆಗೆ ಸಂದ ಗೌರವ ಮಾತ್ರವಲ್ಲ, ಕನ್ನಡ ಚಿತ್ರರಂಗಕ್ಕಾದ ಮುಖಭಂಗವೂ ಹೌದು ಎಂದೇ ಭಾವಿಸಬಹುದು. ನಮ್ಮ ಚಿತ್ರರಂಗದಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಪರಂಪರೆ ವಿಸ್ತಾರಗೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....