Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

- Advertisement -
- Advertisement -

ವಿದೇಶದಲ್ಲಿ ನಡೆದ ಉತ್ಖನನದ ವೇಳೆ ಮಹಾಭಾರತದ ರಥಗಳು ಪತ್ತೆಯಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೈರಲ್ ವಿಡಿಯೊದಲ್ಲಿ ರಥಗಳ ಚಕ್ರಕಗಳು, ಮನುಷ್ಯರ ತಲೆಬುಡುಡೆ, ಎಲುಬು ಸೇರಿದಂತೆ ಇತರ ವಸ್ತುಗಳು ಇರುವುದು ಕಾಣಬಹುದಾಗಿದೆ.

ಬಿಜೆಪಿ ಬೆಂಬಲಿಗರು ಇದನ್ನು ವ್ಯಾಪಕವಾಗಿ ಹಂಚುತ್ತಿದ್ದಾರೆ. ನಮೋ ಮಲ್ಲೇಶ್ ಎಂಬ ಮೋದಿ ಅಭಿಮಾನಿ ಇದನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಸುಮಾರು 10 ಸಾವಿರ ಜನರು ವೀಕ್ಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ವಜನ ಸುಖಿನೋ ಭವಂತೂ’ ಎಂಬ ಫೇಸ್‌ಬುಕ್ ಅಕೌಂಟ್‌ ಕೂಡಾ ಇವುಗಳನ್ನು ಪೋಸ್ಟ್‌ ಮಾಡಿ, ರಾಮಾಯಣದ ರಥಗಳ ಪತ್ತೆ ಎಂದು ವೈರಲ್ ಮಾಡಿದೆ.

ಆದರೆ ನಿಜಕ್ಕೂ ಇವು ವಿದೇಶದಲ್ಲಿ ಪತ್ತೆಯಾದ ಮಹಾಭಾರತ ಕಾಲದ ರಥವೆ?

ಈ ವೈರಲ್ ವೀಡಿಯೊದಲ್ಲಿನ ದೃಶ್ಯಗಳ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಇದು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ ‘‘ಯಿನ್ ಕ್ಸು” ಮ್ಯೂಸಿಯಂನದ್ದು ಎಂದು ತಿಳಿದು ಬಂದಿದೆ. ಇದರ ಕುರಿತು ಹೆಚ್ಚಿನ ವೀಡಿಯೊಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಚೀನೀ ಸರ್ಕಾರದ ಅಧಿಕೃತ ವೆಬ್‌ಸೈಟ್ ಪ್ರಕಾರ, “ಯಿನ್ ಕ್ಸು” ಪ್ರದೇಶವು ಚೀನಾದ ಅತ್ಯಂತ ಹಳೆಯ ಪುರಾತನ ತಾಣಗಳಲ್ಲಿ ಒಂದಾಗಿದೆ. 19ನೇ ಶತಮಾನದಿಂದಲೂ ಇಲ್ಲಿ ಉತ್ಖನನ ನಡೆಸಲಾಗುತ್ತಿದೆ. ಸುಮಾರು 3300 ವರ್ಷಗಳಷ್ಟು ಹಳೆಯದಾದ ವಸ್ತುಗಳು, ಮೂಳೆಗಳು, ಆಭರಣಗಳು ಮತ್ತು ರಥಗಳನ್ನು ಇಲ್ಲಿನ ವಸ್ತುಸಂಗ್ರಹಾಲಯದಲ್ಲಿ ಕಾಣಬಹುದು.

ವಾಸ್ತವದಲ್ಲಿ ಇದು ‘ಶಾಂಗ್(ಇನ್)’ ರಾಜವಂಶದ ಪಳೆಯುಳಿಕೆಗಳಾಗಿದ್ದು, ಅವರ ಆಳ್ವಿಕೆ ಕ್ರಿಸ್ತಪೂರ್ವ 16 ರಿಂದ 11 ನೇ ಶತಮಾನದ ಮಧ್ಯದವರೆಗೆ ಇತ್ತು. ಈ ತಾಣವನ್ನು ಯುನೆಸ್ಕೋ ‘ವಿಶ್ವ ಪರಂಪರೆಯ ತಾಣ’ ಎಂದು ಘೋಷಿಸಿದೆ. ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಈ ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಲಾದ ರಥಗಳ ಹೆಚ್ಚಿನ ಫೋಟೋಗಳನ್ನು ಇಲ್ಲಿ ಕಾಣಬಹುದು.

ಒಟ್ಟಿನಲ್ಲಿ, ಚೀನಾದ ವಸ್ತುಸಂಗ್ರಹಾಲಯದಲ್ಲಿರುವ 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶದ ರಥದ ಚಕ್ರವನ್ನು ಮಹಾಭಾರತದ ರಥ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ವೀಡಿಯೊದಲ್ಲಿನ ದೃಶ್ಯಗಳು ಚೀನಾದ ಆನ್ ಯಾಂಗ್ ನಗರದ ಸಮೀಪವಿರುವ “ಯಿನ್ ಕ್ಸು” ವಸ್ತುಸಂಗ್ರಹಾಲಯದ್ದಾಗಿದೆ.

ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಇಲ್ಲಿನ ಪುರಾತನ ಸಮಾಧಿಗಳಲ್ಲಿ ಮಾನವ ಮೂಳೆಗಳ ಜೊತೆಗೆ ರಥದ ಚಕ್ರಗಳು, ವಿವಿಧ ಆಭರಣಗಳು ಮತ್ತು ಪಾತ್ರೆಗಳು ಸಹ ಕಂಡುಬಂದಿವೆ. ಇವುಗಳು 3300 ವರ್ಷಗಳಷ್ಟು ಹಳೆಯದಾದ ಶಾಂಗ್ ರಾಜವಂಶಕ್ಕೆ ಸೇರಿದವು ಎಂದು ಯುನೆಸ್ಕೋ ಗುರುತಿಸಿದೆ. ಜೊತೆಗೆ ಈ ವಸ್ತುಸಂಗ್ರಹಾಲಯದಲ್ಲಿ ಅನೇಕ ಪುರಾತನ ರಥಗಳನ್ನು ಸಹ ಕಾಣಬಹುದು. ಹಾಗಾಗಿ ವೈರಲ್‌ ವಿಡಿಯೊ ಪೋಸ್ಟ್‌ನಲ್ಲಿ ಮಾಡುತ್ತಿರುವ ಪ್ರತಿಪಾದನೆ ಸುಳ್ಳಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...