ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಾರಣಕ್ಕೆ ಮೇ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರು ದೆಹಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವನ್ನು ಹಲವು ಬಿಜೆಪಿ ನಾಯಕರು ಶನಿವಾರ ಹಂಚಿಕೊಂಡಿದ್ದಾರೆ.
ಜೈಲಿನಲ್ಲಿರುವ ಸಚಿವರಿಗೆ ವಿಐಪಿ ಸೌಲಭ್ಯ ನೀಡಿದ ಆರೋಪದಲ್ಲಿ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೆಲವೇ ದಿನಗಳಲ್ಲಿ ವೀಡಿಯೊ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿರುವ ಜೈಲ್ ನಂಬರ್ 7 ರ ಸೂಪರಿಂಟೆಂಡೆಂಟ್ ಮಾಜಿ ಸಚಿವರಿಗೆ ಅನಪೇಕ್ಷಿತ ಅನುಕೂಲಗಳನ್ನು ವಿಸ್ತರಿಸಿದ್ದಾರೆ ಎಂದು ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದರು. ಹೀಗಾಗಿ ಇದರ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ರಚಿಸಿದ್ದ ತನಿಖಾ ಸಮಿತಿಯ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪ: ಆರು ಮಂದಿ ಮೃತ | ದೆಹಲಿಯಲ್ಲೂ ಕಂಪನದ ಅನುಭವ!
ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದಾಗ ಗಾಯಗೊಂಡಿದ್ದರು, ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಸಂತ್ಯೇಂದ್ರ ಜೈನ್ ವಿಐಪಿ ಸೌಲಭ್ಯ ಪಡೆಯುವ ಆರೋಪಗಳನ್ನು ಎಎಪಿ ಈ ಹಿಂದೆ ತಳ್ಳಿಹಾಕಿತ್ತು, ಅವುಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು ಕರೆದಿತ್ತು.
One more
All rules thrown to the dustbin!
VVIP treatment in jail! Can Kejriwal defend such a Mantri? Should he not be sacked ?
This shows true face of AAP!
Vasooli & VVIP Massage inside Tihar Jail! Tihar is under AAP govt pic.twitter.com/psXFugf7t5
— Shehzad Jai Hind (@Shehzad_Ind) November 19, 2022
ಇಂದು ಬಿಡುಗಡೆಯಾದ ವೀಡಿಯೋದಲ್ಲಿ, ಸತ್ಯೇಂದರ್ ಜೈನ್ ಅವರು ತಿಹಾರ್ ಜೈಲಿನ ತನ್ನ ಸೆಲ್ ನಲ್ಲಿ ಕಾಲು, ಬೆನ್ನು ಮತ್ತು ತಲೆಗೆ ಮಸಾಜ್ ಮಾಡಿಕೊಳ್ಳುತ್ತಿರುವುದು ಕಾಣುತ್ತದೆ.
ಇದನ್ನೂ ಓದಿ: ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಸಮಾನವಾಗಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ
“ಜೈಲಿನಲ್ಲಿ ವಿವಿಐಪಿ ಸೌಲಭ್ಯ! ಕೇಜ್ರಿವಾಲ್ ಇಂತಹ ಮಂತ್ರಿಯನ್ನು ಸಮರ್ಥಿಸಬಹುದೇ? ಅವರನ್ನು ವಜಾ ಮಾಡಬೇಕಲ್ಲವೇ? ಇದು ಎಎಪಿಯ ನಿಜವಾದ ಮುಖವನ್ನು ತೋರಿಸುತ್ತದೆ!” ಎಂದು ಬಿಜೆಪಿಯ ಶೆಹಜಾದ್ ಜೈ ಹಿಂದ್ ಅವರು ಟ್ವೀಟ್‌ನಲ್ಲಿ ಈ ವೀಡಿಯೊಗಳಲ್ಲಿ ಒಂದನ್ನು ಹಂಚಿಕೊಂಡಿದ್ದಾರೆ.
#WATCH | CCTV video emerges of jailed Delhi minister Satyendar Jain getting a massage inside Tihar jail. pic.twitter.com/VMi8175Gag
— ANI (@ANI) November 19, 2022
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, “ಆಮ್ ಆದ್ಮಿ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭ್ರಷ್ಟಾಚಾರವನ್ನು ಎದುರಿಸಲು ಮತ್ತು ವಿವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸಲು ನೀವು ಪಕ್ಷವನ್ನು ರಚಿಸಿದ್ದೀರಿ. ಆದರೆ ಇಲ್ಲಿ ಒಬ್ಬ ಭ್ರಷ್ಟ ವ್ಯಕ್ತಿ ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ
ಸಂತ್ಯೇಂದ್ರ ಜೈನ್ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ತನಿಖಾ ಸಂಸ್ಥೆಯು ದೆಹಲಿ ನ್ಯಾಯಾಲಯಕ್ಕೆ ಸಿಸಿಟಿವಿ ದೃಶ್ಯಾವಳಿಯನ್ನೂ ಸಲ್ಲಿಸಿತ್ತು. ಜೈಲು ಸಚಿವರೂ ಆಗಿರುವ ಸಂತ್ಯೇಂದ್ರ ಜೈನ್ ಅವರು ತಮ್ಮ ಸ್ಥಾನವನ್ನು ದುರುಪಯೋಗ ಮಾಡಿದ್ದಾರೆ ಎಂದು ಅದು ಆರೋಪಿಸಿತ್ತು.


