Homeಅಂತರಾಷ್ಟ್ರೀಯಟ್ವಿಟರ್ ಪೋಲ್ ಫಲಿತಾಂಶ ಆಧರಿಸಿ ಡೊನಾಲ್ಡ್ ಟ್ರಂಪ್ ಖಾತೆ ಮರುಸ್ಥಾಪಿಸಿದ ಎಲಾನ್ ಮಸ್ಕ್

ಟ್ವಿಟರ್ ಪೋಲ್ ಫಲಿತಾಂಶ ಆಧರಿಸಿ ಡೊನಾಲ್ಡ್ ಟ್ರಂಪ್ ಖಾತೆ ಮರುಸ್ಥಾಪಿಸಿದ ಎಲಾನ್ ಮಸ್ಕ್

- Advertisement -
- Advertisement -

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವಿವಾದಿತ ಟ್ವಿಟರ್ ಖಾತೆಯನ್ನು ಮರುಸ್ಥಾಪಿಸಿರುವುದಾಗಿ ಟ್ವಿಟರ್‌ನ ನೂತನ ಮಾಲಿಕ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಆದರೆ ಟ್ರಂಪ್ ತನ್ನದೆ ಟ್ರುಥ್ ಎನ್ನುವ ಸೋಷಿಯಲ್ ಮೀಡಿಯಾ ನೆಟ್‌ವರ್ಕ್ ಹೊಂದಿರುವ ಕಾರಣ ಟ್ವಿಟರ್‌ನಲ್ಲಿ ಮುಂದುವರೆಯುವುದು ಅನುಮಾನವಾಗಿದೆ.

ಕಳೆದ ತಿಂಗಳಷ್ಟೇ ಟ್ವಿಟರ್ ಸ್ವಾಧೀನಪಡಿಸಿಕೊಂಡ ಎಲಾನ್ ಮಸ್ಕ್, ಮಾಜಿ ಅಧ್ಯಕ್ಷ ಟ್ರಂಪ್‌ರವರ ಖಾತೆ ಮರುಸ್ಥಾಪಿಸಬೇಕು ಎಂದು ಟ್ವಿಟರ್ ಪೋಲ್ ನಡೆಸಿದ್ದರು. ಅದರಲ್ಲಿ ಹೌದು ಎಂದು ಶೇ. 51.8 ಮತ ಬಿದ್ದರೆ ಇಲ್ಲ ಎಂದು ಶೇ. 48.2 ರಷ್ಟು ಮತಗಳು ಬಿದ್ದಿವೆ. ಸುಮಾರು ಒಂದೂವರೆ ಕೋಟಿ ಜನ ಮತ ಚಲಾಯಿಸಿದ್ದಾರೆ. ಈ ಫಲಿತಾಂಶದ ಆಧಾರದಲ್ಲಿ ಟ್ವಿಟರ್ ಖಾತೆ ಮರುಸ್ಥಾಪಿಸಲಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣಾ ಎಣಿಕೆಯಲ್ಲಿ ಸೋತ ಡೊನಾಲ್ಡ್ ಟ್ರಂಪ್, ತನ್ನ ಸೋಲನ್ನು ಒಪ್ಪಿಕೊಳ್ಳದೆ ತಾನೇ ವಿಜಯಿಯಾಗಿದ್ದೇನೆ ಎಂದು ಪ್ರತಿಪಾದಿಸಿದ್ದರು. ಚುನಾವಣಾ ಫಲಿತಾಂಶದ ವಿರುದ್ದ ಸುಪ್ರೀಂಕೋರ್ಟ್‌ಗೆ ಹೋಗಿದ್ದರು. ಆದರೆ ಅವರು ಸಲ್ಲಿಸಿರುವ ಎಲ್ಲಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ ನಂತರವೂ ತನ್ನ ಬೆಂಬಲಿಗರಿಗೆ ಸಂಸತ್‌ ಭವನಕ್ಕೆ ರ್‍ಯಾಲಿ ಹೊರಡಿ ಎಂದು ಕರೆ ನೀಡಿ, ಸಂಸತ್ ಮೇಲೆ ದಾಳಿ ಮಾಡಿದ್ದ ಜನರನ್ನು ಉದ್ರಿಕ್ತರನ್ನಾಗಿ ಮಾಡಿದ್ದರು. ಈ ಎಲ್ಲಾ ಆರೋಪಗಳ ಮೇಲೆ ಅವರ ಟ್ವಿಟರ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಖಾತೆಗಳಿಗೆ ಶಾಶ್ವತ ನೀಷೇಧ ಹೇರಲಾಗಿತ್ತು.

ಟ್ರಂಪ್ ಟ್ವಿಟರ್ ಖಾತೆಯನ್ನು ನಿರ್ಬಂಧಿಸುವ ವೇಳೆಗೆ ಅವರಿಗೆ 8 ಕೋಟಿಗೂ ಅಧಿಕ ಫಾಲೋವರ್ಸ್ ಇದ್ದರು. ಆದರೆ ಈಗ ಮಸ್ಕ್ ಮರುಸ್ಥಾಪಿಸಿದ ಖಾತೆಯಲ್ಲಿ ಕೇವಲ 14 ಲಕ್ಷ ಫಾಲೋವರ್ಸ್ ಇರುವುದನ್ನು ಗಮನಿಸಬಹುದು.

ಟ್ರಂಪ್ ಟ್ವಿಟರ್‌ಗೆ ಮರಳುವ ಸಾಧ್ಯತೆ ಕಡಿಮೆ

ಟ್ವಿಟರ್‌ ನಿಷೇಧದ ಬಳಿಕೆ ಟ್ರಂಪ್ ಮತ್ತೆ ಟ್ವಿಟರ್‌ಗೆ ಮರಳುವುದಿಲ್ಲ ಎಂದು ಹೇಳಿ ತಮ್ಮದೇ ಆದ ಟ್ರುಥ್ ಎಂಬ ಸೋಷಿಯಲ್ ಮೀಡಿಯಾ ನೆಟ್‌ವರ್ಕ್ ಸೃಷ್ಟಿಸಿದ್ದಾರೆ. ಶನಿವಾರ ಸಂಜೆ ಕಾರ್ಯಕ್ರಮವೊಂದಕ್ಕೆ ವಿಡಿಯೋ ಕಾನ್ಪರೆನ್ಸ್ ಮೂಲಕ ಹಾಜರಾದ ಅವರು, “ನಾನು ಮಸ್ಕ್ ಅವರ ಅಭಿಮಾನಿ, ಅವರ ಟ್ವಿಟರ್ ಪೋಲ್ ಅನ್ನು ಸ್ವಾಗತಿಸುತ್ತೇನೆ. ಆದರೆ ನನಗೆ ಟ್ರುಥ್ ಸೋಷಿಯಲ್ ಇದೆ. ನಾನು ಟ್ವಿಟರ್‌ಗೆ ಮರಳು ಸಕಾರಣವಿದೆ ಎಂದು ನಾನು ಭಾವಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಡೊನಾಲ್ಡ್‌‌ ಟ್ರಂಪ್‌ ಫೇಸ್‌‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗೆ ಅನಿರ್ದಿಷ್ಟಾವಧಿ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...