Homeರಾಷ್ಟ್ರೀಯ‘500 KG ಗಾಂಜಾ ಇಲಿ ತಿಂದಿದೆ!’: ಕೋರ್ಟ್‌ನಲ್ಲಿ ವಿಚಿತ್ರ ಹೇಳಿಕೆ ನೀಡಿದ ಯುಪಿ ಪೊಲೀಸರು

‘500 KG ಗಾಂಜಾ ಇಲಿ ತಿಂದಿದೆ!’: ಕೋರ್ಟ್‌ನಲ್ಲಿ ವಿಚಿತ್ರ ಹೇಳಿಕೆ ನೀಡಿದ ಯುಪಿ ಪೊಲೀಸರು

- Advertisement -
- Advertisement -

ಶೇರ್‌ಗಡ್‌ ಮತ್ತು ಹೈವೇ ಪೊಲೀಸ್ ಠಾಣೆಯ ಗೋದಾಮುಗಳಲ್ಲಿ ವಶಕ್ಕೆ ಪಡೆದು ಇರಿಸಿದ್ದ 500 ಕೆಜಿಗೂ ಹೆಚ್ಚು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್-1985 (ಎನ್‌ಡಿಪಿಎಸ್) ಅಡಿಯಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಉತ್ತರ ಪ್ರದೇಶದ ಮಥುರಾ ಪೊಲೀಸರು ವರದಿ ಸಲ್ಲಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಲಾದ ಪ್ರಕರಣದಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಒದಗಿಸುವಂತೆ ಮಥುರಾ ಪೊಲೀಸರಿಗೆ ನ್ಯಾಯಾಲಯ ಆದೇಶಿಸಿತ್ತು. ಈ ವೇಳೆ ಪೊಲೀಸರು ನ್ಯಾಯಾಲಯದಲ್ಲಿ ವಿಚಿತ್ರವಾದ ಪ್ರತಿಪಾದನೆ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಥುರಾ ಪೊಲೀಸರು ನ್ಯಾಯಾಲಯಕ್ಕೆ ನೀಡಿದ ಸ್ಪಷ್ಟನೆಯಲ್ಲಿ, “ಇಲಿಗಳು ಗಾತ್ರದಲ್ಲಿ ಸಣ್ಣದಾಗಿದ್ದರೂ, ಅವುಗಳಿಗೆ ಪೊಲೀಸರ ಭಯ ಇಲ್ಲ. ಠಾಣೆಯ ಪೊಲೀಸರಿಗೆ ಈ ಸಮಸ್ಯೆ ಪರಿಹರಿಸುವಲ್ಲಿ ಪರಿಣಿತರಾಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಗಾಯಗೊಂಡು ಆಸ್ಪತ್ರೆಯ ನೆಲದಲ್ಲಿ ಬಿದ್ದಿರುವ ರೋಗಿ; ಚೆಲ್ಲಿರುವ ರಕ್ತವನ್ನು ನೆಕ್ಕುತ್ತಿರುವ ನಾಯಿ’ – ಉತ್ತರ ಪ್ರದೇಶ!

“ಸಂಗ್ರಹಿಸಿದ ವಸ್ತುಗಳನ್ನು ಇಲಿಗಳಿಂದ ರಕ್ಷಿಸಲು ಪೊಲೀಸ್ ಠಾಣೆಯಲ್ಲಿ ಯಾವುದೇ ಸ್ಥಳವಿಲ್ಲ” ಎಂದು ಪ್ರಾಸಿಕ್ಯೂಟರ್‌ಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಶೇಖರಣಾ ಪ್ರದೇಶಗಳಲ್ಲಿ ಇರಿಸಲಾಗಿರುವ ವಸ್ತುಗಳನ್ನು ರಕ್ಷಿಸಲು ಪೊಲೀಸರು ಸಾಧ್ಯವಿಲ್ಲ ಎಂದು ಕಂಡುಕೊಂಡಿದ್ದಾರೆ. ದಾವೆಗೆ ಸಂಬಂಧಿಸಿದಂತೆ ಸಾಕ್ಷ್ಯವನ್ನು ಒದಗಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಆದೇಶಿಸಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 26 ಎಂದು ನಿಗದಿಪಡಿಸಿದೆ ” ಎಂದು ವಿಶೇಷ ಪ್ರಾಸಿಕ್ಯೂಟರ್ ರಣವೀರ್ ಸಿಂಗ್ ಹೇಳಿದ್ದಾರೆ.

ಮೇ ತಿಂಗಳ ವೇಳೆ ಮಥುರಾದಲ್ಲಿ ಟ್ರಕ್‌ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ ಮೂವರನ್ನು ಬಂಧಿಸಲಾಗಿತ್ತು. ಆರೋಪಿಗಳು ರಾಗಿ ಮೂಟೆಗಳಲ್ಲಿ 386 ಕೆಜಿ ಗಾಂಜಾವನ್ನು ಬಚ್ಚಿಟ್ಟು ಸಾಗಿಸುತ್ತಿದ್ದರು. ಈ ಟ್ರಕ್ ಅನ್ನು ಶೇರ್ಗಢ್ ಪ್ರದೇಶದ ಜಟ್ವಾರಿ ಗ್ರಾಮದಲ್ಲಿ ಪೊಲೀಸರು ತಡೆದ್ದು,  ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ಮೋದಿ ದೇವರ ಅವತಾರ: ಉತ್ತರ ಪ್ರದೇಶದ ಸಚಿವೆ ವಿವಾದಾತ್ಮಕ ಹೇಳಿಕೆ

ವಶಪಡಿಸಿಕೊಂಡ ಗಾಂಜಾವನ್ನು ಒಪ್ಪಿಸುವಂತೆ ನ್ಯಾಯಾಲಯವು ಪೊಲೀಸರಿಗೆ ತಿಳಿಸಿತ್ತು. ಈ ವೇಳೆ ಶೇರ್‌‌ಗಡ್‌ ಪೊಲೀಸರು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...