Homeಸಿನಿಮಾಕ್ರೀಡೆಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಫಿಫಾ ವಿಶ್ವಕಪ್‌ನಲ್ಲಿ ಏಷ್ಯಾ ದೇಶಗಳ ಗೆಲುವು: ಫೈನಲ್‌ವರೆಗೆ ಸಾಗಬೇಕಾದ ಹಾದಿ ಹೀಗಿದೆ

ಜರ್ಮನಿ ಮಣಿಸಿದ ಜಪಾನ್, ಅರ್ಜೆಂಟೀನಾ ಮಣಿಸಿದ ಸೌದಿ - ಮುಂದೇನು?

- Advertisement -
- Advertisement -

ಬಹುನಿರೀಕ್ಷಿತ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿ ಕತಾರ್‌ನಲ್ಲಿ ಆರಂಭಗೊಂಡಿದೆ. ಈ ಬಾರಿ ಏಷ್ಯಾ ದೇಶಗಳು ಲೀಗ್ ಹಂತದಲ್ಲಿ ಗೆಲುವಿನ ಖಾತೆ ತೆರೆಯುವ ಮೂಲಕ ಸಾಧನೆಗೈದಿವೆ. ಸೌದಿ ಅರೇಬಿಯಾ ದೇಶವು (2-1) ಎರಡು ಬಾರಿ ವಿಶ್ವಕಪ್ ಗೆದ್ದಿರುವ ಅರ್ಜೆಂಟೀನಾ ತಂಡವನ್ನು ಮಣಿಸಿದರೆ, ಜಪಾನ್ ದೇಶವು (2-1) ನಾಲ್ಕು ಬಾರಿ ಚಾಂಪಿಯನ್ ಜರ್ಮಿನಿಯನ್ನು ಸೋಲಿಸಿ ಸಂಭ್ರಮಿಸಿದೆ. ಆದರೆ ಫೈನಲ್‌ವರೆಗೆ ಸಾಗಬೇಕಾದ ದಾರಿ ಬಹಳ ದೂರವಿದೆ. ಹಾಗಾಗಿ ವಿಶ್ವಕಪ್ ಪುಟ್ಬಾಲ್ ಟೂರ್ನಿಯ ವಿವಿಧ ಹಂತಗಳ ಬಗ್ಗೆ ತಿಳಿಯೋಣ.

ಪ್ರಶಸ್ತಿಗಾಗಿ ಸೆಣಸಲಿರುವ 32 ದೇಶಗಳು

ವಿಶ್ವದಾದ್ಯಂತ ಅತಿ ಹೆಚ್ಚು ಜನಪ್ರಿಯತೆ ಹೊಂದಿರುವ ಪುಟ್ಬಾಲ್ ಕ್ರೀಡೆಯಲ್ಲಿ ವಿಶ್ವಕಪ್ ಅತಿ ದೊಡ್ಡ ಟೂರ್ನಿಯಾಗಿದೆ. ಹಲವು ದೇಶಗಳು ಈ ಟೂರ್ನಿಯಲ್ಲಿ ಆಡಲು ಬಯಸಿದರೂ ಅಂತಿಮ ಸುತ್ತಿಗೆ ಕೇವಲ 32 ದೇಶಗಳಿಗೆ ಮಾತ್ರ ಅವಕಾಶವಿರುತ್ತದೆ. ಅದಕ್ಕೂ ಮೊದಲು ಮೂರು ವರ್ಷಗಳ ಕಾಲ ವಿಶ್ವದ ಎಲ್ಲಾ ಭಾಗಗಳ ಅರ್ಹತಾ ಸುತ್ತಿನ  ಪಂದ್ಯಗಳಲ್ಲಿ ಗೆದ್ದು ಅರ್ಹತೆ ಪಡೆದವರನ್ನು ಮಾತ್ರ ಅಂತಿಮ ಸುತ್ತಿನಲ್ಲಿ ಆಡಿಸಲಾಗುತ್ತದೆ. ಆತಿಥ್ಯ ವಹಿಸುವ ದೇಶಗಳು ಸಹಜವಾಗಿ ಅರ್ಹತೆ ಪಡೆಯುತ್ತವೆ.

ಲೀಗ್ ಹಂತ

ಅಧಿಕೃತ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಲೀಗ್ ಹಂತದಲ್ಲಿ 32 ತಂಡಗಳನ್ನು ತಲಾ ನಾಲ್ಕು ತಂಡಗಳಂತೆ 8 (ಎ ಯಿಂದ ಹೆಚ್ ವರೆಗೆ) ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಲ್ಲಿ ನಾಲ್ಕು ತಂಡಗಳಿದ್ದು ರೌಂಡ್ ರಾಬಿನ್ ಮಾದರಿಯಲ್ಲಿ ಪ್ರತಿ ತಂಡಕ್ಕೂ ಮೂರು ಪಂದ್ಯಗಳನ್ನು ಆಡುವ ಅವಕಾಶವಿರುತ್ತದೆ. ಈ ಹಂತದಲ್ಲಿ ಪ್ರತಿ ಗೆಲುವಿಗೆ 3 ಅಂಕ, ಡ್ರಾ ಆದರೆ ಎರಡು ತಂಡಕ್ಕೆ ತಲಾ ಒಂದು ಅಂಕ ಮತ್ತು ಸೋಲಿಗೆ 0 ಅಂಕ ಇರುತ್ತದೆ. ಪ್ರತಿ ಗುಂಪಿನಲ್ಲಿ ಮೊದಲೆರಡು ಸ್ಥಾನ ಪಡೆದ ಎರಡು ತಂಡಗಳನ್ನು ಮುಂದಿನ ನಾಕೌಟ್ ಹಂತಕ್ಕೆ (16ರ ಹಂತ) ಅರ್ಹತೆ ಪಡೆಯುತ್ತವೆ. ಪ್ರತಿ ಗುಂಪಿನಿಂದ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದ ತಲಾ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಒಂದು ವೇಳೆ ಯಾವುದೇ ಗುಂಪಿನ ಅಂಕ ಪಟ್ಟಿಯಲ್ಲಿ ಎರಡನೇ ಮತ್ತು ಮೂರನೇ ಸ್ಥಾನದ ತಂಡಗಳು ಸಮಾನ ಅಂಕ ಪಡೆದರೆ (ಡ್ರಾ ಸಂದರ್ಭಗಳಲ್ಲಿ ಇದರ ಸಾಧ್ಯತೆ ಹೆಚ್ಚು) ಗುಂಪು ಹಂತದಲ್ಲಿ ತಂಡಗಳ ಗೆಲುವಿನ ಗೋಲಿನ ಅಂತರ ಅಥವಾ ಅತಿ ಹೆಚ್ಚು ಗೋಲು ಗಳಿಸಿದ ತಂಡ ಅಥವಾ ಆ ಎರಡು ತಂಡಗಳ ನಡುವಿನ ಇದುವರೆಗಿನ ಪಂದ್ಯಗಳಲ್ಲಿ ಅತಿ ಹೆಚ್ಚು ಗೆದ್ದಿರುವ ತಂಡ 16ರ ಹಂತಕ್ಕೆ ಅರ್ಹತೆ ಗಿಟ್ಟಿಸುತ್ತದೆ.

ನಾಕೌಟ್ (16ರ ಹಂತ)

16ರ ಹಂತದಲ್ಲಿ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. ಒಂದು ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡ ಮತ್ತೊಂದು ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಗೆದ್ದವರು ಕ್ವಾರ್ಟರ್ ಫೈನಲ್ ಪ್ರವೇಶಿಸಿದರೆ ಸೋತ ತಂಡ ಟೂರ್ನಿಯಿಂದ ಹೊರಬೀಳುತ್ತದೆ. ಪಂದ್ಯ ಡ್ರಾ ಆದರೆ ವಿಜೇತ ತಂಡವನ್ನು ಗುರುತಿಸಲು ಹೆಚ್ಚಿನ ಸಮಯ ನೀಡಲಾಗುತ್ತದೆ ಅಥವಾ ಪೆನಾಲ್ಟಿ ಶೂಟೌಟ್ ನಡೆಸಲಾಗುತ್ತದೆ. ಹೀಗೆ 4 ಗುಂಪಿನಿಂದ 8 ತಂಡಗಳು ಕ್ವಾರ್ಟರ್ ಫೈನಲ್ ತಲುಪುತ್ತವೆ.

ಕ್ವಾರ್ಟರ್ ಫೈನಲ್

ಇಲ್ಲಿಯೂ ಸಹ ಸಿಂಗಲ್ ಎಲಿಮಿನೇಷನ್ ಪಂದ್ಯಗಳು ಇರುತ್ತವೆ. 8 ತಂಡಗಳಿಗೆ ನಾಲ್ಕು ಪಂದ್ಯಗಳು ನಡೆದು ಗೆದ್ದವರು ಸೆಮಿಫೈನಲ್ ತಲುಪುತ್ತಾರೆ. ಸೋತ ತಂಡ ಹೊರನಡೆಯುತ್ತದೆ.

ಸೆಮಿಫೈನಲ್

ನಾಲ್ಕು ತಂಡಗಳ ಎರಡು ಸೆಮಿಫೈನಲ್ ಪಂದ್ಯಗಳು ನಡೆಯುತ್ತವೆ. ಗೆದ್ದ ಎರಡು ತಂಡ ನೇರವಾಗಿ ಫೈನಲ್ ಪ್ರವೇಶ ಪಡೆಯುತ್ತವೆ. ಸೋತ ತಂಡಗಳ ನಡುವೆ ಮೂರನೇ ಸ್ಥಾನಕ್ಕಾಗಿ ಒಂದು ಪಂದ್ಯ ನಡೆಯುತ್ತದೆ.

ಫೈನಲ್

ಅಂತಿಮವಾಗಿ ಎರಡು ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತದೆ. ಪ್ರಸ್ತುತ ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 18 ರಂದು ನಡೆಯಲಿದೆ.

ಇದುವರೆಗೂ ನಡೆದ 21 ವಿಶ್ವಕಪ್ ಪಂದ್ಯಾವಳಿಗಳಲ್ಲಿ ಬ್ರೆಜಿಲ್ ದೇಶವು ಎಲ್ಲಾ ವಿಶ್ವಕಪ್‌ಗಳಲ್ಲಿಯೂ ಅರ್ಹತೆ ಪಡೆದು ಆಡಿದೆ. ಅಲ್ಲದೆ 5 ಬಾರಿ ಚಾಂಪಿಯನ್ ಆಗುವ ಮೂಲಕ ದಾಖಲೆ ನಿರ್ಮಿಸಿದೆ. ಉಳಿದಂತೆ ಜರ್ಮನಿ ಮತ್ತು ಇಟಲಿ ತಂಡಗಳು ತಲಾ ನಾಲ್ಕು ಬಾರಿ ಚಾಂಪಿಯನ್ ಆಗಿವೆ. ಹಾಲಿ ಚಾಂಪಿಯನ್ ಫ್ರಾನ್ಸ್, ಅರ್ಜೆಂಟೀನಾ ಮತ್ತು ಉರುಗ್ವೆ ತಂಡಗಳು ತಲಾ ಎರಡು ಬಾರಿ ಚಾಂಪಿಯನ್ ಆಗಿವೆ. ಇಂಗ್ಲೆಂಡ್ ಮತ್ತು ಸ್ಪೇನ್ ತಲಾ ಒಮ್ಮೆ ಟ್ರೋಫಿ ಎತ್ತಿ ಹಿಡಿದಿವೆ.

ಇದನ್ನೂ ಓದಿ: ಲೈವ್ ಪ್ರಸಾರದಲ್ಲೆ ‘ಝೀನ್ಯೂಸ್’ ಅನ್ನು ‘ಕೆಟ್ಟ ಚಾನಲ್’ ಎಂದು ಕರೆದ ಭಾರತೀಯ ಕ್ರಿಕೆಟ್ ಅಭಿಮಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...