Homeಕರ್ನಾಟಕಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

ಬೆಂಗಳೂರಿನ ರಸ್ತೆಯಲ್ಲಿ ಹೊಂಡ ತೆಗೆದವರು ನಾಪತ್ತೆ, ಟ್ರಾಫಿಕ್ ಪೊಲೀಸರ ಮನವಿಗೆ ಸ್ಪಂದಿಸದ BBMP!

- Advertisement -
- Advertisement -

ಬೆಂಗಳೂರಿನ ಹೂಡಿಯಿಂದ ಅಯ್ಯಪ್ಪನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮಧ್ಯೆ ನೀರು ಸರಬರಾಜು ಪೈಪಿನ ರಿಪೇರಿ ಕಾರಣಕ್ಕೆ ಯಾರೋ ಬೃಹತ್ ಹೊಂಡ ತೆಗೆದು ಅದನ್ನು ಮುಚ್ಚದೆ ಪರಾರಿಯಾಗಿರುವ ಘಟನೆ ಜರುಗಿದೆ. ಇದರಿಂದ ವಾಹನ ಸಂಚರಕ್ಕೆ ತೀವ್ರ ಅಡಚಣೆಯಾದ ಕಾರಣ ಕೆ.ಆರ್ ಪುರ ಸಂಚಾರಿ ಪೊಲೀಸರು ರಸ್ತೆ ಗುಂಡಿ ಮುಚ್ಚಲು ಹರಸಾಹಸಪಟ್ಟ ಘಟನೆಗೆ ಬೆಂಗಳೂರು ನಗರ ಸಾಕ್ಷಿಯಾಗಿದೆ. ಇದು BBMPಯ ಕಳಪೆ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂಬ ಟೀಕೆಗಳು ಜಾಲತಾಣಗಳಲ್ಲಿ ವ್ಯಕ್ತವಾಗಿವೆ.

ಇಂದು ಬೆಳಿಗ್ಗೆಯೇ ಕೆ.ಆರ್ ಪುರ ಸಂಚಾರಿ ಪೊಲೀಸರು ಟ್ವೀಟ್ ಮಾಡಿ, “ಹೂಡಿಯಿಂದ ಅಯ್ಯಪ್ಪನಗರಕ್ಕೆ ಹೋಗುವ ರಸ್ತೆಯನ್ನು ಬಳಸಬೇಡಿ. ಯಾರೋ ನಮ್ಮ ಅನುಮತಿಯಿಲ್ಲದೆ ರಸ್ತೆಯಲ್ಲಿ ಹೊಂಡ ತೆಗೆದು ಈ ಸ್ಥಿತಿಯಲ್ಲಿ ಬಿಟ್ಟುಹೋಗಿದ್ದಾರೆ. ನಾವು ಇದನ್ನು ಮುಚ್ಚುತ್ತಿದ್ದು, ಇದಕ್ಕೆ ಸಮಯ ತೆಗೆದುಕೊಳ್ಳುತ್ತದೆ” ಎಂದು ಮನವಿ ಮಾಡಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅದರ ಫೋಟೊಗಳನ್ನು ಸಹ ಲಗತ್ತಿಸಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ “ನಮ್ಮ ಕರೆಗಳಿಗೆ ಬಿಬಿಎಂಪಿಯ ಯಾವ ಅಧಿಕಾರಿಗಳು ಸಹ ಸ್ಪಂದಿಸುತ್ತಿಲ್ಲ. ದಯವಿಟ್ಟು ಈ ರಸ್ತೆ ಗುಂಡಿ ಮುಚ್ಚಿಸಲು ಯಾರನ್ನಾದರೂ ಕಳಿಸಿಕೊಡಿ ಸರ್” ಎಂದು ಕೆ.ಆರ್ ಪುರ ಸಂಚಾರಿ ಪೊಲೀಸರು ಅವಲತ್ತು ಕೊಂಡಿದ್ದಾರೆ. ಆ ಟ್ವೀಟ್‌ಗೆ BBMP ಆಯುಕ್ತರಾದ ತುಷಾರ್ ಗಿರಿನಾಥ್‌ರವರನ್ನು ಸಹ ಟ್ಯಾಗ್ ಮಾಡಲಾಗಿದೆ.

ಕೊನೆಯ ಟ್ವೀಟ್‌ನಲ್ಲಿ “ಹೇಗೊ ತಾತ್ಕಾಲಿಕವಾಗಿ ಮಣ್ಣಿನ ಮೂಲಕ ರಸ್ತೆ ಗುಂಡಿಯನ್ನು ಮುಚ್ಚಿದ್ದೇವೆ. ಆದರೆ ಇದನ್ನು ಶಾಶ್ವತವಾಗಿ ಮುಚ್ಚಲು ಕಾಂಕ್ರೀಟ್‌ ಅವಶ್ಯಕತೆಯಿದೆ” ಎಂದು ಬರೆಯುವ ಮೂಲಕ ರಸ್ತೆ ಹೊಂಡ ಮುಚ್ಚಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಫೋಟೊವನ್ನು ಪೊಲೀಸರು ಹಂಚಿಕೊಂಡಿದ್ದಾರೆ.

ಯಾರಾದರೂ ಹೀಗೆ ಅಗೆದು ಹೇಗೆ ಬಿಟ್ಟು ಹೋಗುತ್ತಾರೆ? ಇದು ಇಡೀ ಪ್ರದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿದೆ… ಇದನ್ನು ಮಾಡಿದವರ ಮೇಲೆ ಯಾವ ಕ್ರಮ ಕೈಗೊಳ್ಳುತ್ತೀರಿ ಎಂದು ಪ್ರಶಾಂತ್ ಎಂಬುವವರು ಪ್ರಶ್ನಿಸಿದರೆ, ಜನರ ಆಸ್ತಿಯಾದ ರಸ್ತೆಯನ್ನು ಹಾಳು ಮಾಡಿ, ಓಡಾಡುವ ಜನರ ಜೀವಕ್ಕೆ ಸಂಚಕಾರ ತಂದವರ ಮೇಲೆ ಬೆಂಗಳೂರು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ರುಶಿಕ ಎ.ವಿಯವರು ಒತ್ತಾಯಿಸಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಉತ್ತರಿಸಿರುವ ಕೆ.ಆರ್ ಪುರ ಸಂಚಾರೀ ಪೊಲೀಸರು, “ಇದು bbmp, bwssb ಅಥವಾ bescom ಆಗಿರಬಹುದು, ನಮಗೆ ಖಚಿತ ಮಾಹಿತಿಯಿಲ್ಲ. ನಾವು ಅದನ್ನು ಕಂಡುಕೊಳ್ಳುತ್ತೇವೆ” ಎಂದಿದ್ದಾರೆ.

ನಮ್ಮಲ್ಲಿಯೂ ಇದೇ ಪರಿಸ್ಥಿತಿ ಇದೆ. ವೈಟ್‌ಫೀಲ್ಡ್, ಮಹದೇವಪುರ ಮತ್ತು ಮಾರತಹಳ್ಳಿಗೆ ಸಂಪರ್ಕ ಕಲ್ಪಿಸುವ ಚಿನ್ನಪನಹಳ್ಳಿ ರಸ್ತೆಯಲ್ಲಿಯೂ ಯಾರೋ ಅಗೆದು ಬಿಟ್ಟಿದ್ದಾರೆ. ಒಂದು ತಿಂಗಳಿಗಿಂತ ಹೆಚ್ಚು ಸಮಯ ಕಳೆದರೂ ಯಾರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ದಯವಿಟ್ಟು ಪರಿಶೀಲಿಸಬಹುದೇ? ಎಂದು ಸತೀಶ್ ಕುಮಾರ್ ಎಂಬುವವರು ದೂರಿದ್ದಾರೆ.

ದಯನೀಯ ಆಡಳಿತದ ಸ್ಥಿತಿಯಿದು – ಪ್ರಿಯಾಂಕ್ ಖರ್ಗೆ

“ಬೆಂಗಳೂರು ಟ್ರಾಫಿಕ್ ಪೊಲೀಸರ ಈ ಟ್ವೀಟ್‌ಗಳು ಕರ್ನಾಟಕದ ದಯನೀಯ ಆಡಳಿತದ ಸ್ಥಿತಿಯನ್ನು ಚೆನ್ನಾಗಿ ಪ್ರತಿಫಲಿಸುತ್ತಿವೆ” ಎಂದು ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.

ಕೆ.ಆರ್ ಸಂಚಾರಿ ಪೊಲೀಸರ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿರುವ ಅವರು, “ಪ್ರಿಯ ಮುಖ್ಯಮಂತ್ರಿಗಳೆ ಬಿಬಿಎಂಪಿಯು ನಾಗರಿಕರಿಗೆ ಮಾತ್ರವಲ್ಲ ಇತರ ಸರ್ಕಾರಿ ಸಂಸ್ಥೆಗಳಿಗೆ ಸ್ಪಂದಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇಲಾಖೆಗಳ, ಸಚಿವರ, ಅಧಿಕಾರಿಗಳ ಮದ್ಯೆ ಸಮನ್ವಯತೆ, ಸಾಮರಸ್ಯ ಇಲ್ಲವೆನ್ನಲು ಟ್ರಾಫಿಕ್ ಪೊಲೀಸರು ಬಿಬಿಎಂಪಿ ವಿರುದ್ಧ ವ್ಯಕ್ತಪಡಿಸಿದ ಈ ಆಕ್ರೋಶವೇ ನಿದರ್ಶನ. ರಸ್ತೆ ಗುಂಡಿ ಮುಚ್ಚಲು ಪೊಲೀಸರು ಕೇಳಿದರೂ BBMP ಸ್ಪಂದಿಸಿಲ್ಲ. ರಾಜ್ಯ ನಡೆಸುವುದರಲ್ಲಷ್ಟೇ ಅಲ್ಲ, ತಮ್ಮ ನಗರಾಭಿವೃದ್ಧಿ ಇಲಾಖೆ ನಿರ್ವಹಣೆಯಲ್ಲೂ ಬಸವರಾಜ ಬೊಮ್ಮಾಯಿಯವರು ಸೋತಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಸಚಿವ ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...