Homeಕರ್ನಾಟಕಮುರುಘಾ ಶಿವಮೂರ್ತಿ ಲೈಂಗಿಕ ಹಗರಣದಿಂದ ಹಿಂದೆ ಸರಿಯುವಂತೆ 3 ಕೋಟಿ ಆಮಿಷ!

ಮುರುಘಾ ಶಿವಮೂರ್ತಿ ಲೈಂಗಿಕ ಹಗರಣದಿಂದ ಹಿಂದೆ ಸರಿಯುವಂತೆ 3 ಕೋಟಿ ಆಮಿಷ!

- Advertisement -
- Advertisement -

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಮೇಲಿನ ಪ್ರಕರಣದಿಂದ ಹಿಂದೆ ಸರಿಯುವಂತೆ ಸಚಿವರೊಬ್ಬರು ಕೇಳಿಕೊಂಡಿದ್ದು, ಅದಕ್ಕಾಗಿ ಅವರು ಮೂರು ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಮೈಸೂರಿನ ಒಡನಾಡಿ ಸಂಸ್ಥೆಯ ನಿರ್ದೇಶಕ ಎಂ.ಎಲ್‌ ಪರಶುರಾಮ್‌ ಗಂಭೀರ ಆರೋಪ ಮಾಡಿದ್ದಾರೆ.

ಎಂ.ಎಲ್‌. ಪರಶುರಾಮ್‌‌ ಅವರು ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ವಿದ್ಯಾರ್ಥಿ ಪದಾಧಿಕಾರಿಗಳ ಅಭಿವಿನ್ಯಾಸ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂತ್ರಸ್ತ ಹೆಣ್ಣು ಮಕ್ಕಳ ಪರವಾಗಿ ನಿಲ್ಲಬೇಕಾದವರು ಆರೋಪಿ ಸ್ವಾಮಿ ಪರ ನಿಂತಿದ್ದಾರೆ. ಸಚಿವರೊಬ್ಬರು ‘ಸ್ವಾಮೀಜಿ ವಿಚಾರದಲ್ಲಿ ಸುಮ್ಮನಿದ್ದು ಬಿಡ್ರಪ್ಪ’ ಎನ್ನುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಸುಮಾರು 23 ಹೆಣ್ಣು ಮಕ್ಕಳ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. 25 ವರ್ಷಗಳಿಂದ ಈ ಕೃತ್ಯ ನಡೆಯುತ್ತಿದ್ದು, ಈಗ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯೊಬ್ಬಳು ಸ್ವಾಮೀಜಿ ಕಚ್ಚಿದ ಎದೆಭಾಗವನ್ನು ತೋರಿದಾಗ ತಂದೆ ಸ್ಥಾನದಲ್ಲಿ ನಿಂತು ಮೌನ ವಹಿಸುದಾದರೂ ಹೇಗೆ? ಜೀವವಿರುವವರೆಗೂ ಆ ಹೆಣ್ಣು ಮಕ್ಕಳ ರಕ್ಷಣೆ ಮಾಡುತ್ತೇವೆ” ಎಂದು ಪರಶುರಾಮ್ ಪ್ರತಿಜ್ಞೆ ಮಾಡಿದ್ದಾರೆ.

ಇದನ್ನೂ ಓದಿ: ಮುರುಘಾ ಶಿವಮೂರ್ತಿಗೆ ತಕ್ಕ ಶಿಕ್ಷೆಯಾಗಲಿ: ಬಿ.ಎಸ್‌.ಯಡಿಯೂರಪ್ಪ ಆಗ್ರಹ

“ಲಜ್ಜೆಗೆಟ್ಟ ರಾಜಕೀಯ ನಾಯಕರ ಆಮಿಷಗಳಿಗೆ ಯಾವತ್ತು ಬಲಿಯಾಗುವುದಿಲ್ಲ. ನಾವು ಸತ್ಯದ ಪರ ನಿಂತಿದ್ದೇವೆ. ಸಂತ್ರಸ್ತ ಬಾಲಕಿಯರ ನೋವು ಕೇಳಿ ಆಘಾತವಾಯಿತು. ಅದಕ್ಕಾಗಿ ಹೋರಾಟ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It’s really a great honour to mankind. Keep it up V do appreciate u , to this great job. V do wish and support u in this great venture . May God bless you now and in the days to come. For the sake of poor and downtrodden children v should do atleast this wonderful work. Hat’s off to u.👌👌👌👍👍👍✌️✌️✌️🙏🏻🙏🏻🙏🏻💐💐💐

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...