Homeಕರ್ನಾಟಕಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯ ಮತದಾರರ ಮಾಹಿತಿ ಕದಿಯಲು ಚಿಲುಮೆ ಸಂಸ್ಥೆಯು ಬರೋಬ್ಬರಿ 500 ಸಿಬ್ಬಂದಿಯನ್ನು ಅರೆಕಾಲಿಕ ಅವಧಿಗೆ ನೇಮಿಸಿತ್ತು ಎಂಬ ಆತಂಕಕಾರಿ ಸಂಗತಿಯು ಈಗ ಹೊರಬಿದ್ದಿದೆ.

ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಮತ್ತು ಆತನ ಸಹೋದರ ಕೆಂಪೇಗೌಡ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತದಾರರ ಮಾಹಿತಿ ಕಲೆಹಾಕುತ್ತಿದ್ದ ಸಿಬ್ಬಂದಿಯ ಪಟ್ಟಿಯನ್ನು ಸಿದ್ಧಪಡಿಸಿ, ಪ್ರತಿಯೊಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಕರೆಯುತ್ತಿದ್ದಾರೆ.

ಚಿಲುಮೆ ಸಂಸ್ಥೆಯು ನೇಮಿಸಿಕೊಂಡ 500 ಸಿಬ್ಬಂದಿಗೆ ಡಿಜಿಟಲ್ ಸಮೀಕ್ಷಾ ಆ್ಯಪ್‌ ಬಗ್ಗೆ ತರಬೇತಿ ನೀಡಲಾಗಿತ್ತು. ಜೊತೆಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ, ಮತದಾರರ ಮಾಹಿತಿ ಸಂಗ್ರಹಿಸಲಾಗಿತ್ತು ಎಂಬುದು ತನಿಖೆಯಿಂದ ಬಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಿ, ಮತದಾರರ ಮಾಹಿತಿ ಕಲೆಹಾಕಲು ಸಿಬ್ಬಂದಿ ಬೇಕಾಗಿದ್ದಾರೆ ಎಂದು ಚಿಲುಮೆ ಸಂಸ್ಥೆ ಜಾಹೀರಾತು ನೀಡಿ, ಸಾಕಷ್ಟು ಯುವಜನರನ್ನು ನೇಮಿಸಿಕೊಂಡಿತ್ತು. ಅವರಿಗೆ ದಿನದ ಲೆಕ್ಕದಲ್ಲಿ ಸಂಬಳ ಕೂಡ ನಿಗದಿ ಮಾಡಲಾಗಿತ್ತು.

ಬಿಬಿಎಂಪಿ ಅಧಿಕಾರಿಗಳು ನೇಮಿಸಿರುವ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಎಂಬುದಾಗಿ ಹೇಳಿಕೊಂಡ ಚಿಲುಮೆ ಸಿಬ್ಬಂದಿ ಮನೆಗಳಿಗೆ ತೆರಳಿ, ಮತದಾರರ ಹೆಸರು, ವಿಳಾಸ, ಜಾತಿ, ಉಪಜಾತಿ, ಕುಟುಂಬಸ್ಥರ ಮಾಹಿತಿ, ಮೊಬೈಲ್‌ ಸಂಖ್ಯೆ, ಬೆಂಬಲಿಸುವ ಪಕ್ಷ, ನೆಚ್ಚಿನ ರಾಜಕೀಯ ನಾಯಕ… ಹೀಗೆ ಹಲವು ಮಾಹಿತಿ ಪಡೆದು, ಅದನ್ನೇ ಆ್ಯಪ್‌ನಲ್ಲಿ ದಾಖಲಿಸಿದ್ದರು.

ಈ ಕೃತ್ಯಕ್ಕೆ ಬಿಬಿಎಂಪಿ ಅಧಿಕಾರಿಗಳು ಸಹಕರಿಸಿದ್ದರು ಎಂಬುದು ಬಯಲಾಗಿದ್ದು, ಆ ಅಧಿಕಾರಿಗಳನ್ನು ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಒಂದೊಂದು ಕಚೇರಿ 500 ಸಿಬ್ಬಂದಿಯ ತಂಡ ಕಟ್ಟಿಕೊಂಡಿದ್ದ ಚಿಲುಮೆ ಸಂಸ್ಥೆ ಮಹದೇವಪುರ, ಚಿಕ್ಕಪೇಟೆ ಹಾಗೂ ಇತರೆ ವಿಧಾನಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದೆ. ಆಯಾ ಕ್ಷೇತ್ರದಲ್ಲಿ ಬಾಡಿಗೆಗೆ ಕಟ್ಟಡ ಪಡೆದು, ಸಿಬ್ಬಂದಿಗೆ ಕೆಲಸ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಈ ಎಲ್ಲ ಕಚೇರಿಗಳನ್ನು ಪೊಲೀಸರು ಪತ್ತೆ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಟಿ ಕೋಟಿ ಸಂಪಾದನೆ ಆರೋಪಿ ಸ್ಥಾನದಲ್ಲಿರುವ ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಸಂಗ್ರಹಿಸುವ ಮೂಲಕವೇ ಕೋಟಿ ಕೋಟಿ ಸಂಪಾದನೆ ಮಾಡಿದೆ ಎನ್ನಲಾಗುತ್ತಿದೆ. ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ರಾಜಕಾರಣಿಗಳ ಜೊತೆ ಒಡನಾಟ ಹೊಂದಿದ್ದು, ಚುನಾವಣೆ ನಿರ್ವಹಣೆ ಹೆಸರಿನಲ್ಲಿ ಹಲವು ಸೇವೆಗಳನ್ನು ನೀಡುವುದರ ಜೊತೆಗೆ ಚುನಾವಣೆ ಕಾರ್ಯಕ್ರಮಗಳಿಗೆ ಜನರನ್ನು ಕಳುಹಿಸುವ ಕೆಲಸ ಕೂಡ ಮಾಡುತ್ತಿದ್ದರು. ಈ ಕೆಲಸಕ್ಕಾಗಿ ಸಂಬಂಧಪಟ್ಟ ರಾಜಕಾರಣಿಗಳಿಂದ ಲಕ್ಷ ಲಕ್ಷ ಹಣ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಧಿಕಾರಿಗಳ ಅಮಾನತು: ಹಗರಣ ಬೆಳಕಿಗೆ ಬಂದಂತೆ ಒಂದೊಂದೇ ಸಂಗತಿಗಳು ಹೊರಗೆ ಬರುತ್ತಿವೆ. ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ರಂಗಪ್ಪ ಮತ್ತು ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಅಮಾನತು ಮಾಡಿ, ಕೇಂದ್ರ ಚುನಾವಣೆ ಆಯೋಗವು ತನಿಖೆಗೆ ನ.25ರ ಶುಕ್ರವಾರ ಆದೇಶಿಸಿತ್ತು.

ಇದನ್ನೂ ಓದಿರಿ: ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣೆ ಆಯೋಗ ಮಧ್ಯೆ ಪ್ರವೇಶ ಮಾಡಿದ್ದು, ಕರ್ನಾಟಕ ಚುನಾವಣೆ ಆಯೋಗಕ್ಕೆ ಚಾಟಿ ಬೀಸಿದೆ. ಬಿಬಿಎಂಪಿ ಹೊರತುಪಡಿಸಿ ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆಯೂ ಸೂಚಿಸಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ. 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು. ಅಲ್ಲದೇ ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರ ಉಸ್ತುವಾರಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯುಕ್ತರಿಗೆ ಕೇಂದ್ರ ಚುನಾವಣೆ ಆಯೋಗ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...