Homeಮುಖಪುಟಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆಂದ ರಾಮದೇವ್: ಶಿವಸೇನೆ, ಮಹಿಳಾ ಆಯೋಗ ಖಂಡನೆ

ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆಂದ ರಾಮದೇವ್: ಶಿವಸೇನೆ, ಮಹಿಳಾ ಆಯೋಗ ಖಂಡನೆ

- Advertisement -
- Advertisement -

“ಮಹಿಳೆಯರು ಏನನ್ನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ಪತಂಜಲಿ ಸಂಸ್ಥೆಯ ಬಾಬಾ ರಾಮದೇವ್ ಹೇಳಿರುವುದು ಆಕ್ರೋಶಕ್ಕೆ ಗುರಿಯಾಗಿದೆ.

“ಮಹಿಳೆಯರು ಸೀರೆಯಲ್ಲಿ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನೂ ಧರಿಸದಿದ್ದರೂ ಚೆನ್ನಾಗಿ ಕಾಣುತ್ತಾರೆ” ಎಂದು ರಾಮದೇವ್ ಹೇಳಿದ್ದು, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಈ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಥಾಣೆಯಲ್ಲಿ ನಡೆದ ಯೋಗ ಶಿಬಿರದಲ್ಲಿ ಮಾತನಾಡಿದ ರಾಮ್‌ದೇವ್ ಅವರು, “ಸೀರೆ, ಸಲ್ವಾರ್ ಸೂಟ್‌ಗಳಲ್ಲಿ ಮತ್ತು ಏನನ್ನೂ ಧರಿಸದಿದ್ದರೂ ಮಹಿಳೆಯರು ಚೆನ್ನಾಗಿ ಕಾಣುತ್ತಾರೆ” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಈ ಶಿಬಿರದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನಾವೀಸ್ ಉಪಸ್ಥಿತರಿದ್ದರು. ರಾಮ್‌ದೇವ್ ಅವರ ಈ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಈ ವಿಡಿಯೋವನ್ನು ಶೇರ್ ಮಾಡಿದ್ದು, ಬಾಬಾ ರಾಮದೇವ್ ಹೇಳಿಕೆಯನ್ನು ಖಂಡಿಸಿದ್ದಾರೆ. ಮಹಿಳೆಯರನ್ನು ಅವಮಾನಿಸುವ ಹೇಳಿಕೆಯ ಕಾರಣ ಅವರು ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯ ಮುಂದೆ ಸ್ವಾಮಿ ರಾಮ್‌ದೇವ್ ಅವರು ಮಹಿಳೆಯರ ಬಗ್ಗೆ ನೀಡಿದ ಹೇಳಿಕೆಗಳು ಅಸಭ್ಯ ಮತ್ತು ಖಂಡನೀಯ. ಈ ಹೇಳಿಕೆಯಿಂದ ಎಲ್ಲಾ ಮಹಿಳೆಯರಿಗೆ ನೋವಾಗಿದೆ, ಬಾಬಾ ರಾಮದೇವ್‌ ಅವರು ದೇಶದ ಎದುರು ಕ್ಷಮೆಯಾಚಿಸಬೇಕು!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಸಂಸದ ಶ್ರೀಕಾಂತ್ ಶಿಂಧೆ ಕೂಡ ಉಪಸ್ಥಿತರಿದ್ದರು.

ಉದ್ಧವ್ ಬಾಳಾಸಾಹೇಬ್ ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಕೂಡ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. “ಈ ರೀತಿಯ ಹೇಳಿಕೆ ನೀಡಿದಾಗ ಅಮೃತಾ ಫಡ್ನವಿಸ್ ಏಕೆ ಪ್ರತಿಭಟಿಸಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ರಾಜ್ಯಪಾಲರು ಶಿವಾಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದಾಗ, ಕರ್ನಾಟಕದ ಮುಖ್ಯಮಂತ್ರಿಗಳು ಮಹಾರಾಷ್ಟ್ರದ ಗ್ರಾಮಗಳನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದಾಗ ಮತ್ತು ಈಗ ಬಿಜೆಪಿ ಪ್ರಚಾರಕ ರಾಮದೇವ್ ಮಹಿಳೆಯರನ್ನು ಅವಮಾನಿಸಿದಾಗ ಸರ್ಕಾರ ಮೌನವಾಗಿದೆ. ಸರ್ಕಾರ ದೆಹಲಿಗೆ ಅಡಮಾನವಿಟ್ಟುಕೊಂಡಿದೆಯೇ?” ಎಂದು ಸಂಜಯ್ ರಾವುತ್ ಕೇಳಿದ್ದಾರೆ.

ಇದನ್ನೂ ಓದಿರಿ: ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

“ಸಮಾರಂಭಕ್ಕೆ ಅನೇಕ ಮಹಿಳೆಯರು ಸೀರೆಗಳನ್ನು ತಂದರು. ಆದರೆ ಒಂದರ ಹಿಂದೆ ಒಂದು ಕಾರ್ಯಕ್ರಮಗಳು ಇದ್ದ ಕಾರಣದಿಂದಾಗಿ ಅವುಗಳನ್ನು ಧರಿಸಲು ಸಮಯ ಸಿಗಲಿಲ್ಲ” ಎನ್ನುತ್ತಾ ರಾಮದೇವ್‌, “ನೀವು ಸೀರೆಯಲ್ಲಿ ಚೆನ್ನಾಗಿ ಕಾಣುತ್ತೀರಿ, ಅಮೃತಾಜಿಯವರಂತೆ ಸಲ್ವಾರ್ ಸೂಟ್‌ಗಳಲ್ಲಿಯೂ ಚೆನ್ನಾಗಿ ಕಾಣುತ್ತೀರಿ ಮತ್ತು ನನ್ನಂತೆ ನೀವು ಏನೂ ಧರಿಸದಿದ್ದರೆ ಚೆನ್ನಾಗಿ ಕಾಣುತ್ತೀರಿ…” ಎಂದಿದ್ದರು.

ಈ ಹೇಳಿಕೆ ಕುರಿತು ಆಘಾತ ವ್ಯಕ್ತಪಡಿಸಿರುವ ವಿದರ್ಭದ ರೈತ ನಾಯಕಿ ಅಪರ್ಣಾ ಮಾಲಿಕರ್, “ರಾಮ್‌ದೇವ್ ಅವರ ‘ಕೊಳಕು ಮನಸ್ಸಿನಲ್ಲಿ’ ಏನು ನಡೆಯುತ್ತಿವೆ ಎಂಬುದನ್ನು ಇದು ಬಹಿರಂಗಪಡಿಸಿದೆ. ರಾಮದೇವ್‌ ಮುಂದೆ ಹೋಗುವ ಎಲ್ಲ ಮಹಿಳೆಯರು ಹೆಚ್ಚು ಜಾಗರೂಕರಾಗಿರಿ” ಎಂದು ಎಚ್ಚರಿಸಿದ್ದಾರೆ.

ಎಂಎಲ್‌ಸಿ ಡಾ. ಮನೀಶಾ ಕಯಾಂಡೆ ಪ್ರತಿಕ್ರಿಯಿಸಿ, “ಅಪರ್ಣಾ ಅವರು ಆತನಿಗೆ ಒದ್ದು ಕಾರ್ಯಕ್ರಮದಿಂದ ಹೊರನಡೆಯಬೇಕಿತ್ತು. ದುರಾದೃಷ್ಟವಶಾತ್ ಆಕೆ ನಗುತ್ತಿದ್ದರು, ರಾಮ್‌ದೇವ್‌ನ ಹೇಳಿಕೆಗಳನ್ನು ಆನಂದಿಸುತ್ತಿದ್ದರು. ರಾಮದೇವ್‌ ಹೆಣ್ತನಕ್ಕೆ ಗೌರವವನ್ನು ನೀಡುತ್ತಿದ್ದಾರೆಂಬಂತೆ ಸುಮ್ಮನಿದ್ದರು” ಎಂದು ಬೇಸರ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...