Homeಕರ್ನಾಟಕಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಪಕ್ಷಾತೀತವಾಗಿ ಒಗ್ಗೂಡಿದ ಸಮುದಾಯದ ನಾಯಕರು

ಒಕ್ಕಲಿಗರ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ: ಪಕ್ಷಾತೀತವಾಗಿ ಒಗ್ಗೂಡಿದ ಸಮುದಾಯದ ನಾಯಕರು

- Advertisement -
- Advertisement -

ಜನಸಂಖ್ಯಾಗನುಗುಣವಾಗಿ ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಒಕ್ಕಲಿಗ ಸಮುದಾಯ ಹೋರಾಟದ ಸೂಚನೆ ನೀಡಿದೆ. ಈ ಕುರಿತು ಬೆಂಗಳೂರಿನಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ.

ಒಕ್ಕಲಿಗರ ಸಂಘದ ಆವರಣದಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಆದಿಚುಂಚನಗಿರಿ ಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನಾಯಕರು ಪಾಲ್ಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಒಕ್ಕಲಿಗ ಉಪ ಪಂಗಡಗಳನ್ನು ಒಳಗೊಂಡ ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು’ ಎಂದು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಆಗ್ರಹಿಸಿದೆ. ಕಾಲಮಿತಿಯೊಳಗೆ ಬೇಡಿಕೆ ಈಡೇರಿಸದಿದ್ದರೆ ರಾಜ್ಯವ್ಯಾಪಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಒಕ್ಕಲಿಗರೆಲ್ಲರೂ ಪಕ್ಷಭೇದ ಮರೆತು, ವೈಷಮ್ಯಗಳನ್ನು ಪಕ್ಕಕ್ಕಿಟ್ಟು ಪೂಜ್ಯರ ನಾಯಕತ್ವದಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಮಾತ್ರ ಯಶಸ್ಸು ಕಾಣಲು ಸಾಧ್ಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಕ್ಕಲಿಗರ ಮೀಸಲಾತಿ ವಿಚಾರವಾಗಿ ಎಲ್ಲರ ಜತೆ ಚರ್ಚಿಸಿ ತೀರ್ಮಾನಕ್ಕೆ ಬರಲು ಈ ಸಭೆ ನಡೆಸಲಾಗುತ್ತಿದೆ. ಈ ಸಭೆ ನೋಡಿದ ನಂತರ ನನಗೆ ಒಂದು ಮಾತು ನೆನಪಾಗುತ್ತಿದೆ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಹೋರಾಟ ಮಾಡುವುದು ಯಶಸ್ಸು” ಎಂದಿದ್ದಾರೆ.

“ನಾವು ಹುಟ್ಟುವಾಗ ಇಂತಹುದೆ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಲ್ಲ. ಹುಟ್ಟುವಾಗ ಉಸಿರು ಇರುತ್ತದೆ, ಆದರೆ ಹೆಸರು ಇರುವುದಿಲ್ಲ. ಸತ್ತಾಗ ಹೆಸರು ಇರುತ್ತದೆ, ಆದರೆ ಉಸಿರೇ ಇರುವುದಿಲ್ಲ. ಹುಟ್ಟು ಸಾವಿನ ಮಧ್ಯೆ ನಾವು ನಮ್ಮ ಸಮಾಜಕ್ಕೆ ಏನಾದರೂ ಕೊಡುಗೆ ಕೊಟ್ಟು ಹೋಗಬೇಕು” ಎಂದು ಆಶಿಸಿದ್ದಾರೆ.

“ನಮ್ಮ ತಂದೆ, ತಾಯಿಗಳಿಂದ ನಾವು ಒಕ್ಕಲಿಗ ಜಾತಿಯಲ್ಲಿ ಹುಟ್ಟಿ, ಬೆಳೆದು, ಸಂಘಟಿತರಾಗಿದ್ದೇವೆ. ಈ ವೇದಿಕೆಯಲ್ಲಿರುವ ನಮ್ಮೆಲ್ಲರನ್ನೂ ಸಮಾಜ ಹಾಗೂ ನಮ್ಮ ಪಕ್ಷದಲ್ಲಿ ಗುರುತಿಸುವುದೇ ಒಕ್ಕಲಿಗರು ಎಂದು. ನನ್ನನ್ನು ಕಾಂಗ್ರೆಸ್ ಪಕ್ಷ ರಾಜ್ಯದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಎಸ್.ಎಮ್. ಕೃಷ್ಣ ಅವರ ನಂತರ ನನ್ನನ್ನು ಈ ಸ್ಥಾನದಲ್ಲಿ ಕೂರಿಸಿದ್ದಾರೆ. ನನ್ನ ಸಂಘಟನೆಯ ಇತಿಹಾಸ ಒಂದು ಕಡೆಯಾದರೆ, ನಾನು ಒಕ್ಕಲಿಗ ಸಮುದಾಯದವನು ಎಂಬ ಕಾರಣಕ್ಕೆ ಆಯ್ಕೆ ಮಾಡಿರುವುದೂ ಮತ್ತೊಂದು ಸತ್ಯ” ಎಂದು ಹೇಳಿದ್ದಾರೆ.

“ಆರ್. ಅಶೋಕ್ ಸೇರಿದಂತೆ ಇಲ್ಲಿರುವ ಮಂತ್ರಿಗಳು ಈ ಸ್ಥಾನಕ್ಕೆ ಬರಲು ಕಾರಣ ಅವರು ಒಕ್ಕಲಿಗ ಸಮಾಜದ ಪ್ರತಿನಿಧಿಯಾಗಿರುವುದಕ್ಕೆ. ಇದನ್ನು ನಾವೆಲ್ಲ ಗಮನದಲ್ಲಿಟ್ಟುಕೊಳ್ಳಬೇಕು. ನಾವು ನಮ್ಮ ಹಕ್ಕು ಕೇಳಲು ಇಲ್ಲಿ ನಿಂತಿದ್ದೇವೆ. ಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶ ಬಂದ ನಂತರ, ನಮ್ಮ ಸಮಾಜದ ಕಾನೂನು ತಜ್ಞರು ಅಧ್ಯಯನ ಮಾಡಿ, ಸ್ವಾಮೀಜಿಗಳ ಜತೆ ಚರ್ಚೆ ಮಾಡಿದ್ದಾರೆ. ನಾವು ಬೇರೆಯವರ ಹಕ್ಕನ್ನು ಕೇಳುತ್ತಿಲ್ಲ. ಈ ಸಮಾಜದ ಜನಸಂಖ್ಯೆ ಎಷ್ಟಿದೆಯೋ ಅದರ ಆಧಾರದ ಮೇಲೆ ನಮಗೆ ಮೀಸಲಾತಿ ನೀಡಿ ಎಂದು ಕೇಳುತ್ತಿದ್ದೇವೆ. ನಾವು ಯಾರಿಗೂ ತೊಂದರೆ ಮಾಡುವವರಲ್ಲ” ಎಂದಿದ್ದಾರೆ.

ಸಭೆಯಲ್ಲಿದ್ದ ಕಂದಾಯ ಸಚಿವ ಆರ್‌. ಅಶೋಕ ಅವರಿಗೆ ನಿರ್ಮಲಾನಂದನಾಥ ಸ್ವಾಮೀಜಿ ಹಕ್ಕೊತ್ತಾಯದ ಮನವಿಯನ್ನು ನೀಡಿದರು. ‘ಮೀಸಲಾತಿ ಪ್ರಮಾಣ ಹೆಚ್ಚಿಸುವುದೂ ಸೇರಿದಂತೆ ಒಕ್ಕಲಿಗ ಸಮುದಾಯದ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸುತ್ತೇನೆ. ಸಮುದಾಯದ ಪರವಾಗಿ ನಿಲ್ಲುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಅಶೋಕ್‌ ಪ್ರತಿಕ್ರಿಯಿಸಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾ ನಂದನಾಥ ಸ್ವಾಮೀಜಿ ಮಾತನಾಡಿ, “ಈ ಸಭೆಯಲ್ಲಿ ದೇವೇಗೌಡರು, ಕುಮಾರಸ್ವಾಮಿ ಇಲ್ಲ ಎಂದು ಯಾರೂ ಅಂದುಕೊಳ್ಳಬಾರದು. ಪಂಚರತ್ನ ಯಾತ್ರೆಯಲ್ಲಿರುವ ಕುಮಾರಸ್ವಾಮಿ, ನನ್ನ ಜೊತೆ 3–4 ಬಾರಿ ಮಾತನಾಡಿದ್ದಾರೆ. ದೇವೇಗೌಡರ ಆರೋಗ್ಯ ಇತ್ತೀಚೆಗೆ ಸ್ವಲ್ಪ ಏರುಪೇರಾಗುತ್ತಿದೆ. ಅವರು ಕೂಡಾ ಪತ್ರ ಬರೆದು ತಮ್ಮ ಬೆಂಬಲವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಸಿಎಂ ಕಚೇರಿಯ ಮಹತ್ವದ ಕಡತಗಳನ್ನು ಇಲಿ, ಹೆಗ್ಗಣ ಕಚ್ಚಿಕೊಂಡು ಹೋದವೆ?: ಕಾಂಗ್ರೆಸ್ ಪ್ರಶ್ನೆ

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ ಮಾತನಾಡಿ, “ರಾಜ್ಯದಲ್ಲಿ ಒಕ್ಕಲಿಗರ ಜನಸಂಖ್ಯೆ ಶೇ 16ರಷ್ಟಿದೆ. ಆದರೆ, ಮೀಸಲಾತಿ ಶೇ 4ರಷ್ಟು ಮಾತ್ರ. ನಾಡಿಗೇ ಆಹಾರ ಭದ್ರತೆ ಕೊಟ್ಟಿರುವ ಸಮಾಜ ನಮ್ಮದು. ನಮ್ಮ ಸಮುದಾಯದ ಜನ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನಾಂಗದ ಹಿತದೃಷ್ಟಿಯಿಂದ ಸರ್ಕಾರ ನಮಗೆ ಮೀಸಲಾತಿ ಹೆಚ್ಚಿಸಬೇಕು. ‌ಶೇ 15ರವರೆಗೂ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕು” ಎಂದು ಒತ್ತಾಯಿಸಿದರು.

ಸಂಸದ ಡಿ.ವಿ.ಸದಾನಂದಗೌಡ ಮಾತನಾಡಿ, “ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರಸರ್ಕಾರ ಘೋಷಿಸಿರುವ ಶೇ 10 ಮೀಸಲಾತಿ ನಮ್ಮ ಸಮುದಾಯಕ್ಕೆ ಸಿಗದೇ ಅನ್ಯಾಯ ಆಗಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ದೇವೇಗೌಡರ ನೇತೃತ್ವದಲ್ಲಿ, ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವಂತೆ ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...