Homeಮುಖಪುಟಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

ಇಂದು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌ ಚುನಾವಣೆ: ಎಎಪಿ, ಬಿಜೆಪಿ ನಡುವೆ ತೀವ್ರ ಸ್ಪರ್ಧೆ

- Advertisement -
- Advertisement -

ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ (ಎಂಸಿಡಿ) ಚುನಾವಣೆ ಇಂದು ನಡೆಯುತ್ತಿದ್ದು ಕಸದ ಸಮಸ್ಯೆಯನ್ನು ಗುರಿಯಾಗಿಸಿಕೊಂಡಿರುವ ಎಎಪಿ, ಎಂಸಿಡಿ ಮೇಲೆ ಕಣ್ಣಿಟ್ಟಿದೆ. ಆಡಳಿತಾರೂಢ ಬಿಜೆಪಿ ತನ್ನ ಅಧಿಕಾರವನ್ನು ವಿಸ್ತರಿಸುವ ವಿಶ್ವಾಸದಲ್ಲಿದ್ದರೆ, ಕಾಂಗ್ರೆಸ್ ಸ್ವಲ್ಪಮಟ್ಟಿಗೆ ಮತ್ತೆ ಗೆಲ್ಲುವ ನಿರೀಕ್ಷೆಯಲ್ಲಿದೆ.

ಸುಮಾರು 1.5 ಕೋಟಿ ಜನರು 250 ವಾರ್ಡ್‌ಗಳಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. 2011ರಲ್ಲಿ ಪ್ರದೇಶವಾರು ರೂಪುಗೊಂಡ ಮೂರು ಎಂಸಿಡಿಗಳನ್ನು ಮರುಸಂಘಟಿಸಲಾಯಿತು. ಈ ವರ್ಷದ ಆರಂಭದಲ್ಲಿ, ಬಿಜೆಪಿಯ ಅವಧಿ ಮುಗಿದ ಬಳಿಕ ವಾರ್ಡ್‌ಗಳನ್ನು ಮರುವಿನ್ಯಾಸಗೊಳಿಸಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5.30ಕ್ಕೆ ಮತದಾನ ಕೇಂದ್ರದ ಗೇಟ್‌ಗಳನ್ನು ಮುಚ್ಚಲಾಗುತ್ತದೆ. ನಂತರ ಒಳಗೆ ಇರುವವರು ಮಾತ್ರ ಮತ ಚಲಾಯಿಸಬಹುದು. ಮೆಟ್ರೋ ರೈಲು ಸೇವೆಗಳು ಸಾಮಾನ್ಯ ದಿನಗಳಿಗಿಂತ ಎರಡು ಗಂಟೆ ಮುಂಚಿತವಾಗಿ (4 ಗಂಟೆಗೆ) ಸೇವೆ ಆರಂಭಿಸಿತು. ಡಿಸೆಂಬರ್ 7ರಂದು ಫಲಿತಾಂಶ ಹೊರಬೀಳಲಿದೆ. ಅರವತ್ತೆಂಟು ಮಾದರಿ ಮತಗಟ್ಟೆಗಳು ಮತ್ತು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ಹಲವು ಪಿಂಕ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

1,300 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ದೆಹಲಿಯಲ್ಲಿ ಅಧಿಕಾರದಲ್ಲಿರುವ ಎಎಪಿ ಹಾಗೂ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಿವೆ. ಎಎಪಿ ಉದಯವಾದಾಗಿನಿಂದ ದೆಹಲಿಯಲ್ಲಿ ತನ್ನ ನೆಲೆಯನ್ನು ಕಂಡುಕೊಳ್ಳಲು ಹೆಣಗಾಡುತ್ತಿರುವ ಕಾಂಗ್ರೆಸ್, 247 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ತಾಂತ್ರಿಕ ಕಾರಣಗಳಿಂದಾಗಿ ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ಕಳೆದ 24 ವರ್ಷಗಳಲ್ಲಿ ಬಿಜೆಪಿ ದೆಹಲಿಯಲ್ಲಿ ರಾಜ್ಯ ಸರ್ಕಾರವನ್ನು ರಚಿಸದಿದ್ದರೂ, ಎಂಸಿಡಿ ಮೇಲೆ ನಿಯಂತ್ರಣ ಸಾಧಿಸಿದೆ. 2015ರ ಅಸೆಂಬ್ಲಿ ಚುನಾವಣೆಯಲ್ಲಿ ಎಎಪಿ 70 ಸ್ಥಾನಗಳಲ್ಲಿ ದಾಖಲೆಯ 67 ಸ್ಥಾನಗಳನ್ನು ಗೆದ್ದ ನಂತರವೂ, ಅಂದರೆ ಎರಡು ವರ್ಷಗಳ ಬಳಿಕ ಬಿಜೆಪಿ ತನ್ನ 272 ಸ್ಥಾನಗಳಲ್ಲಿ 181 ಸ್ಥಾನಗಳನ್ನು ಗೆಲ್ಲುವ ಮೂಲಕ ಎಂಸಿಡಿ ಮೇಲೆ ಹಿಡಿತವನ್ನು ಉಳಿಸಿಕೊಂಡಿದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್‌‌ನ ಈ ಹಿಂದಿನ ಚುನಾವಣೆಯಲ್ಲಿ ಎಎಪಿ 48 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 30 ಸ್ಥಾನಗಳಲ್ಲಿ ಗೆದ್ದಿದೆ.

ಇದನ್ನೂ ಓದಿರಿ: ‘ಬಿಜೆಪಿ ರೌಡಿ ಮೋರ್ಚಾ’ ವೆಬ್‌ಸೈಟ್‌ ಓಪನ್‌: ಪ್ರತಿಪಕ್ಷದಿಂದ ವಿನೂತನ ದಾಳಿ!

ಎಎಪಿ ಕಳೆದ ವರ್ಷದ ಆರಂಭದಿಂದಲೇ ತಯಾರಿ ನಡೆಸಿದೆ. ಕಸದ ಸಮಸ್ಯೆಯ ಮೇಲೆ ನೇರವಾಗಿ ತನ್ನ ಗುರಿ ಇಟ್ಟುಕೊಂಡಿದೆ. ‘ಕೇಜ್ರಿವಾಲ್ ಸರ್ಕಾರ, ಕೇಜ್ರಿವಾಲ್ ಕಾರ್ಪೊರೇಟರ್’ ಎಂಬ ಘೋಷಣೆಯನ್ನು ಎಎಪಿ ಮಾಡಿದೆ. ಈ ಮೂಲಕ ಬಿಜೆಪಿಯ ‘ಡಬ್ಬಲ್ ಇಂಜಿನ್ ಸರ್ಕಾರ’ ಘೋಷಣೆಗೆ ಎಎಪಿ ಪ್ರತಿ ಅಸ್ತ್ರ ಪ್ರಯೋಗಿಸಿದೆ.

ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಎಎಪಿ ಸಚಿವರ ಮೇಲೆ ಬಿಜೆಪಿ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದೆ. ಜನರಿಗೆ ವಸತಿ ಭರವಸೆಗಳನ್ನು ನೀಡಿದೆ. ಬಂಧಿತ ಸಚಿವ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿ ವಿಶೇಷ ಚಿಕಿತ್ಸೆ ಪಡೆದಿರುವ ಸಿಸಿಟಿವಿ ವಿಡಿಯೋಗಳು ಹೊರಬಿದ್ದಿವೆ. ಎಎಪಿಯನ್ನು ಕೆಣಕಲು ಕಾಂಗ್ರೆಸ್ ಕೂಡ ಇದನ್ನು ಬಳಸಿಕೊಂಡಿದೆ. ಒಂದಿಷ್ಟು ಪ್ರಭಾವ ಬೀರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. 2019ರಲ್ಲಿ ಶೀಲಾ ದೀಕ್ಷಿತ್ ಅವರ ಮರಣದ ನಂತರ ದೆಹಲಿಯಲ್ಲಿ ತನ್ನ ಇತಿಹಾಸ ಮರುಕಳಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಪಕ್ಷವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...